
on December 19, 2023, the Karnataka Chief Minister had demanded to urgently convene a High Power Committee meeting headed by Home Minister Amit Shah to provide drought relief
ಬೆಂಗಳೂರು: ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಶನಿವಾರ ಘೋಷಣೆ ಮಾಡಿದೆ.
ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ಇಷ್ಟು ದಿನಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.
ಸುಪ್ರೀಂಕೋರ್ಟ್ ಮಧ್ಯಪ್ರವೇಶದೊಂದಿಗೆ ಸೋಮವಾರದೊಳಗೆ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಒಪ್ಪಿಕೊಂಡಿದ್ದು, ಇದೀಗ ಬರ ಪರಿಹಾರ ಘೋಷಣೆ ಮಾಡಿದೆ.