Home ಅಪರಾಧ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಚಾರಣೆ, ಅರೆಸ್ಟ್ ಅಲ್ಲ

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಚಾರಣೆ, ಅರೆಸ್ಟ್ ಅಲ್ಲ

24
0

ಬೆಂಗಳೂರು, ಜೂ.11: ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಖ್ಯಾತ ಕನ್ನಡ ಚಲನಚಿತ್ರ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಿತ್ರದುರ್ಗ ನಿವಾಸಿ ರೇಣುಕಾ ಸ್ವಾಮಿ ಎಂಬವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಅವರನ್ನು ಮೈಸೂರಿನಲ್ಲಿರುವ ಫಾರ್ಮ್ ಹೌಸ್ ನಿಂದ ಬೆಂಗಳೂರು ಪೊಲೀಸರು ವಿಚಾರಣೆಗಾಗಿ ವಶಕ್ಕೆ ತಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಕೊಲೆ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಕನ್ನಡ ಚಲನಚಿತ್ರದ ನಟರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here