Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Cauvery Water to Tamil Nadu | ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಉಡಾಫೆ ಮುಂದುವರೆದರೆ ಸ್ವಾಮೀಜಿಗಳು, ರೈತರು, ನಾಗರಿಕರು ದಂಗೆ ಏಳುತ್ತಾರೆ : ಬಸವರಾಜ ಬೊಮ್ಮಾಯಿ
  • ಬೆಂಗಳೂರು ನಗರ

Cauvery Water to Tamil Nadu | ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಉಡಾಫೆ ಮುಂದುವರೆದರೆ ಸ್ವಾಮೀಜಿಗಳು, ರೈತರು, ನಾಗರಿಕರು ದಂಗೆ ಏಳುತ್ತಾರೆ : ಬಸವರಾಜ ಬೊಮ್ಮಾಯಿ

Vighnesh Pawar September 22, 2023 4:30 PM
Cauvery Water to Tamil Nadu | Swamijis, farmers, citizens will revolt if state govt continues not to act on Cauvery issue: Basavaraj Bommai

Cauvery Water to Tamil Nadu | Swamijis, farmers, citizens will revolt if state govt continues not to act on Cauvery issue: Basavaraj Bommai

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಉಡಾಫೆಯಾಗಿ ನಡೆದುಕೊಳ್ಳುತ್ತಿದೆ. ಇವರು ಹೀಗೆ ನಿರ್ಲಕ್ಷ್ಯ ಮಾಡಿದರೆ ಸ್ವಾಮೀಜಿಗಳು, ರೈತರು, ಬೆಂಗಳೂರಿನ ನಾಗರಿಕರು ದಂಗೆ ಏಳುತ್ತಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಾವೇರಿ ವಿಚಾರದಲ್ಲಿ ಬಿಜೆಪಿಯ ಮುಂದಿನ ಹೋರಾಟದ‌ ಕುರಿತು ಪಕ್ಷದ ಕಚೇರಿಯಲ್ಲಿ ತಮ್ಮ ನೇತೃತ್ವದಲ್ಲಿ ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳ ಪಕ್ಷದ ಪದಾಧಿಕಾರಿಗಳ ಸಭೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,

ಕಾವೆರಿ ವಿಚಾರದಲ್ಲಿ ಈ ಸರ್ಕಾರ ತೀವ್ರವಾದ ಗಂಡಾಂತರ ತಂದಿದೆ. ಮೊದಲಿಂದಲೂ ಎಡವಟ್ಟು ಮಾಡಿಕೊಂಡು ಬಂದಿದೆ. ಸುಪ್ರೀಂಕೋರ್ಟ್ ನಲ್ಲಿ ಸರಿಯಾಗಿ ವಾದ ಮಾಡದೇ ಮತ್ತೆ 7.5 ಟಿಎಂಸಿ ನಿರು ಬಿಡುವ ಪರಿಸ್ಥಿತಿಗೆ ತಂದಿದೆ.‌ಇಷ್ಟೆಲ್ಲಾ ಆದರೂ ರಾಜ್ಯಸ ಜನರಿಗೆ ಸರ್ಕಾರ ಮುಂದೇನು ಮಾಡುತ್ತದೆ ಅಂತ ಹೇಳಿಲ್ಲ. ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದರು.

ರಾಜ್ಯ ಸರ್ಕಾರ ಆರಂಭದಿಂದಲೂ ಗ್ಯಾರೆಂಟಿ ಹೆಸರು ಹೇಳಿ ಈಗ ಕಂಡಿಷನ್ ಹಾಕಿ ಅರ್ಧಂಬರ್ಧ ಜಾರಿ ಮಾಡುತ್ತದೆ. ಬೆಂಗಳೂರು ಅಂತಾರಾಷ್ಟ್ರೀಯ ನಗರ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತೆತ್ತಿದರೆ ಬ್ರಾಂಡ್ ಬೆಂಗಳೂರು ಅಂತ ಹೇಳುತ್ತಾರೆ. ಆದರೆ, ಬೆಂಗಳೂರಿನ ಕುಡಿಯುವ ನೀರಿನ ಬಗ್ಗೆ ಮಾತನಾಡುವುದಿಲ್ಲ. ನಮಗೆ ಬೇಕಿರುವುದು ನೀರಿನ‌ ಗ್ಯಾರೆಂಟಿ. ಬೆಂಗಳೂರಿಗೆ ಪ್ರತ್ಯೆಕವಾಗಿ 4.5 ಟಿಎಂಸಿ ನೀರು ಕೊಡಲು ಟ್ರಿಬುನಲ್ ಹೇಳಿದೆ. ಈ ಬಗ್ಗೆ ರಾಜ್ಯ ಸರ್ಕಾರ ಎಲ್ಲಿಯೂ ಪ್ರಸ್ತಾಪ ಮಾಡುತ್ತಿಲ್ಲ. ತಮಿಳಿನಾಡು ಹೆಚ್ಚುವರಿ ನೀರು ಬಳಕೆ ಮಾಡಿ ಅಕ್ರಮವಾಗಿ ಬೆಳೆ ಬೆಳೆದಿದ್ದು, ಅದರ ಬಗ್ಗೆ ರಾಜ್ಯ ಸರ್ಕಾರ ಮಾತನಾಡಿಲ್ಲ. ನಮಗೆ ಮುಂಗಾರು ಮುಕ್ತಾಯವಾಗಿದೆ, ತಮಿಳುನಾಡಿಗೆ ಮುಂದಿನ ದಿನಗಳಲ್ಲಿ ಮಳೆ ಬರಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗಮನಕ್ಕೆ ತರಬೇಕು. ಈ ವಿಷಯ ಹೇಳಿದರೆ ನಾವು ರಾಜಕಾರಣ ಮಾಡುತ್ತೇವೆ ಎನ್ನುತ್ತಾರೆ. ಇದರ ಮೇಲೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ರಾಜಕಾರಣ ಮಾಡುತ್ತಾರೆ. ತಮಿಳುನಾಡು ಸಿಎಂ ಜೊತೆ ಮಾತನಾಡಿ ಅಂದರೆ ಮಾತನಾಡುವುದಿಲ್ಲ. ಅದರ ಬದಲು ಕೇಂದ್ರದ ಕಡೆ ಬೊಟ್ಟು ಮಾಡುತ್ತಾರೆ. ಅದರಲ್ಲಿ ಸಿದ್ದರಾಮಯ್ಯ ಪರಿಣಿತರು ಎಂದು ವಾಗ್ದಾಳಿ ನಡೆಸಿದರು.

WhatsApp Image 2023 09 22 at 3.54.10 PM 1

ಬರ ಬಂದರೆ ಕೇಂದ್ರದ ಕಡೆ ತೊರಿಸುತ್ತಾರೆ. ರಾಜ್ಯ ಸರ್ಕಾರ ಪರಿಹಾರ ಕೊಡಬಾರದು ಎಂದು ಏನು ನಿಯಮ ಇಲ್ಲ. ನಾವು ಪ್ರವಾಹ ಬಂದಾಗ ಕೇಂದ್ರದ ಎರಡು ಪಟ್ಟು ಪರಿಹಾರ ಕೊಟ್ಡಿದ್ದೇವೆ. ಜನ ನಿಮಗೆ ಅಧಿಕಾರ ಕೊಟ್ಟಿದ್ದಾರೆ. ಆದರೆ ನೀವು ಜನರಿಗೆ ದ್ರೋಹ ಮಾಡಿದ್ದೀರಿ, ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಾಳೆ (ಶನಿವಾರ) ಪ್ರತಿಭಟನೆ ಮಾಡಲಾಗುವುದು. ಮುಂದಿನ ದಿನಗಳಲ್ಲಿ 28 ಲೋಕಸಭೆ ಕ್ಷೇತ್ರಗಳಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು.

ಕಾವೇರಿ ನೆಲ ಜಲ ವಿಚಾರ ಬಂದಾಗ ನಾವು ಒಗಟ್ಟು ಪ್ತದರ್ಶನ ಮಾಡಬೇಕು. ಆ ದೃಷ್ಟಿಯಿಂದ ನಾವು ಸಹಕಾರ ಕೊಡುತ್ತೇವೆ. ಸರ್ವಪಕ್ಷದ ಸಭೆಯಲ್ಲಿ ನೀರು ಬಿಡುವುಸಿಲ್ಲ ಎಂದು ತೆಗೆದುಕೊಂಡ ತೀರ್ಮಾನ ಪಾಲನೆ ಮಾಡದಿದ್ದರೆ ನಾವು ಮಾತನಾಡುತ್ತೇವೆ. ಸುಪ್ರೀಂ ಕೋರ್ಟ್ ನಲ್ಲಿ ಇವರು ಮಧ್ಯಂತರ ಅರ್ಜಿ (ಐಎ) ಹಾಕಲಿಲ್ಲ ಎಂದರು.

ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಬೇಕಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ತಂದಾಗ ಸುಪ್ರೀಂ ಕೋರ್ಟ್ ಅದನ್ನು ತಳ್ಳಿ ಹಾಕಿದೆ. ಅದರ ಬದಲು ಈಗಲಾದರೂ ಸರ್ಕಾರ ಮೇಲ್ಮನವಿ ಸಲ್ಲಿಸಿ ಇದುವರೆಗೂ ವಿಚಾರಣೆಯಲ್ಲಿ ಚರ್ಚೆಗೆ ಬಾರದ ಬೆಂಗಳೂರಿನ ಕುಡಿಯುವ ನೀರು, ತಮಿಳುನಾಡು ಹೆಚ್ಚಿಗೆ ನೀರು ಬಳಕೆ ಮಾಡಿಕೊಂಡಿದ್ದು, ನಮ್ಮಲ್ಲಿ ಮುಂಗಾರು ಮುಕ್ತಾಯವಾಗಿದ್ದು, ತಮಿಳುನಾಡಿಗೆ ಹಿಂಗಾರು ಮಳೆ ಬರುವ ವಿಚಾರಗಳನ್ನು ಸುಪ್ರೀಂ ಕೋರ್ಟ್ ಮುಂದೆ ಹಾಕಬೇಕು. ಅದನ್ನು ಸುಪ್ರೀಂ ಕೋರ್ಟ್ ಪರಿಗಣಿಸುವ ಸಾಧ್ಯತೆ ಇದೆ ಎಂದರು.

WhatsApp Image 2023 09 22 at 3.54.02 PM 1

ಪರಿಹಾರ ನೀಡಲಿ

ರಾಜ್ಯ ಸರ್ಕಾರ ಕ್ಯಾಬಿನೆಟ್ ನಲ್ಲಿ ಈಗ ಬಿಟ್ಟಿರುವ ನೀರಿನ ಬಗ್ಗೆ ಸ್ಪಷ್ಟ ನಿರ್ಣಯ ಕೈಗೊಳ್ಳಬೇಕು. ಬರ ತಾಲೂಕಿನ ಕಾರ್ಯಕ್ರಮದ ಬಗ್ಗೆ ಘೊಷಣೆ ಮಾಡಬೇಕು. ಕಾವೇರಿ ಕೊಳ್ಳದ ತಾಲೂಕುಗಳ ರೈತರಿಗೆ ಪರಿಹಾರ ನೀಡಬೇಕು. ನಗರಗಳ ನೀರಿಗೆ ಮುಂದಿನ ಯೋಜನೆ ಏನು ಎಂದು ಕ್ಯಾಬಿನೆಟ್ ನಲ್ಲಿ ತೀರ್ಮಾನ ಮಾಡಬೇಕು ಎಂದು ಆಗ್ರಹಿಸಿದರು.

ಮೈತ್ರಿ ಬಗ್ಗೆ ಹೈಕಮಾಂಡ್ ನಾಯಕರು ಮಾತನಾಡುತ್ತಾರೆ

ಇದೇ ವೇಳೆ ಜೆಡಿಎಸ್ ಜೊತೆಗಿನ ಮೈತ್ರಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೈತ್ರಿ ಬಗ್ಗೆ ಹೈಕಮಾಂಡ್ ನಾಯಕರು ಮಾತುಕತೆ ನಡೆಸುತ್ತಾರೆ ಆ ನಂತರ ರಾಜ್ಯದ ನಾಯಕರ ಜೊತೆ ಮಾತನಾಡುತ್ತಾರೆ ಎಂದು ಹೇಳಿದರು.

About the Author

Vighnesh Pawar

Subscriber

View All Posts

Post navigation

Previous: Vijayapur Airport Development Project | ನವೆಂಬರ್ ಹೊತ್ತಿಗೆ ಕಾಮಗಾರಿ ಮುಗಿಸಿ, ಫೆಬ್ರುವರಿ 2024 ವೇಳೆಗೆ ಉದ್ಘಾಟನೆಗೆ ಸಜ್ಜುಗೊಳಿಸಿ
Next: Karnataka DyCM D K Shivakumar | ಕಾವೇರಿ ಸಂಕಷ್ಟಕ್ಕೆ ಪರಿಹಾರವಾಗಿರುವ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಎಲ್ಲ ಅನುಮತಿ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ

Related Stories

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

The Bengaluru Live November 23, 2026 5:28 PM
ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 24ರಂದು ವಿಲ್ಸನ್ ಗಾರ್ಡನ್, ಶಾಂತಿನಗರ, ರಿಚ್‌ಮಂಡ್ ಸರ್ಕಲ್ ಸುತ್ತಮುತ್ತ ವಿದ್ಯುತ್ ಕಡಿತ

The Bengaluru Live November 23, 2026 5:28 PM

Latest Post

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

November 23, 2026 7:26 PM
‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್ ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

November 23, 2026 7:14 PM
ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

November 23, 2026 5:59 PM
ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

November 23, 2026 5:37 PM
ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 24 ಮತ್ತು 25ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 23, 2026 5:34 PM
ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಬೆಂಗಳೂರಿನ ಬೆಸ್ಕಾಂ ಕಾರ್ಪೊರೇಟ್ ಕಚೇರಿಯ ಫೈಲ್ ಚಿತ್ರ
  • ಬೆಂಗಳೂರು ನಗರ

ನವೆಂಬರ್ 25ರಂದು ಹೆಣ್ಣೂರು, ಹೊರಮಾವು, ಹೊಯ್ಸಳ ನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ

November 23, 2026 5:28 PM

ನೀವು ತಪ್ಪಿಸಿಕೊಂಡಿರಬಹುದು

ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು ನಗರ

ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು

The Bengaluru Live November 23, 2026 7:26 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್

The Bengaluru Live November 23, 2026 7:14 PM
ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಮೈಕ್‌ಗಳಿರುವ ಮೇಜಿನ ಬಳಿ ಕುಳಿತಿರುವ ಹಿರಿಯ ಅಧಿಕಾರಿಗಳು
  • ಕರ್ನಾಟಕ

ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ

The Bengaluru Live November 23, 2026 5:59 PM
ವಿಧಾನಸೌಧದ ಸಂವಾದ ಸಭೆಯಲ್ಲಿ ಸಭಾ ಮೇಜಿನ ಬಳಿ ಕುಳಿತಿರುವ ಅಧಿಕಾರಿಗಳು ಮತ್ತು ಭೇಟಿ ನೀಡಿದ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ
  • ಕರ್ನಾಟಕ

ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ

The Bengaluru Live November 23, 2026 5:37 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬ್ಲೂ ಲೈನ್ ಫೇಸ್ 2ಎ ಮೆಟ್ರೋ ಪರೀಕ್ಷಾರ್ಥ ಸಂಚಾರ: ನವೆಂಬರ್ 24ರಂದು ಕೆ.ಆರ್. ಪುರಂನಿಂದ ದೊಡ್ಡನೆಕ್ಕುಂದಿಗೆ ರೈಲು
  • ‘ಬಿಗ್ ಬುಲೆಟಿನ್’ ಹೇಳಿಕೆ: ಪಬ್ಲಿಕ್ ಟಿವಿಯ ಎಚ್.ಆರ್. ರಂಗನಾಥ್, ಅರುಣ್ ಬಡಿಗೇರ್‌ಗೆ ಲೋಕಾಯುಕ್ತ ನೋಟಿಸ್
  • ರಸ್ತೆ ಅಪಘಾತ ತಗ್ಗಿಸಲು ಎಐ ಕ್ಯಾಮೆರಾ; ತುರ್ತು ಚಿಕಿತ್ಸೆಗೆ ₹2.5 ಲಕ್ಷದವರೆಗೆ ನಗದುರಹಿತ ನೆರವು, ₹322 ಕೋಟಿ ಕ್ರಿಯಾ ಯೋಜನೆ
  • ವಿಧಾನಸೌಧದಲ್ಲಿ ವಿಶ್ವಸಂಸ್ಥೆ ವಿಶೇಷ ವರದಿಗಾರ್ತಿ ಹೆಬಾ ಹಗ್ರಾಸ್ ಅವರಿಗೆ ಕರ್ನಾಟಕದ ವಿಕಲಚೇತನ ಸಬಲೀಕರಣ ಮಾದರಿ ಪ್ರಸ್ತುತ
©Copyright 2025 The Bengaluru Live All rights reserved. | MoreNews by AF themes.