ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಸುನಿಲ್ ಬೋಸ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ವಿರುದ್ಧ 188706ಕ್ಕೂ ಹೆಚ್ಚು ಮತಗಳ ಅಂತರದಿಂದ ಸುನಿಲ್ ಬೋಸ್ ಗೆದ್ದಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.

2019ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಆರ್.ಧ್ರುವನಾರಾಯಣ್ ವಿರುದ್ಧ ಬಿಜೆಪಿಯಿಂದ ವಿ.ಶ್ರೀನಿವಾಸ್ ಸ್ಪರ್ಧಿಸಿ ಬಹಳ ಕಡಿಮೆ ಅಂತರದಿಂದ ಗೆದ್ದಿದ್ದರು. ಅದೇ ನನಗೆ ಕೊನೆ ಚುನಾವಣೆ ಎಂದು ಪ್ರಸಾದ್ ಘೋಷಿಸಿದ್ದರು. ವಯಸ್ಸಿನ ಕಾರಣಕ್ಕೆ ಶ್ರೀನಿವಾಸ್ ಪ್ರಸಾದ್ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದರು. ಹೀಗಾಗಿ ಬಿಜೆಪಿ ಬಸವರಾಜ್ ಅವರಿಗೆ ಟಿಕೆಟ್ ನೀಡಿತು. ಇತ್ತ ಮಹದೇವಪ್ರಸಾದ್ ಕಸರತ್ತು ನಡೆಸಿ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾದರು.