Home Supreme Court / ಸರ್ವೋಚ್ಚ ನ್ಯಾಯಾಲಯ Cauvery water to Tamil Nadu: ಕಾವೇರಿ ನೀರು ಹಂಚಿಕೆ ವಿವಾದ: ಅರ್ಜಿ ವಿಚಾರಣೆಗೆ ತ್ರಿಸದಸ್ಯ...

Cauvery water to Tamil Nadu: ಕಾವೇರಿ ನೀರು ಹಂಚಿಕೆ ವಿವಾದ: ಅರ್ಜಿ ವಿಚಾರಣೆಗೆ ತ್ರಿಸದಸ್ಯ ಪೀಠ ರಚನೆ ಮಾಡಿದ ಸುಪ್ರೀಂ ಕೋರ್ಟ್

29
0

ಬೆಂಗಳೂರು:

ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೆ ತಿಕ್ಕಾಟಕ್ಕೆ ಕಾರಣವಾಗಿರುವ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಇಂದು ತ್ರಿಸದಸ್ಯ ಪೀಠ ರಚನೆ ಮಾಡಿದೆ.

ಕರ್ನಾಟಕಕ್ಕೆ ನೀರು ಬಿಡುವಂತೆ ಸೂಚಿಸಬೇಕು ಎಂದು ಆಗ್ರಹಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಪ್ರತ್ಯೇಕ ಪೀಠ ರಚನೆಗೆ ನಿನ್ನೆ ಒಪ್ಪಿಗೆ ನೀಡಿತ್ತು. ಅದರಂತೆ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಮೂರ್ತಿ ಪಿಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಬಿಕೆ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ರಚನೆ ಮಾಡಿದ್ದು ಶುಕ್ರವಾರದಿಂದ ವಿಚಾರಣೆ ನಡೆಯಲಿದೆ.

ಸುಪ್ರೀಂಕೋರ್ಟ್​ನಲ್ಲಿ ಸಿಜೆಐ ಪೀಠದ ಮುಂದೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದ್ದು, ತಮಿಳುನಾಡು ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಅರ್ಜಿ ಪ್ರಸ್ತಾಪಿಸಿದ್ದರು. ಸುಪ್ರೀಂ ಕೋರ್ಟ್ 2023 ಆಗಸ್ಟ್ 14ರಿಂದ ಅನ್ವಯವಾಗುವಂತೆ ಕರ್ನಾಟಕದ ಜಲಾಶಯದಿಂದ 24,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲು ಅದಕ್ಕೆ ನಿರ್ದೇಶಿಸುವಂತೆ ಕೋರಿದ ಮನವಿಯನ್ನು ಸೋಮವಾರ ಆಲಿಕೆ ವೇಳೆ ಪ್ರಸ್ತಾವಿಸುವಂತೆ ತಮಿಳುನಾಡು ಸರಕಾರಕ್ಕೆ ಸೂಚಿಸಿತು. ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರು ಈ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಪೀಠದ ಮುಂದೆ ಕಳೆದ ಶುಕ್ರವಾರ ಪ್ರಸ್ತಾಪಿಸಿದರು.

ತಮಿಳುನಾಡು ವಾದ
ಕಾವೇರಿ ಜಲ ವಿವಾದದಲ್ಲಿ ಈ ಮನವಿಯನ್ನು ಪಟ್ಟಿ ಮಾಡುವಂತೆ ಸುಪ್ರೀಂ ಕೋರ್ಟ್ ಅನ್ನು ಆಗ್ರಹಿಸಿದ ರೋಹ್ಟಗಿ, ತಪ್ಪಲು ಜಿಲ್ಲೆಗಳಲ್ಲಿ ಬೆಳೆದು ನಿಂತ ಬೆಳೆಗಳಿಗೆ ತುರ್ತಾಗಿ ನೀರಿನ ಅಗತ್ಯತೆ ಇದೆ ಎಂದು ರೋಹ್ಟಗಿ ತಮ್ಮ ವಾದದಲ್ಲಿ ಹೇಳಿದ್ದರು. ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕ ಕೆಆರ್ಎಸ್ ಹಾಗೂ ಕಬಿನಿ ಜಲಾಶಯದಿಂದ ಬಿಲ್ಲಿಗುಂಡ್ಲುವಿನಲ್ಲಿ 2023 ಆಗಸ್ಟ್ 11ರಂದು ಮುಂದಿನ 15 ದಿನಗಳಲ್ಲಿ ಬಿಡುಗಡೆ ಮಾಡಬೇಕಾಗಿದ್ದ ನೀರಿನ ಪ್ರಮಾಣವನ್ನು 15 ಸಾವಿರ ಕ್ಯೂಸೆಕ್ಸ್ (ಪ್ರತಿದಿನ 0.864 ಟಿಎಂಸಿ)ನಿಂದ 10 ಸಾವಿರ ಕ್ಯೂಸೆಕ್ಸ್ ಗೆ ಇಳಿಕೆ ಮಾಡಿದೆ. ಆ ಮೂಲಕ ಅದು ಆದೇಶವನ್ನು ಉಲ್ಲಂಘಿಸಿದೆ ಎಂದು ಮನವಿಯಲ್ಲಿ ಪ್ರತಿಪಾದಿಸಲಾಗಿದೆ.

LEAVE A REPLY

Please enter your comment!
Please enter your name here