ಬೆಂಗಳೂರು:
ಬೆಳಗಾವಿಯಲ್ಲಿ ಡಿಸೆಂಬರ್ 5ರಂದು ನಡೆಯುವ ಬಿಜೆಪಿ ಕೋರ್ ಕಮಿಟಿ ಸಭೆ ಹಾಗು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 4 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿಗೆ ತೆರಳಲಿದ್ದಾರೆ.
ಶುಕ್ರವಾರ ಮಧ್ಯಾಹ್ನ 2.15 ಕೆಂಪೇಗೌಡ ವಿಮಾನ ನಿಲ್ದಾಣದಿಂದ ಏರ್ ಇಂಡಿಯಾ ವಿಮಾನದಲ್ಲಿ ಬೆಳಗಾವಿಯಲ್ಲಿ ತೆರಳಲಿರುವ ಯಡಿಯೂರಪ್ಪ ಸಂಜೆ 7.30 ಕ್ಕೆ ಯು.ಕೆ 27 ಹೋಟೆಲ್ ನಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಂತರ ಅಂದು ರಾತ್ರಿ ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಡಿಸೆಂಬರ್ 5 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅವರು ಭಾಗವಹಿಸಲಿದ್ದು ಅಂದು ಸಂಜೆ 7.30 ಕ್ಕೆ ಏರ್ ಇಂಡಿಯಾ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ ಎಂದು ಮುಖ್ಯಮಂತ್ರಿಯವರ ಕಚೇರಿ ತಿಳಿಸಿದೆ.