Home ಬೆಂಗಳೂರು ನಗರ Cauvery Water to Tamil Nadu| ಕನ್ನಡಪರ ಸಂಘಟನೆಗಳ ಸೆಪ್ಟೆಂಬರ್ 29ಕ್ಕೆ ಕರ್ನಾಟಕ ಬಂದ್ ಕರೆ

Cauvery Water to Tamil Nadu| ಕನ್ನಡಪರ ಸಂಘಟನೆಗಳ ಸೆಪ್ಟೆಂಬರ್ 29ಕ್ಕೆ ಕರ್ನಾಟಕ ಬಂದ್ ಕರೆ

186
0
Cauvery Water to Tamil Nadu| Pro-Kannada organizations calls for Karnataka bandh on September 29
Cauvery Water to Tamil Nadu| Pro-Kannada organizations calls for Karnataka bandh on September 29

ಬೆಂಗಳೂರು:

ಇದೇ ಸೆಪ್ಟೆಂಬರ್ 26ರಂದು ಮಂಗಳವಾರ ಬೆಂಗಳೂರು ಬಂದ್ ಗೆ ಕರೆ ನೀಡಿದ್ದರೆ ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ಕನ್ನಡ ಒಕ್ಕೂಟ ಮಾಡುತ್ತಿರುವ ಬಂದ್. ಹೀಗಾಗಿ ಅಖಂಡ ಕರ್ನಾಟ ಬಂದ್ ಇರಲಿದೆ. ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್‌ ಗೆ ಯೋಜನೆ ಮಾಡಿದ್ದೇವೆ ಎಂದು ತಿಳಿಸಿದರು.

ಸೋಮವಾರ ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ಸಂಪೂರ್ಣ ತೀರ್ಮಾನಕ್ಕೆ ಬರುತ್ತೇವೆ. ಸೆಪ್ಟೆಂಬರ್ 29ರಂದು ಕನ್ನಡ ಒಕ್ಕೂಟದ ಆಶ್ರಯದಲ್ಲಿ ಎಲ್ಲಾ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಸಾಹಿತಿಗಳು, ವ್ಯಾಪಾರಿಗಳು ಎಲ್ಲರೂ ಇದಕ್ಕೆ ಬೆಂಬಲ ನೀಡಿ ಸಹಕರಿಸಬೇಕು ಎಂದಿದ್ದಾರೆ.

ಗೊಂದಲದಲ್ಲಿ ಕನ್ನಡ ಸಂಘಟನೆಗಳು, ಜನರು: ಈಗಾಗಲೇ ಬೆಂಗಳೂರು ಬಂದ್ ಗೆ ಕರೆ ನೀಡಿರುವ ವಿವಿಧ ಸಂಘಟನೆಗಳು ಸೆಪ್ಟೆಂಬರ್ 29ಕ್ಕೆ ಕರ್ನಾಟಕ ಬಂದ್ ಗೆ ಈಗ ಕರೆ ನೀಡಿರುವುದು ಜನರಲ್ಲಿ ಸಾಕಷ್ಟು ಗೊಂದಲ, ಸಿಟ್ಟು, ಬೇಸರ ತಂದಿದೆ.

ಒಂದೇ ವಾರ ಎರಡು ಬಂದ್ ಹೀಗಾದರೆ ಸಾಮಾನ್ಯ ಜನತೆಯ ಜೀವನಕ್ಕೆ ಕಷ್ಟವಾಗುತ್ತದೆ ಎಂದು ಹಲವರು ಅಸಮಾಧಾನ ಹೊರಹಾಕಿದ್ದು ಈ ಹಿನ್ನೆಲೆಯಲ್ಲಿ ರೈತ ಸಂಘದ ಕುಬಣೂರು ಶಾಂತಕುಮಾರ್ ನೇತೃತ್ವದಲ್ಲಿ ಬಂದ್ ಬಗ್ಗೆ ಇಂದು ಬೆಂಗಳೂರಿನಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here