Home ರಾಜಕೀಯ BR Patil| ಬಿ.ಆರ್.ಪಾಟೀಲ್ ಆರೋಪಕ್ಕೆ ಮುಖ್ಯಮಂತ್ರಿಗಳು ಹಾಗೂ ವಸತಿ ಸಚಿವರು ಸ್ಪಷ್ಟಣೆ ನೀಡುತ್ತಾರೆ: ಡಿ.ಕೆ. ಶಿವಕುಮಾರ್

BR Patil| ಬಿ.ಆರ್.ಪಾಟೀಲ್ ಆರೋಪಕ್ಕೆ ಮುಖ್ಯಮಂತ್ರಿಗಳು ಹಾಗೂ ವಸತಿ ಸಚಿವರು ಸ್ಪಷ್ಟಣೆ ನೀಡುತ್ತಾರೆ: ಡಿ.ಕೆ. ಶಿವಕುಮಾರ್

11
0
Our family is always ready to face ED inquiry: DCM D.K. Shivakumar

ಬೆಂಗಳೂರು: ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ ಕೊಟ್ಟವರಿಗೆ ಮಾತ್ರ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಆರೋಪಕ್ಕೆ ಸಂಬಂಧಿಸಿದಂತೆ ನಾನು ಏನು ಹೇಳಬೇಕೋ ಹೇಳಿದ್ದೇನೆ. ಉಳಿದಂತೆ ಈ ವಿಚಾರವಾಗಿ ಮುಖ್ಯಮಂತ್ರಿ ಹಾಗೂ ವಸತಿ ಸಚಿವರು ಸ್ಪಷ್ಟಣೆ ನೀಡುತ್ತಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಶಾಸಕ ಬಿ.ಆರ್ ಪಾಟೀಲ್ ಅವರು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯ್ತಿ ಸದಸ್ಯರು ಕೂಡ ಅಧಿಕಾರಿಗಳು ಹಣ ಪಡೆದಿದ್ದಾರೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಈ ವಿಚಾರವಾಗಿ ಏನು ಹೇಳಬೇಕೋ ಹೇಳಿದ್ದೇನೆ. ಉಳಿದಂತೆ ಈ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ವಸತಿ ಸಚಿವರು ಸ್ಪಷ್ಟನೆ ನೀಡುತ್ತಾರೆ” ಎಂದು ಹೇಳಿದರು.

ಶಾಸಕರ ಗಮನಕ್ಕೆ ಬಾರದೇ ಅನುದಾನ ತೆಗೆದುಕೊಂಡು ಹೋಗಲಾಗುತ್ತಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಯಾರು ಏನು ಹೇಳಿದ್ದಾರೆ ಎಂದು ನನಗೆ ಮಾಹಿತಿ ಇಲ್ಲ” ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here