Chandrayaan-3 success: The place where luarn lander landed named as 'Shiva Shakti', August 23 is now National Space Day: PM Modi
ಬೆಂಗಳೂರು:
ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದ್ದು ಇಡೀ ಮನುಕುಲಕ್ಕೆ ಮಹತ್ವಪೂರ್ಣವಾದದ್ದು, ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಅಲ್ಲದೆ ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ. ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ ಎಂದ ಮೋದಿ, ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್ ಎಂದು ಹೆಸರಿಟ್ಟರು. ಈ ತಿರಂಗ ಪಾಯಿಂಟ್ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್ ಇನ್ ಇಂಡಿಯಾ ಈಗ ಚಂದ್ರನವರೆಗೂ ತಲುಪಿದೆ ಎಂದು ಖುಷಿಯಿಂದ ಮುಕ್ತಕಂಠದಿಂದ ಇಸ್ರೊ ವಿಜ್ಞಾನಿಗಳನ್ನು ಶ್ಲಾಘಿಸಿ ಬೆಂಗಳೂರಿನ ಇಸ್ರೊ ಕಚೇರಿಯಲ್ಲಿಂದು ಘೋಷಿಸಿದರು.
Now onwards, every year, 23rd August will be celebrated as the National Space Day. pic.twitter.com/R2sR56bvst
— PMO India (@PMOIndia) August 26, 2023
ಚಂದ್ರನ ಮೇಲೆ ಪ್ರಜ್ಞಾನ್ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್ ಸೆಂಟರ್ನಲ್ಲಿ ಪ್ರಧಾನಿ ಮೋದಿ ಹೇಳಿದರು. ಆಗಸ್ಟ್ 23 ರ ಆ ದಿನ ನನ್ನ ಕಣ್ಣ ಮುಂದೆ ಪ್ರತಿ ಸೆಕೆಂಡ್ ಮತ್ತೆ ಮತ್ತೆ ತಿರುಗುತ್ತಿದೆ, ನಿಮ್ಮ ಸಾಧನೆಯನ್ನು ಎಷ್ಟೇ ಕೊಂಡಾಡಿದರೂ ಅದು ಕಡಿಮೆಯೇ. ಚಂದ್ರನ ಮೇಲೆ ಪ್ರಜ್ಞಾನ್ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್ ಸೆಂಟರ್ನಲ್ಲಿ ಪ್ರಧಾನಿ ಮೋದಿ ಹೇಳಿದರು.
ವಿಶ್ವದ ದೊಡ್ಡ ದೊಡ್ಡ ಸಮಸ್ಯೆಗಳಿಗೆ ಭಾರತ ಪರಿಹಾರ ಕಂಡಿದೆ. ನಿಮ್ಮೆಲ್ಲರ ಈ ಸಾಧನೆ ಇತರರಿಗೆ ಸ್ಪೂರ್ತಿದಾಯಕವಾಗಿದೆ. ನೀವೆಲ್ಲರೂ ಸೇರಿ ಭಾರತದ ಕನಸನ್ನು ನನಸು ಮಾಡಿದ್ದೀರಿ. ನಾನು ವಿದೇಶದಲ್ಲಿದ್ದೆ, ಆದರೆ ನನ್ನ ಹೃದಯವು ಎಲ್ಲಾ ಸಮಯದಲ್ಲೂ ಸಂಪೂರ್ಣವಾಗಿ ನಿಮ್ಮೊಂದಿಗೆ ಇತ್ತು ಎಂದು ವಿಜ್ಞಾನಿಗಳನ್ನು ಉದ್ದೇಶಿಸಿ ಮೋದಿ ಹೇಳಿದರು.
