Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಸಾಮಾನ್ಯ ಸಂದರ್ಭಗಳಲ್ಲಿ ನೀರು ಬಿಡಲು ನಮ್ಮ ಅಭ್ಯಂತರ ಇಲ್ಲ. ಸಂಕಷ್ಟ ಸಂದರ್ಭಗಳಲ್ಲಿ, ಸಂಕಷ್ಟ ಸೂತ್ರ ಇಲ್ಲದಿರುವುದರಿಂದ ನಾವು ಹೆಚ್ಚು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ಬೆಂಗಳೂರು ನಗರ

ಸಾಮಾನ್ಯ ಸಂದರ್ಭಗಳಲ್ಲಿ ನೀರು ಬಿಡಲು ನಮ್ಮ ಅಭ್ಯಂತರ ಇಲ್ಲ. ಸಂಕಷ್ಟ ಸಂದರ್ಭಗಳಲ್ಲಿ, ಸಂಕಷ್ಟ ಸೂತ್ರ ಇಲ್ಲದಿರುವುದರಿಂದ ನಾವು ಹೆಚ್ಚು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Vighnesh Pawar September 13, 2023 3:30 PM 1 minute read
Cauvery Water to Tamil Nadu: We have no objection to release water under normal circumstances: Siddaramaih

Cauvery Water to Tamil Nadu: We have no objection to release water under normal circumstances: Siddaramaih

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ನಾವು 99 ಟಿಎಂಸಿ ನೀರು ಬಿಡಬೇಕಿತ್ತು. ಆದರೆ ಇದುವರೆಗೂ 37 ಟಿಎಂಸಿ ಮಾತ್ರ ಹೋಗಿದೆ

ನಮಗೆ 70 ಟಿಎಂಸಿ ನೀರು ಬೆಳೆ ರಕ್ಷಣೆಗೆ ಬೇಕು. ಕುಡಿಯುವ ನೀರಿಗೆ 33 ಟಿಎಂಸಿ ನೀರು ಬೇಕು. ಆದರೆ ನಮ್ಮಲ್ಲಿ ಸಂಗ್ರಹ ಇರುವುದು 53 ಟಿಎಂಸಿ ಮಾತ್ರ. ಹೀಗಾಗಿ ನಮ್ಮಲ್ಲಿ ನೀರೇ ಇಲ್ಲ

ನಮ್ಮ ಅಧಿಕಾರಿಗಳು ರಾಜ್ಯದ ವಾಸ್ತವಾಂಶವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಆದರೂ ನಿತ್ಯ 5 ಟಿಎಂಸಿ ನೀರು ಬಿಡಲು ಸೂಚಿಸಲಾಗಿದೆ

ನಮ್ಮ ರಾಜ್ಯದ ರೈತರ ಹಿತ ಮತ್ತು ಕುಡಿಯುವ ನೀರಿನ ಹಿತ ಕಾಪಾಡುವುದು ನಮ್ಮ ಮೊದಲ ಆಧ್ಯತೆ

ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತಾಸಕ್ತಿ ಕಾಪಾಡೋಣ: ಮುಖ್ಯಮಂತ್ರಿ ಅಧ್ಯಕ್ಷತೆಯ ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯ

ಬೆಂಗಳೂರು:

ತಮಿಳುನಾಡಿಗೆ ನೀರು ಬಿಡಬೇಕಾ ಬೇಡವಾ ಎನ್ನುವುದಕ್ಕಿಂತ ನಮ್ಮಲ್ಲಿ ನೀರೇ ಇಲ್ಲ. ಹೀಗಾಗಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತವನ್ನು ಎಲ್ಲರೂ ಒಟ್ಟಾಗಿ ಕಾಪಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯಿಸಲಾಗಿದೆ.

ಕಾವೇರಿ ನೀರು ನಿರ್ವಹಣಾ ಸಮಿತಿ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ನಡೆದ ಸರ್ವ ಪಕ್ಷದ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ಇದುವರೆಗಿನ ಆದೇಶದ ಪ್ರಕಾರ ನಾವು 99 ಟಿಎಂಸಿ ನೀರು ಬಿಡಬೇಕಿತ್ತು. ಆದರೆ ಇದುವರೆಗೂ 37 ಟಿಎಂಸಿ ಮಾತ್ರ ಹೋಗಿದೆ.
ನಮಗೆ 70 ಟಿಎಂಸಿ ನೀರು ಬೆಳೆ ರಕ್ಷಣೆಗೆ ಬೇಕು. ಕುಡಿಯುವ ನೀರಿಗೆ 33 ಟಿಎಂಸಿ ನೀರು ಬೇಕು. ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಬೇಕು. ಆದರೆ ನಮ್ಮಲ್ಲಿ ಸಂಗ್ರಹ ಇರುವುದು 53 ಟಿಎಂಸಿ ಮಾತ್ರ. ಹೀಗಾಗಿ ನಮ್ಮಲ್ಲಿ ನೀರೇ ಇಲ್ಲ. ನಮ್ಮ ಅಧಿಕಾರಿಗಳು ರಾಜ್ಯದ ವಾಸ್ತವಾಂಶವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಆದರೂ ನಿತ್ಯ 5 ಟಿಎಂಸಿ ನೀರು ಬಿಡಲು ಸೂಚಿಸಲಾಗಿದೆ. ನಮ್ಮ ರೈತರ ಪ್ರಾಣವನ್ನು, ಹಿತವನ್ನು ಕಡೆಗಣಿಸಿ ನೀರು ಬಿಡಬೇಕು ಎಂದು ಯಾರೂ ಹೇಳಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಈ ವರ್ಷದ ಆಗಸ್ಟ್‌ ತಿಂಗಳಿನಲ್ಲಿ ಕಳೆದ 123 ವರ್ಷಗಳ ಇದೇ ಅವಧಿಗೆ ಹೋಲಿಸಿದರೆ ಅತಿ ಕಡಿಮೆ ಮಳೆಯಾಗಿದೆ. ಅತೀ ಕಡಿಮೆ ನೀರು ಸಂಗ್ರಹದಲ್ಲಿದೆ. ಈ ಹಿನ್ನೆಲೆಯಲ್ಲಿ ನೀರಿನ ಕೊರತೆ ಇರುವುದರಿಂದ ಕೈಗೊಳ್ಳಬಹುದಾದ ಕಾನೂನು ಕ್ರಮಗಳು, ರಾಜಕೀಯ ಕ್ರಮಗಳು ಹಾಗೂ ಕೇಂದ್ರ ಸರ್ಕಾರದ ನೆರವು ಕೋರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ತಾಂತ್ರಿಕ ಪರಿಣತರು, ಕಾನೂನು ತಜ್ಞರು, ಆ ಭಾಗದ ಜನಪ್ರತಿನಿಧಿಗಳು ಹಾಗೂ ವಿವಿಧ ಪಕ್ಷಗಳ ಮುಖಂಡರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್‌.ಕೆ.ಪಾಟೀಲ, ಚೆಲುವರಾಯಸ್ವಾಮಿ, ಕೆ.ಹೆಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಎನ್‌.ಎಸ್. ಭೋಸರಾಜು, ಕೆ.ವೆಂಕಟೇಶ್‌, ಜಮೀರ್ ಅಹಮದ್ ಖಾನ್ , ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ಈ ಭಾಗದ ಸಂಸದರು, ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಕಾನೂನು ತಜ್ಞರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಮುಖ್ಯಮಂತ್ರಿ @siddaramaiah ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾವೇರಿ ಜಲ ವಿವಾದ ಕುರಿತಂತೆ ಸರ್ವಪಕ್ಷಗಳ ತುರ್ತು ಸಭೆ ನಡೆಸಿ ಚರ್ಚಿಸಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ @DKShivakumar, ಸಚಿವರಾದ @DrParameshwara, @HKPatilINC, ಚೆಲುವರಾಯಸ್ವಾಮಿ, ಕೆ.ಹೆಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, @NsBoseraju, ಕೆ.ವೆಂಕಟೇಶ್‌,… pic.twitter.com/2llDuvQM6w

— CM of Karnataka (@CMofKarnataka) September 13, 2023

ಇತರೆ ಹೈಲೈಟ್ಸ್

ಕಳೆದ 28 ರಂದು ನಡೆದ ಸರ್ವಪಕ್ಷ ಸಭೆಯಲ್ಲಿ ಕಾವೇರಿ, ಮಹದಾಯಿ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಚರ್ಚಿಸಲಾಗಿತ್ತು. ಇಂದು ಕೇವಲ ಕಾವೇರಿ ನೀರಿನ ವಿಚಾರವಾಗಿ ಸಭೆ ನಡೆಸಿದ್ದೇವೆ

ಅಂದು ಕೂಡ ಕಾವೇರಿ ನೀರು ನಿಯಂತ್ರಣ ಸಮಿತಿಯು 10 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ನೀಡಿ ನಮ್ಮ ವಾದ ಆಲಿಸಿದ ನಂತರ ಐದು ಸಾವಿರ ಕ್ಯೂಸೆಕ್ಸ್ ಬಿಡಲು ಸೂಚಿಸಿತ್ತು. ಮತ್ತೆ ನಿನ್ನೆ ಐದು ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ಮಾಡಿದೆ. ಸಾಮಾನ್ಯ ಮಳೆಯಾದಾಗ ನೀರು ಬಿಡಲು ತಕರಾರಿಲ್ಲ. ಕಳೆದ ವರ್ಷ 667 ಟಿಎಂಸಿ ಬಿಡಲಾಗಿದೆ. ಸುಪ್ರೀಂ ಕೋರ್ಟ್‌ ಆದೇಶ ಪ್ರಕಾರ ಸಾಮಾನ್ಯ ವರ್ಷಗಳಲ್ಲಿ 177.25 ಟಿಎಂಸಿ ನೀರು ಬಿಡಬೇಕು. ಆದರೆ ದುರದೃಷ್ಟವಶಾತ್‌ ಸಂಕಷ್ಟ ಹಂಚಿಕೆ ಸೂತ್ರವಿಲ್ಲದ ಕಾರಣ ಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದೇವೆ

*99 ಟಿಎಂಸಿ ನೀರು ಕೊಡಬೇಕಾಗಿತ್ತು. ಇವತ್ತಿನ ವರೆಗೆ 37.7 ಟಿಎಂಸಿ ನೀರು ಬಿಡಲಾಗಿದೆ. ನಮಗೆ 70 ಟಿಎಂಸಿ ನೀರು ಬೆಳೆ ಉಳಿಸಿಕೊಳ್ಳಲು ಬೇಕು. 33 ಟಿಎಂಸಿ ಕುಡಿಯುವ ನೀರಿಗಾಗಿ ಬೇಕು. ಜೊತೆಗೆ 3 ಟಿಎಂಸಿ ಕೈಗಾರಿಕೆಗಳಿಗೆ ಬೇಕು.
ಇದೀಗ ಲಭ್ಯವಿರುವುದು ನಾಲ್ಕೂ ಜಲಾಶಯಗಳಿಂದ 53 ಟಿಎಂಸಿ ನೀರು ಬೇಕಾಗಿದೆ. ಬೆಳೆಗಳಿಗೆ ಕಟ್ಟುನೀರು ಬಿಡಲಾಗುತ್ತಿದೆ.
ಅಧಿಕಾರಿಗಳು ರಾಜ್ಯದ ಪರಿಸ್ಥಿತಿ, ವಾಸ್ತವಾಂಶ ತಿಳಿಸಿದರೂ ನೀರು ಬಿಡುವಂತೆ ಸೂಚಿಸಿದ್ದಾರೆ

ನಮ್ಮ ಮುಂದೆ ಎರಡು ದಾರಿ ಇದೆ- ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮತ್ತೆ ಅರ್ಜಿ ಹಾಕುವುದು ಮೊದಲ ದಾರಿ. ಎರಡನೇ ಆಯ್ಕೆ ನೀರು ಇಲ್ಲ ನಮ್ಮ ಬಳಿ ಎಂದು ಸುಪ್ರೀಂ ಕೋರ್ಟಿನ ಮೊರೆ ಹೋಗಬೇಕು

ಇಂದು ಜಲಸಂಪನ್ಮೂಲ ಸಚಿವರು ದೆಹಲಿಗೆ ತೆರಳಿ ಜಲಶಕ್ತಿ ಸಚಿವರನ್ನು ಭೇಟಿಯಾಗಲಿದ್ದಾರೆ. ವಕೀಲರ ತಂಡದೊಂದಿಗೆ ಚರ್ಚಿಸಲಿದ್ದಾರೆ. ನಾವು ರೈತರ ಹಿತಾಸಕ್ತಿಯನ್ನು ರಕ್ಷಿಸಬೇಕಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ, ನೀರು ಕೊಡುವುದು ಕಷ್ಟವಿದೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ

ರೈತರನ್ನು ಬಲಿಕೊಟ್ಟು ನೀರು ಕೊಡಲಾಗದು. ಈಗ ಸಂಕಷ್ಟದಲ್ಲಿದ್ದೇವೆ ನಾವು. ನಾವೆಲ್ಲರೂ ಒಟ್ಟಿಗೆ ಹೋಗಬೇಕು. ಈ ಸಂಕಷ್ಟಕ್ಕೆ ಮೇಕೆದಾಟು ಯೋಜನೆಯೇ ಪರಿಹಾರ ಎಂದರು

ಹೀಗಾಗಿ ಎಲ್ಲ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ನಮ್ಮ ರಾಜಕೀಯ ಒಲವು, ನಿಲುವುಗಳನ್ನು ಬದಿಗಿಟ್ಟು, ರಾಜ್ಯದ ಹಿತಾಸಕ್ತಿಯ ದೃಷ್ಟಿಯಿಂದ ಒಟ್ಟಿಗೆ ಕೆಲಸ ಮಾಡೋಣ

About the Author

Vighnesh Pawar

Subscriber

View All Posts

Post navigation

Previous: Karnataka Chief Minister Siddaramaiah: ಸೈಬರ್ ಅಪರಾಧ ತೆಡೆಗೆ ಅತ್ಯಾಧುನಿಕ ವಿಧಿವಿಜ್ಞಾನ ಸಾಧನಗಳು; ತನಿಖಾ ಸಂಸ್ಥೆಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದಿರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
Next: ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಂಪಿ ಉತ್ಸವ ಫೆಬ್ರವರಿಯಲ್ಲಿ ನಡೆಸಲು ನಿರ್ಧಾರ

Related Stories

ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನ ಐದು ನಗರ ಪಾಲಿಕೆಗಳ ಸುಮಾರು 24 ಲಕ್ಷ ಆಸ್ತಿ ಮಾಲೀಕರಿಗೆ ವಾಟ್ಸಾಪ್‌ನಲ್ಲಿ ಉಚಿತ ಇ-ಖಾತಾ ವಿತರಣೆ: ಜಿಬಿಎ

The Bengaluru Live November 17, 2026 8:24 PM
ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಜಕ್ಕೂರು ರೈಲ್ವೆ ಮೇಲ್ಸೇತುವೆ, ಗೆದ್ದಲಹಳ್ಳಿ ರೈಲ್ವೆ ವೆಂಟ್ ಉದ್ಘಾಟನೆ; ₹436 ಕೋಟಿ ವೆಚ್ಚದ ಐಓಸಿ ಜಂಕ್ಷನ್ ರೋಟರಿ ಮೇಲ್ಸೇತುವೆಗೆ ನ.18ರಂದು ಶಂಕುಸ್ಥಾಪನೆ

The Bengaluru Live November 17, 2026 8:21 PM
ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಬೆಂಗಳೂರು ನಗರ

ತಲಘಟ್ಟಪುರ ಕೆರೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಅಸಮಾಧಾನ; ದಕ್ಷಿಣ ನಗರ ಪಾಲಿಕೆಗೆ ಮತ್ತೊಂದು ಅವಕಾಶ

The Bengaluru Live November 17, 2026 6:07 PM

Latest Post

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

November 17, 2026 11:59 PM
ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

November 17, 2026 11:02 PM
ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್ ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

November 17, 2026 11:02 PM
ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ ಬೆಂಗಳೂರು ಟೆಕ್ ಸಮ್ಮಿಟ್ 2026ರ ಮಳಿಗೆಯಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ಇಸ್ರೇಲ್ ಪ್ರತಿನಿಧಿಗಳ ಗುಂಪು ಚಿತ್ರ
  • ಕರ್ನಾಟಕ

ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ

November 17, 2026 10:57 PM
ಬೆಳಗಾವಿ ಲೋಕಾಯುಕ್ತ ಬಲೆಗೆ ಸಹಾಯಕ ಆಯುಕ್ತರ ಕಚೇರಿ ಗುಮಾಸ್ತ ಪದ್ಮಾಕರ ಪಾಟೀಲ: ಕಾನೂನು ವಿದ್ಯಾರ್ಥಿಯಿಂದ ₹2,000 ಲಂಚ ಸ್ವೀಕಾರ, 38 ಪ್ರಕರಣಗಳಿಗೆ ₹30,000 ಬೇಡಿಕೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ ಕಚೇರಿಯ ಕಮಾನು ಪ್ರವೇಶದ್ವಾರ
  • ಕರ್ನಾಟಕ

ಬೆಳಗಾವಿ ಲೋಕಾಯುಕ್ತ ಬಲೆಗೆ ಸಹಾಯಕ ಆಯುಕ್ತರ ಕಚೇರಿ ಗುಮಾಸ್ತ ಪದ್ಮಾಕರ ಪಾಟೀಲ: ಕಾನೂನು ವಿದ್ಯಾರ್ಥಿಯಿಂದ ₹2,000 ಲಂಚ ಸ್ವೀಕಾರ, 38 ಪ್ರಕರಣಗಳಿಗೆ ₹30,000 ಬೇಡಿಕೆ

November 17, 2026 10:49 PM
ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ: 31 ಜಿಲ್ಲೆಗಳ 15,000 ಕಿ.ಮೀ. ರಸ್ತೆಗೆ ₹10,000 ಕೋಟಿ; 15 ತಿಂಗಳಲ್ಲಿ ಕಾಮಗಾರಿ ಪೂರ್ಣ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ: 31 ಜಿಲ್ಲೆಗಳ 15,000 ಕಿ.ಮೀ. ರಸ್ತೆಗೆ ₹10,000 ಕೋಟಿ; 15 ತಿಂಗಳಲ್ಲಿ ಕಾಮಗಾರಿ ಪೂರ್ಣ

November 17, 2026 8:49 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

The Bengaluru Live November 17, 2026 11:59 PM
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

The Bengaluru Live November 17, 2026 11:02 PM
ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

The Bengaluru Live November 17, 2026 11:02 PM
ಬೆಂಗಳೂರು ಟೆಕ್ ಸಮ್ಮಿಟ್ 2026ರ ಮಳಿಗೆಯಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ಇಸ್ರೇಲ್ ಪ್ರತಿನಿಧಿಗಳ ಗುಂಪು ಚಿತ್ರ
  • ಕರ್ನಾಟಕ

ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ

The Bengaluru Live November 17, 2026 10:57 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ
  • ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ
  • ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್
  • ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ
©Copyright 2025 The Bengaluru Live All rights reserved. | MoreNews by AF themes.