Home ಬೆಂಗಳೂರು ನಗರ Cauvery Water to Tamil Nadu: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ತುರ್ತು ಸಭೆ, ತೀವ್ರ...

Cauvery Water to Tamil Nadu: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ತುರ್ತು ಸಭೆ, ತೀವ್ರ ಪ್ರತಿಭಟನೆ

33
0
Cauvery Water to Tamil Nadu: Emergency All Party Meeting led by Chief Minister Siddaramaiah today
Cauvery Water to Tamil Nadu: Emergency All Party Meeting led by Chief Minister Siddaramaiah today

ಬೆಂಗಳೂರು:

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರ ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಈ ವರ್ಷ ಕೈಕೊಟ್ಟ ಮುಂಗಾರಿನ ನಡುವೆ ತಮಿಳು ನಾಡಿಗೆ ಮತ್ತೆ ಐದು ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿರುವುದು ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯಲಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮಧ್ಯಾಹ್ನ ಸಭೆ ಕರೆಯಲಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು, ಎಲ್ಲ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯ ಸಭಾ ಸದಸ್ಯರುಗಳು ಸಭೆಯಲ್ಲಿ ಭಾವಹಿಸಲಿದ್ದಾರೆ.

ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಮತ್ತೆ 15 ದಿನ 5,000 ಕ್ಯೂಸೆಕ್ ನೀರು ಬಿಡಬೇಕೆಂದು ನಿನ್ನೆ ಮಂಗಳವಾರ ಕರ್ನಾಟಕಕ್ಕೆ ಆದೇಶ ನೀಡಿತ್ತು. ಇದರಿಂದ ಕಾವೇರಿ ತೀರದ ರೈತರಿಗೆ ಆಘಾತವಾಗಿದೆ. ರೈತರು ಸರ್ಕಾರದ ವಿರುದ್ಧ ಇನ್ನಷ್ಟು ಆಕ್ರೋಶಗೊಂಡಿದ್ದು, ರಸ್ತೆಗೆ ಇಳಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಈ ಬಗ್ಗೆ ನಿನ್ನೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕರ್ನಾಟಕದಲ್ಲಿ ಸಮರ್ಪಕ ಮಳೆಯಾಗದ ಕಾರಣ ರಾಜ್ಯದ ಡ್ಯಾಂ ಗಳಲ್ಲಿ ಮತ್ತು ನದಿ ಜಲಾನಯನ ಪ್ರದೇಶಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿಲ್ಲ. ಹೀಗಾಗಿ ನೆರೆಯ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಲು ರಾಜ್ಯಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದರು.

LEAVE A REPLY

Please enter your comment!
Please enter your name here