Home ಬೆಂಗಳೂರು ನಗರ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪ ನಾಗ ಸೇರಿ ಮೂವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಆದೇಶ

ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪ ನಾಗ ಸೇರಿ ಮೂವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಆದೇಶ

31
0

ಬೆಂಗಳೂರು: ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ಬುಧವಾರ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಿ.ಟಿ. ಅವರಿಗೆ ಮೈಸೂರಿನಲ್ಲಿರುವ ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಂಸ್ಥೆಯ ನಿರ್ದೇಶಕರನ್ನಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.

ಬೆಂಗಳೂರಿನ ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಶ್ ಸಾಸಿ ಅವರನ್ನು ಸ್ಮಾರ್ಟ್ ಆಡಳಿತ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಹಾಗೂ ಎಚ್‍ಆರ್‌ ಎಂಎಸ್ ಉಪ ಯೋಜನಾ ನಿರ್ದೇಶಕ ಮುಹಮ್ಮದ್ ಹಾರಿಸ್ ಸುಮೈರ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹಾಗೂ ಇಡಿಸಿಎಸ್ ನಿರ್ದೇಶಕರಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.

LEAVE A REPLY

Please enter your comment!
Please enter your name here