ಆಂಧ್ರಪ್ರದೇಶ: ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅಮರಾವತಿ ಇನ್ನರ್ ರಿಂಗ್ ರೋಡ್ ಪ್ರಕರಣಕ್ಕೆ ಚಂದ್ರಬಾಬು ನಾಯ್ಡುಗೆ ಜಾಮೀನು ನೀಡಲಾಗಿದೆ. ಚಂದ್ರಬಾಬು ನಾಯ್ಡು ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಾದ ಆಲಿಸಿದ ನ್ಯಾಯಾಲಯ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 16ರವರೆಗೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸದಂತೆ ನ್ಯಾಯಾಲಯ ಮಧ್ಯಂತರ ಆದೇಶವನ್ನು ನೀಡಿದೆ.
ಮಹಿಷಾ ಪೂಜೆ ಮಾಡಬೇಡ ಅಂತ ಹೇಳಲು ನೀನ್ಯಾರು?: ಪ್ರತಾಪ್ ಸಿಂಹ ವಿರುದ್ಧ ಲಕ್ಷ್ಮಣ್ ವಾಗ್ದಾಳಿ
ಇನ್ನು ಅಂಗಲ್ಲು ಹಿಂಸಾಚಾರ ಪ್ರಕರಣದಲ್ಲಿ ಯಾರನ್ನೂ ಬಂಧಿಸದಂತೆ ಸಿಐಡಿಗೆ ನ್ಯಾಯಾಲಯ ಸೂಚನೆ ನೀಡಿದೆ. ಸಿಐಡಿ ವಿಜಯವಾಡ ಎಸಿಬಿ ನ್ಯಾಯಾಲಯ ಸಲ್ಲಿಸಿದ್ದ ಇನ್ನರ್ ರಿಂಗ್ ರೋಡ್ ಅರ್ಜಿಗೆ ಹೈಕೋರ್ಟ್ ತಡೆ ನೀಡಿದೆ. 2014-19ರ ಅವರ ಅವಧಿಯಲ್ಲಿ ಇವರು ನೇತೃತ್ವದಲ್ಲಿ ಸರ್ಕಾರ ಆಂಧ್ರಪ್ರದೇಶ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ನಡೆಸಿದೆ ಎಂದು ಆರೋಪಿಸಿ, ಸೆಪ್ಟೆಂಬರ್ 9 ರಂದು ನಂದ್ಯಾಲ್‌ನಿಂದ ರಾಜ್ಯ ಸಿಐಡಿ ಬಂದಿಸಿತ್ತು.
The post Chandrababu Naidu: ಆಂಧ್ರ ಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು appeared first on Ain Live News.