ಬೆಂಗಳೂರು:
ಛತ್ರಪತಿ ಶಿವಾಜಿ ಮಹಾರಾಜರು ಭಾರತದ ಸ್ವಾಭಿಮಾನ ಹಾಗೂ ಭಾರತದ ಏಕತೆ, ಅಖಂಡತೆಯ ಪ್ರತೀಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕರ್ನಾಟಕ ಮರಾಠ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಜಯಂತೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಭಾರತ ದೇಶದ ವೀರ ಹೋರಾಟಗಾರ ಮೊಘಲ್ ಸಾಮ್ರಾಜ್ಯದ ವಿರುದ್ಧ ಸಮರ ಸಾರುವ ಮೂಲಕ ಇಡೀ ದೇಶವನ್ನು ವೀರ ಛತ್ರಪತಿ ಶಿವಾಜಿ ಮಹಾರಾಜರು ರಕ್ಷಣೆ ಮಾಡಿದರು. ಅವರ ದಿಟ್ಟತನದಿಂದ ಭಾರತದಲ್ಲಿ ಹಿಂದೂ ಸಾಮ್ರಾಜ್ಯ ಗಟ್ಟಿಯಾಗಿ ಉಳಿಯಲು ಸಾಧ್ಯವಾಯಿತು. ಸಮಾಜದ ಎಲ್ಲಾ ವರ್ಗದ ಜನರನ್ನೂ ಸಮಾನವಾಗಿ ನೋಡಿದ ಶಿವಾಜಿಯವರನ್ನು ಪ್ರತಿಯೊಬ್ಬ ಭಾರತೀಯನೂ ಪೂಜನೀಯ ಭಾವದಿಂದ ನೋಡುತ್ತಾನೆ. ಅವರ ಹೆಸರಿನಲ್ಲಿಯೇ ಸ್ಪೂರ್ತಿ, ಶಕ್ತಿ ಹಾಗೂ ಪ್ರೇರಣೆ ನೀಡುತ್ತದೆ. ಶಿವಾಜಿ ಮಹಾರಾಜರ ಅಭಿಮಾನದ ಸಂಕೇತವಾಗಿ ಜನ್ಮದಿನವನ್ನು ಆಚರಿಸಲಾಗಿದೆ.
ಮುಂಬರುವ ದಿನಗಳಲ್ಲಿ ಇಡೀ ರಾಜ್ಯದಲ್ಲಿ ಶಿವಾಜಿ ಮಹಾರಾಜರ ತತ್ವಾದರ್ಶಗಳನ್ನು ಹಾಗೂ ರಾಷ್ಟ್ರಭಕ್ತಿಯ ಭಾವನೆ ತುಂಬುವ ಕೆಲಸವನ್ನು ಮಾಡಲಾಗುವುದು. ಮರಾಠ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಗಿದ್ದು, ಶ್ರೀ ಮಾಣಿಕ್ ರಾವ್ ಮೂಳೆಯವರನ್ನು ಅಧ್ಯಕ್ಷರನ್ನಾಗಿ ಮಾಡಲು ತೀರ್ಮಾನಿಸಲಾಗಿದೆ. ಧ್ವನಿಯಿಲ್ಲದ ದುರ್ಬಲ ವರ್ಗಗಳನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ @BSBommai ಅವರು ಛತ್ರಪತಿ ಶ್ರೀ ಶಿವಾಜಿ ಮಹಾರಾಜ್ ಅವರ 395 ನೇ ಜಯಂತಿ ಉತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಇಂದು ಸದಾಶಿವನಗರ ಬಳಿಯಿರುವ ಶಿವಾಜಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.
— CM of Karnataka (@CMofKarnataka) February 19, 2022
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ @drashwathcn, ಶ್ರೀ ಗೋಸಾಯಿ ಮಹಾಸಂಸ್ಥಾನಮಠದ ಮಂಜುನಾಥ ಭಾರತೀ ಶ್ರೀಗಳು, ಇತರರು ಉಪಸ್ಥಿತರಿದ್ದರು. pic.twitter.com/0JDH9v1fIx
ಸಮಾರಂಭದಲ್ಲಿ ಗೋಸಾಯಿ ಮಹಾಸಂಸ್ಥಾನ ಮಠದ ಮಂಜುನಾಥ ಭಾರತಿ ಸ್ವಾಮೀಜಿ, ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ , ಮಾಜಿ ಸಚಿವ ಪಿಜಿಆರ್ ಸಿಂಧ್ಯಾ, ಮಾಜಿ ಶಾಸಕ ಎಂಜಿ ಮೂಳೆ, ಮರಾಠಾ ಸಮುದಾಯದ ಮುಖಂಡ ಮನೋಜ ಕುಮಾರ ಮತ್ತು ಇತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.