HD Kumaraswamy | Former Chief Minister HD Kumaraswamy welcomed the Women's Reservation Bill, Bill was presented when Deve Gowda was the Prime Minister; His dream has come true under Modi's tenure
ನಾಳೆ ಬೆಳಗ್ಗೆ ವಿಮಾನ ನಿಲ್ದಾಣದಿಂದ ನೇರ ಮಂಡ್ಯಕ್ಕೆ ತೆರಳಲಿರುವ ಮಾಜಿ ಸಿಎಂ
ನವದೆಹಲಿ/ಬೆಂಗಳೂರು:
ತಮಿಳುನಾಡಿಗೆ ರಾಜ್ಯ ಕಾಂಗ್ರೆಸ್ ಸರಕಾರ ಕಾವೇರಿ ನೀರು ಹರಿಸುತ್ತಿರುವುದನ್ನು ಪ್ರತಿಭಟಿಸಿ ಮಂಡ್ಯ ಜಿಲ್ಲೆಯ ಜನರು ನಡೆಸುತ್ತಿರುವ ಬಂದ್ ಗೆ ತಮ್ಮ ಬೆಂಬಲವಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಈ ಬಗ್ಗೆ ನವದೆಹಲಿಯಿಂದಲೇ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಶನಿವಾರ ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ತಾವು ವಾಪಸ್ಸಾಗಲಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದಲೇ ನೇರವಾಗಿ ಮಂಡ್ಯಕ್ಕೆ ತೆರಳುವುದಾಗಿ ಹೇಳಿದ್ದಾರೆ.
ಸರಕಾರದ ತಪ್ಪಿನಿಂದ ರಾಜ್ಯದ ಜನರು ದೊಡ್ಡ ಪ್ರಮಾಣದ ಜಲ ಸಂಕಷ್ಟಕ್ಕೆ ತುತ್ತಾಗಲಿದ್ದಾರೆ. ಈಗಾಗಲೇ ಭೀಕರ ಜಲಕ್ಷಾಮದ ಎಲ್ಲಾ ಲಕ್ಷಣಗಳು ಗೋಚರವಾಗುತ್ತಿವೆ. ಆದರೂ ಸರಕಾರ ನಿರ್ಲಕ್ಷ್ಯ ಧೋರಣೆ ತಾಳಿದೆ. ಹಿಗಾಗಿ ಜನರು ಹೋರಾಟಕ್ಕೆ ಮುಂದಾಗಿದ್ದಾರೆ. ಜನರ ಜತೆ ನಿಲ್ಲುವುದು ನನ್ನ ಕರ್ತವ್ಯ. ಹೀಗಾಗಿ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಅವರು ತಿಳಿಸಿದ್ದಾರೆ.
