ಬೆಂಗಳೂರು:
ಕಾಳಸಂತೆಯಲ್ಲಿ ಬ್ಲ್ಯಾಕ್ ಫಂಗಸ್ ಔಷಧಿ ಮಾರಾಟಕ್ಕೆ ಯತ್ನಿಸಿದ ಆರೋಪಿ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಮ್ ಮೋಹನ್ ಬಂಧಿತ ಆರೋಪಿ.
ಬಂಧಿತನಿಂದ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಗೆ ನೀಡಲಾಗುತ್ತಿದ್ದ 80 ಮಾತ್ರೆ ಮತ್ತು 17 ಇಂಜೆಕ್ಷನ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಆರೋಪಿ ನಿಗದಿತ ದರಕ್ಕಿಂತ ಎರಡು ಪಟ್ಟು ಹೆಚ್ಚು ದರದಲ್ಲಿ ಮಾರಾಟ ಮಾಡುತ್ತಿದ್ದ ಎಂದು ಮಾಹಿತಿ ನೀಡಿದರು.
After blackmarketing of Remdesivir & Oxygen cylinders..some indulging in hoarding & blackmarketing of injection reqd for BLACKFUNGUS treatment..CCB arrest accused..seize 17 injections & 80 tablets..selling at double the MRP.. @CPBlr @BlrCityPolice pic.twitter.com/zA4lnGGYxM
— Sandeep Patil IPS (@ips_patil) June 12, 2021
ವಶಪಡಿಸಿಕೊಂಡ ಚುಚ್ಚುಮದ್ದು ಹಾಗೂ ಮಾತ್ರೆಗಳ ಮೌಲ್ಯ ನಾಲ್ಕೂವರೆ ಲಕ್ಷ ರೂ. ಇರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.
ಕೆ.ಆರ್.ಪುರಂ ಕುಂದಲಹಳ್ಳಿ ಐಟಿಐ ಗೇಟ್ ಬಳಿ ಔಷಧಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು.
ಘಟನೆಗೆ ಸಂಬಂಧಿಸಿದಂತೆ ಕೆ.ಆರ್.ಪುರಂ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.