Home Uncategorized Champa Shashti 2022: ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದ ಬ್ರಹ್ಮರಥೋತ್ಸವ, ವಿಶೇಷ ಪೂಜೆ

Champa Shashti 2022: ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದ ಬ್ರಹ್ಮರಥೋತ್ಸವ, ವಿಶೇಷ ಪೂಜೆ

18
0
Advertisement
bengaluru

ಮಂಗಳೂರು: ಕರ್ನಾಟಕದ ಪ್ರಸಿದ್ಧ ನಾಗಕ್ಷೇತ್ರ, ಯಾತ್ರಾಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಚಂಪಾ ಷಷ್ಠಿ ಪ್ರಯುಕ್ತ ಕ್ಷೇತ್ರದ ದೇವರಾ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಡಗರ, ಸಂಭ್ರಮದಿಂದ ನಡೆಯಿತು. ರಥಾರೂಢರಾದ ಕುಕ್ಕೆ ಸುಬ್ರಹ್ಮಣ್ಯ ದೇವರು ರಥಬೀದಿಯಲ್ಲಿ ಸಂಚರಿಸಿದ್ದನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು. ಬೆಳಿಗ್ಗೆ 7.05ರ ವೃಶ್ಚಿಕ ಲಗ್ನದಲ್ಲಿ ದೇವರ ವಿಗ್ರಹಗಳ ಬ್ರಹ್ಮರಥಾರೋಹಣ‌ ನಡೆಯಿತು. ಚಿಕ್ಕ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾದರು. ಚಿಕ್ಕ ರಥೋತ್ಸವ ನೆರವೇರಿದ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. ಕೊವಿಡ್ ನಿರ್ಬಂಧಗಳ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಬ್ರಹ್ಮರಥೋತ್ಸವಕ್ಕೆ ಹೆಚ್ಚಿನ ಜನರು ಸೇರಲು ಅವಕಾಶ ಸಿಕ್ಕಿರಲಿಲ್ಲ.

ದೇವಸ್ಥಾನದಲ್ಲಿ ಬೆಳ್ಳಿ ರಥೋತ್ಸವ ಹಿನ್ನೆಲೆಯಲ್ಲಿ ಸ್ವಾಮಿಗೆ ಇಂದು ವಿಶೇಷ ಅಭಿಷೇಕ ಮತ್ತು ಪೂಜೆಗಳು ನಡೆಯಲಿವೆ. ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಣೆ ಕುರಿತು ಬ್ಯಾನರ್ ಹಾಕಿದ್ದು ವಿವಾದಕ್ಕೆ ಕಾರಣವಾಗಿತ್ತು. ಉತ್ಸವದ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 626ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 49 ಪಿಎಸ್ಐ, 14 ಇನ್​ಸ್ಪೆಕ್ಟರ್, 16 ಎಸಿಪಿ, 158 ಎಎಸ್ಐ, 148 ಹೆಡ್​ಕಾಸ್ಟೇಬಲ್, 236 ಪಿಸಿ, 22 ಹೋಂಗಾರ್ಡ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

ದೂರದ ಊರುಗಳಿಂದ ಭಕ್ತರ ದಂಡು

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಚಂಪಾಷಷ್ಠಿಯಲ್ಲಿ ಪಾಲ್ಗೊಳ್ಳಲೆಂದು ದೂರದ ಊರುಗಳಿಂದ ಸಾಕಷ್ಟು ಭಕ್ತರು ಬಂದಿದ್ದಾರೆ. ಭಕ್ತರ ಅನುಕೂಲಕ್ಕಾಗಿ ತಾತ್ಕಾಲಿಕ ಆಸ್ಪತ್ರೆ ಆರಂಭಿಸಲಾಗಿದೆ. ಕೃಷಿಮೇಳವೂ ಜನರ ಗಮನ ಸೆಳೆಯುತ್ತಿದೆ. ಜಾತ್ರೆಯ ಹಿನ್ನೆಲೆಯಲ್ಲಿ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ವಿವಿಧೆಡೆ ಅಳವಡಿಸಿರುವ ಪ್ರಭಾವಳಿಗಳು ಮತ್ತು ದೇವರ ಕಲಾಕೃತಿಗಳು ಜಾತ್ರೆಯ ವೈಭವವನ್ನು ಹೆಚ್ಚಿಸಿವೆ. ರಥೋತ್ಸವಕ್ಕೆ ಸೇರುವವರ ಸಂಖ್ಯೆ ದೊಡ್ಡಮಟ್ಟದಲ್ಲಿರುವ ಕಾರಣ ಕಾಲ್ತುಳಿದಂಥ ಅಪಾಯ ಉಂಟಾಗಬಾರದು ಎನ್ನುವ ಕಾರಣಕ್ಕೆ ರಥ ಎಳೆಯುವವರಿಗೆ ಮೊದಲೇ ಪಾಸ್​ಗಳನ್ನು ನೀಡಲಾಗಿತ್ತು.

bengaluru bengaluru

ಈ ಬಾರಿ ರಥಕ್ಕೆ ಬಳಸಿದ ಬೆತ್ತವನ್ನು ದೇವಳವೇ ಉಪಯೋಗಿಸಲು ನಿರ್ಧರಿಸಿದೆ. ದೇಗುಲದಲ್ಲಿ ವಿವಿಧ ಸೇವೆ ಸಲ್ಲಿಸಿದವರಿಗೆ ಕೊಡುವ ಪ್ರಸಾದದಲ್ಲಿ ಬೆತ್ತದ ತುಂಡನ್ನು ನೀಡಲಾಗುತ್ತದೆ. ಭಕ್ತರಲ್ಲಿ ಬೆತ್ತಕ್ಕಾಗಿ ಪೈಪೋಟಿ ನಡೆಯಬಾರದು, ಭಕ್ತರಿಗೆ ಕೊಡಲು ಬೆತ್ತದ ತುಂಡು ಕಡಿಮೆಯಾಗಬಾರದು ಎನ್ನುವ ಕಾರಣಕ್ಕೆ ದೇಗುಲ ಸಮಿತಿ ಈ ನಿರ್ಧಾರಕ್ಕೆ ಬಂದಿದೆ.

ಕುಕ್ಕೆಯಲ್ಲಿ ಎಡೆಸ್ನಾನ ಪುನಾರಂಭ

ಚಂಪಾಷಷ್ಠಿ ಜಾತ್ರಾ ಮಹೋತ್ಸವದಲ್ಲಿ ಮಡೆಸ್ನಾನಕ್ಕೆ ಸುಪ್ರೀಂ ಕೋರ್ಟ್ ‌ತಡೆಯಾಜ್ಞೆ ಇರುವ ಹಿನ್ನೆಲೆಯಲ್ಲಿ ಈ ಬಾರಿ ಭಕ್ತರಿಗೆ ಎಡೆಸ್ನಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇತ್ತೀಚೆಗೆ ಕೊವಿಡ್ ಕಾರಣದಿಂದ ಈ ಪದ್ಧತಿ ನಿಂತಿತ್ತು. ದೇವಾಲಯದ ಅಂಗಳದ ಸುತ್ತಲೂ ಎಲೆಗಳನ್ನು


bengaluru

LEAVE A REPLY

Please enter your comment!
Please enter your name here