ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ DCM ಡಿಕೆ ಶಿವಕುಮಾರ್ ಭೇಟಿ ಮಾಡಿದ್ದಾರೆ. ಇದರೊಟ್ಟಿಗೆ ಸಚಿವ ಮಹದೇವಪ್ಪ, ಹಾಗೂ ಜಿ ಪರಮೇಶ್ವರ್ ಕೂಡ ಜೊತೆಗಿದ್ದರು.
ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ನಿವಾಸದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಜೊತೆ ಕಾಂಗ್ರೆಸ್ ನಾಯಕರು ಸುಮಾರು 40 ನಿಮಿಷ ಮಾತನಾಡಿದ್ದು, ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಮನವಿ ಮಾಡಿದ್ದಾರೆ.
ಭೇಟಿ ಬಳಿಕ ಡಿಕೆ ಶಿವಕುಮಾರ್ ಮಾತನಾಡಿದ್ದು, ರಾಜ್ಯದ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚಿಸಿದ್ದೇವೆ. ರಾಜ್ಯಕ್ಕೆ ಏನೇನ್ ಬಾಕಿ ಇದೆ ಅಂತೆಲ್ಲ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.
ಮೋದಿಗೆ ಸಿಎಂ ಸಿದ್ದರಾಮಯ್ಯ ಎಲ್ಲಾ ವಿವರಣೆ ನೀಡಿದ್ದಾರೆ. ಭದ್ರಾ ಮೇಲ್ದಂಡೆ, ಮೇಕೆದಾಟು ಕುಡಿಯುವ ನೀರಿನ ಯೋಜನೆ, ಮಹದಾಯಿ, ಬೆಂಗಳೂರು ಅಭಿವೃದ್ಧಿ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದೇವೆ. ನಾವು ಹೆಚ್ಚು ತೆರಿಗೆ ನೀಡುತ್ತೇವೆ ಎಂದು ವಿವರಣೆ ನೀಡಿದ್ದೇವೆ. ಎಲ್ಲವನ್ನೂ ಪರಿಶೀಲನೆ ಮಾಡುತ್ತೇವೆ ಎಂದು ಮೋದಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ನಮಗೆ ಒಂದು ಗಿಫ್ಟ್ ಸಿಟಿ ಬೇಕೆಂದು ಪ್ರಧಾನಿಗೆ ಬೇಡಿಕೆ ಇಟ್ಟಿದ್ದೇವೆ. ಗುಜರಾತ್ನಲ್ಲಿ ಇರುವಂತೆ ಗಿಫ್ಟ್ ಸಿಟಿ ನಮಗೂ ಬೇಕೆಂದು ಬೇಡಿಕೆ ಇಡಲಾಗಿದೆ. ದೇಶದಲ್ಲಿ ಒಂದೇ ಕಡೆ ಗಿಫ್ಟ್ ಸಿಟಿ ಕೊಡೋಕೆ ಸಾಧ್ಯವೆಂದು ಹೇಳಿದ್ದಾರೆ. ಆದರೂ ಪರಿಶೀಲನೆ ಮಾಡುತ್ತೇವೆಂದು ಮೋದಿ ಹೇಳಿರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.