Home ಮಂಡ್ಯ Cauvery Water to Tamil Nadu: ಮಂಡ್ಯದಲ್ಲಿ ಬಿಜೆಪಿಯಿಂದ ಪ್ರತಿಭಟನೆ

Cauvery Water to Tamil Nadu: ಮಂಡ್ಯದಲ್ಲಿ ಬಿಜೆಪಿಯಿಂದ ಪ್ರತಿಭಟನೆ

20
0
Cauvery Water to Tamil Nadu: BJP Protest in Mandya
Cauvery Water to Tamil Nadu: BJP Protest in Mandya

ಮಂಡ್ಯ:

ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ಕಾವೇರಿ ಕೊಳ್ಳದ ರೈತರಿಗೆ ಅನ್ಯಾಯ ಮಾಡಿರುವ ರಾಜ್ಯ ಸರ್ಕಾರದ ನಡೆ ವಿರೋಧಿಸಿ ರಾಜ್ಯ ಬಿಜೆಪಿ ಮಂಡ್ಯದ ಸಂಜಯ್‌ ವೃತ್ತದಲ್ಲಿ ಸೋಮವಾರ ತೀವ್ರವಾಗಿ ಪ್ರತಿಭಟನೆ ನಡೆಸುತ್ತಿದೆ.

ಸಂಸದೆ ಸುಮಲತಾ ಅವರ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗಿದ್ದು, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದಾರೆ.

ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಖಂಡನೀಯ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ರಾಜ್ಯದಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಯಾರನ್ನೂ ಕೇಳದೆ ಈಗಾಗಲೇ 8 ಟಿಎಂಸಿ ಅಡಿ ನೀರು ಹರಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

LEAVE A REPLY

Please enter your comment!
Please enter your name here