Home ಬೆಂಗಳೂರು ನಗರ Cauvery Water to Tamil Nadu | ಸುಪ್ರೀಂ ಕೋರ್ಟ್ ವಾಸ್ತವದ ಆಧಾರದಲ್ಲಿ ಆದೇಶ ಮಾಡಬೇಕು...

Cauvery Water to Tamil Nadu | ಸುಪ್ರೀಂ ಕೋರ್ಟ್ ವಾಸ್ತವದ ಆಧಾರದಲ್ಲಿ ಆದೇಶ ಮಾಡಬೇಕು : ಬಸವರಾಜ ಬೊಮ್ಮಾಯಿ

32
0
Cauvery Water to Tamil Nadu | Supreme Court should order based on facts: Basavaraj Bommai

‘ಕುಡಿಯುವ ನೀರು ಉಳಿಸಿಕೊಳ್ಳಲಾದರೂ ರಾಜ್ಯ ಸರ್ಕಾರ ಹೋರಾಟ ಮಾಡಲಿ’

ಬೆಂಗಳೂರು:

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಸಂಪೂರ್ಣ ಸಿಡಬ್ಲುಎಂಎ ಆದೇಶವನ್ನೇ ಪರಿಗಣಿಸದೇ, ವಾಸ್ತವದ ಆಧಾರದಲ್ಲಿ ತೀರ್ಪು ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ಕಾವೇರಿ ವಿಚಾರದಲ್ಲಿ ಸುಪ್ರೀಂ ಕೊರ್ಟ್ ಎರಡು ರಾಜ್ಯಗಳ ವಾದ ಕೇಳಿ ಸಿಡಬ್ಲುಎಂಎ ಆದೇಶ ಎತ್ತಿ ಹಿಡಿದಿದೆ. ಮುಂದಿನ 15 ದಿನ ಸಿಡಬ್ಲುಎಂಎ ಆದೇಶ ಪಾಲನೆ ಮಾಡಬೇಕು ಅಂತ ಹೇಳಿರುವುದು ದುರಾದೃಷ್ಟ. ಮತ್ತೊಮ್ಮೆ ಕರ್ನಾಟಕದ ವಸ್ತು ಸ್ಥಿತಿಯನ್ನು ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಬೇಕಿದೆ. ಸಿಡಬ್ಲುಎಂಎ ಆದೇಶ ಅಂತಿಮವಲ್ಲ. ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ತನಗೆ ಸಂಬಂಧ ಇಲ್ಲ ಎನ್ನುವುದು ಸರಿಯಲ್ಲ. ಕೇವಲ ಕರ್ನಾಟಕದ ಡ್ಯಾಮ್ ಗಳ ನೀರಿನಟ್ಟ ಲೆಕ್ಕ ಹಾಕುವುದಲ್ಲ. ತಮಿಳುನಾಡು ಡ್ಯಾಮ್ ಗಳಲ್ಲಿ ನ ನೀರಿನ ಮಟ್ಟ ಲೆಕ್ಕ ಹಾಕಬೇಕು ಎಂದು ಆಗ್ರಹಿಸಿದರು.

ಸಿಡಬ್ಲುಎಂಎ ಮೊದಲ ಆದೇಶ ಬಂದಾಗಲೇ ರಾಜ್ಯ ಸರ್ಕಾರ ಸುಪ್ರೀಂ ‌ಕೋರ್ಟ್ ಮುಂದೆ ಮೆಲ್ಮನವಿ ಸಲ್ಲಿಸಬೇಕಿತ್ತು. ಸರ್ಕಾರ ಎರಡು ಬಾರಿ ನೀರು ಬಿಟ್ಟು ಈಗ ಸುಪ್ರೀಂ ಕೊರ್ಟ್ ಮುಂದೆ ಹೋಗಿದ್ದಾರೆ. ಸುಪ್ರೀಂಕೋರ್ಟ್ ಸಂಪೂರ್ಣ ವಾಗಿ ಸಿಡಬ್ಲುಎಂ ಮೇಲೆ ಅವಲಂಬನೆ ಆಗಿದೆ. ಸಿಡಬ್ಲುಆರ್ಸಿ , ಸಿಡಬ್ಲುಎಂಎ ಎರಡೂ ಧೋರಣೆ ಸರಿಯಿಲ್ಲ. ಸಿಡಬ್ಲುಎಂಎ ಇಲ್ಲಿನ ವಾಸ್ತವ ಪರಿಸ್ಥಿತಿಯನ್ನು ನೋಡಬೇಕು. ಕೇವಲ ಅಂಕಿ ಅಂಶಗಳನ್ನು ಇಟ್ಟುಕೊಂಡು ಆದೇಶ ಮಾಡುತ್ತಿವೆ.

ಕುಡಿಯಲು ನೀರು ಉಳಿಸಿಕೊಳ್ಳಲು ಹೋರಾಟ ಮಾಡಲಿ

ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸುವುದಾಗಿ ಹೆಳುತ್ತಾರೆ. ತಮಿಳುನಾಡು ಈಗಾಗಲೇ ಅಕ್ರಮವಾಗಿ ನೀರು ಬಳಕೆ ಮಾಡಿಕೊಂಡಿದೆ. ಅದನ್ನು ಸುಪ್ರೀಂಕೋರ್ಟ್ ಗಮನಕ್ಕೆ ತರಬೇಕು. ರಾಜ್ಯ ಸರ್ಕಾರ ಕೇವಲ ನಮ್ಮಲ್ಲಿ ನೀರಿಲ್ಲ ಅಂತ ಹೇಳುವುದಷ್ಟೇ ಅಲ್ಲ. ಬೆಂಗಳೂರು ಒಂದು ಅಂತಾರಾಷ್ಟ್ರೀಯ ನಗರ ಇಲ್ಲಿ ಎಲ್ಲ ಭಾಗದ ಜನರು ಬರುತ್ತಾರೆ. ಬೆಂಗಳೂರಿಗೆ ಕುಡಿಯಲು ಪ್ರತ್ಯೇಕ ವಾಗಿ ನೀರು ಇಟ್ಟಿದ್ದಾರೆ. ಅದನ್ನು ಸುಪ್ರೀಂ ಕೋರ್ಟ್ ಮುಂದೆ ವಾದ ಮಾಡಬೇಕು. ತಮಿಳುನಾಡಿಗೆ ನವೆಂಬರ್ ನಲ್ಲಿ ಮತ್ತೊಂದು ಹಿಂಗಾರು ಮಳೆ ಬರುತ್ತದೆ. ಆದರೆ, ಕರ್ನಾಟಕಕ್ಕೆ ಮುಂಗಾರು ಮುಗಿಯುವ ಹಂತದಲ್ಲಿದೆ. ಇದೆಲ್ಲವನ್ನು ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಿಕೊಡಬೇಕು. ಕುಡಿಯುವ ನೀರಿಗಾದರು ಉಳಿಸಿಕೊಳ್ಳಲು ರಾಜ್ಯ ಸರ್ಕಾರ ಹೋರಾಟ ಮಾಡಬೇಕು. ಇದರಲ್ಲಿ ನಮಗೆ ರಾಜಕಾರಣ ಮಾಡಲು ಇಷ್ಟ ಇಲ್ಲ. ಈಗಾಗಲೇ ರೈತರ ಬೆಳೆ ಒಣಗಿ ಹೋಗುತ್ತಿದೆ. ರಾಜ್ಯ ಸರ್ಕಾರ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here