Home ರಾಜಕೀಯ ಚಂದ್ರಶೇಖರ್, ಕರಂದ್ಲಾಜೆ, ನಾರಾಯಣ ಸ್ವಾಮಿ, ಖೂಬಾ ನೂತನ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ಚಂದ್ರಶೇಖರ್, ಕರಂದ್ಲಾಜೆ, ನಾರಾಯಣ ಸ್ವಾಮಿ, ಖೂಬಾ ನೂತನ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

78
0

ನವದೆಹಲಿ:

ಬುಧವಾರ ಜರುಗಿದ ಕೇಂದ್ರ ಸಂಪುಟ ಪುನರ್ ರಚನೆಯಲ್ಲಿ ರಾಜ್ಯದ ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್ , ನಾರಾಯಣ ಸ್ವಾಮಿ,ಹಾಗೂ ಭಗವಂತ್ ಖೂಬಾ ಸೇರಿ ನಾಲ್ವರು ಸಂಸದರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜ್ಯ ಖಾತೆ ಸಚಿವರಾಗಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ಬೀದರ್ ಸಂಸದ ಭಗವಂತ್ ಖೂಬಾ, ಚಿತ್ರದುರ್ಗದ ಸಂಸದ ಎ. ನಾರಾಯಣಸ್ವಾಮಿ, ರಾಜ್ಯಸಭೆಗೆ ಆಯ್ಕೆಯಾಗಿದ್ದ ರಾಜೀವ್ ಚಂದ್ರಶೇಖರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ಜು.7 ರಂದು ಸಂಜೆ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ಮೊದಲಿಗರಾಗಿ ರಾಜೀವ್ ಚಂದ್ರಶೇಖರ್ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಚಂದ್ರಶೇಖರ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು .ಒಟ್ಟು ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ತದನಂತರ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಕೂಡಾ ರಾಜ್ಯ ಖಾತೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿಯ ಹಿರಿಯ ಮುಖಂಡೆಯಾಗಿರುವ ಶೋಭಾ ಕರಂದ್ಲಾಜೆ 2014 ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.

ಇನ್ನು ಚಿತ್ರದುರ್ಗ ಕ್ಷೇತ್ರದ ಸಂಸದ ಎ. ನಾರಾಯಣ ಸ್ವಾಮಿ ಕೂಡಾ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸಂಸದರಾಗಿ ಆಯ್ಕೆಯಾದ ಮೊದಲ ಅವಧಿಯಲ್ಲೇ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಹೆಗ್ಗಳಿಕೆಗೆ ಎ.ನಾರಾಯಣ ಸ್ವಾಮಿ ಪಾತ್ರರಾದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ನಿವಾಸಿಯಾದ ಇವರು ಕೃಷಿ, ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, 2019ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಬಳಿಕ ಬೀದರ್ ಸಂಸದ ಭಗವಂತ ಖೂಬಾ ಬಿಜೆಪಿಯ ಬೀದರ್ ಸಂಸದ ಭಗವಂತ ಖೂಬಾ 17 ನೇ ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೃಷಿಕರೂ ಆಗಿರುವ ಖೂಬಾ, ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here