ಚಾಮರಾಜನಗರ (ಹನೂರು):
ಕಾವೇರಿ ನೀರು ನಿಯಂತ್ರಣ ಸಮಿತಿಯು 3000 ಕ್ಯೂಸೆಕ್ ನೀರನ್ನು ಹರಿಸಲು ಆದೇಶಿಸಿದೆ. ಈ ಬಗ್ಗೆ ಕಾನೂನು ತಂಡದೊಂದಿಗೆ ಚರ್ಚಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಕಾನೂನು ತಂಡ ಸಲಹೆ ನೀಡಿದೆ. ನೀರು ಬಿಡಲು ನಮ್ಮ ಬಳಿ ನೀರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಶ್ರೀ ಮಲೈ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರಿಗೆ ಇಂದು ಪ್ರತಿಕ್ರಿಯೆ ನೀಡಿದರು. ಇಂದು ಮಹದೇಶ್ವರ ದೇವಸ್ಥಾನದ ಪ್ರಾಧಿಕಾರದ ಸಭೆಯಿದ್ದು, ಪ್ರಾಧಿಕಾರದ ಅಧ್ಯಕ್ಷನಾಗಿ ಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಾಗಿ ತಿಳಿಸಿದರು.
ನಿನ್ನೆ ಅಷ್ಟೇ ತಮಿಳುನಾಡುಗೆ 3000 ಕಿಸೆಕ್ಸ್ ನೀರ್ ಹರಿಸಲು ಆದೇಶ ನೀಡಲಾಗಿತ್ತು. ಸಮಿತಿ ಯ ತೀರ್ಪಿನ ಕುರಿತು ನಮ್ಮ ಕಾನೂನು ತಂಡದ ತಜ್ಞರೊಂದಿಗೆ ಕಾನೂನಾತ್ಮಕವಾಗಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಅವರು ಹೇಳಿದರು.
ಕಾವೇರಿ ನೀರು ನಿಯಂತ್ರಣ ಸಮಿತಿಯು 15 ದಿನಗಳವರೆಗೆ ಪುನಃ 3000 ಕ್ಯೂಸೆಕ್ಸ್ ನೀರು ಬಿಡಬೇಕೆಂದು ಆದೇಶ ಮಾಡಿದ್ದು, ಸೆಪ್ಟೆಂಬರ್ 27 ರವರೆಗೆ ಆದೇಶ ಜಾರಿಯಲಿದೆ.