Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಕಲಿಕಾ ನಿರ್ವಹಣಾ ವ್ಯವಸ್ಥೆಯಡಿ ಸ್ಮಾರ್ಟ್ ತರಗತಿಗಳ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿ.ಸಿ. ವಿತರಣೆ
  • ಶಿಕ್ಷಣ
  • ಬೆಂಗಳೂರು ನಗರ

ಕಲಿಕಾ ನಿರ್ವಹಣಾ ವ್ಯವಸ್ಥೆಯಡಿ ಸ್ಮಾರ್ಟ್ ತರಗತಿಗಳ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿ.ಸಿ. ವಿತರಣೆ

The Bengaluru Live June 23, 2021 5:00 PM 1 minute read
ಕಲಿಕಾ ನಿರ್ವಹಣಾ ವ್ಯವಸ್ಥೆಯಡಿ ಸ್ಮಾರ್ಟ್ ತರಗತಿಗಳ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿ.ಸಿ. ವಿತರಣೆ

ಕಲಿಕಾ ನಿರ್ವಹಣಾ ವ್ಯವಸ್ಥೆಯಡಿ ಸ್ಮಾರ್ಟ್ ತರಗತಿಗಳ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿ.ಸಿ. ವಿತರಣೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಂದು ಉನ್ನತ ಶಿಕ್ಷಣ ಇಲಾಖೆ ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಿಜಿಟಲ್ ಕಲಿಕಾ ಯೋಜನೆಯಡಿ 2500 ಸ್ಮಾರ್ಟ್ ತರಗತಿಗಳನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿ.ಸಿ.ಗಳನ್ನು ಸಾಂಕೇತಿಕವಾಗಿ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಸರ್ಕಾರಿ ಕಾಲೇಜುಗಳಲ್ಲಿ 2,500 ತರಗತಿಗಳನ್ನು ಸ್ಮಾರ್ಟ್ ತರಗತಿ ಕೊಠಡಿಗಳಾಗಿ ಉನ್ನತೀಕರಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 6,500 ತರಗತಿ ಕೊಠಡಿಗಳನ್ನು ಸ್ಮಾರ್ಟ್ ತರಗತಿಗಳಾಗಿ ಪರಿವರ್ತಿಸಲಾಗುವುದು ಎಂದರು.

2021-22ನೇ ಸಾಲಿನಲ್ಲಿ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾತಿ ಪಡೆಯುವ ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಟ್ಯಾಬ್ಲೆಟ್ ಪಿ.ಸಿ. ನೀಡಲಾಗುವುದು ಎಂದು ತಿಳಿಸಿದರು.

ಡಿಜಿಟಲ್ ಕಲಿಕೆ ಯೋಜನೆಯ ಮೂಲಕ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳು 21ನೇ ಶತಮಾನದ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಲು ಅವರನ್ನು ಸಿದ್ಧಗೊಳಿಸಲಾಗುತ್ತಿದೆ. ಹಾಗೂ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ನಿರ್ಲಕ್ಷಿತ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಕಲಿಕೆಯಿಂದ ವಂಚಿತರಾಗದಂತೆ, ಈ ಕಾರ್ಯಕ್ರಮ ಖಾತ್ರಿಪಡಿಸುತ್ತದೆ ಎಂದರು.

  • Chief Minister distributes Tablet PC for Students in Karnataka1
  • Students with tablet in Karnataka
  • Chief Minister distributes Tablet PC for Students in Karnataka

ಈ ತರಗತಿ ಕೊಠಡಿಗಳಲ್ಲಿ Projector, white Board, Android Box, UPS ಮತ್ತು Internet ಸೌಲಭ್ಯವಿದ್ದು ಆಧುನಿಕ ಬೋಧನೆ-ಕಲಿಕೆಗಳಿಗೆ ಪೂರಕವಾಗಿರಲಿದೆ. ಕೋವಿಡ್ ಸಾಂಕ್ರಾಮಿಕದಿಂದ ಉಂಟಾಗಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲೂ ವಿದ್ಯಾರ್ಥಿಗಳ ಕಲಿಕೆ ನಿರಾತಂಕವಾಗಿ ಮುಂದುವರಿಯಬೇಕು ಎನ್ನುವ ಉದ್ದೇಶದಿಂದ ಡಿಜಿಟಲ್ ಲರ್ನಿಂಗ್ ಯೋಜನೆಯನ್ನು ಸರ್ಕಾರ ಅನುಷ್ಠಾನಗೊಳಿಸಿದೆ ಎಂದರು.

ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ಅವರು ಮಾತನಾಡಿ, ಡಿಜಿಟಲ್ ಕಲಿಕೆ ಯೋಜನೆಯ ಪ್ರಥಮ ಹಂತದಲ್ಲಿ 27.77 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸ್ಮಾರ್ಟ್ ತರಗತಿಗಳನ್ನು ಅನುಸ್ಥಾಪಿಸಲಾಗಿದೆ.

ಒಟ್ಟು 1.55 ಲಕ್ಷ ವಿದ್ಯಾರ್ಥಿಗಳಿಗೆ 163 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್ ಕಲಿಕೆ ಯೋಜನೆಯ ಅಂಗವಾಗಿ ಟ್ಯಾಬ್ಲೆಟ್ ಪಿ.ಸಿ.ಗಳನ್ನು ವಿತರಿಸಲಾಗುತ್ತಿದೆ. 2020-21ನೇ ಸಾಲಿನಲ್ಲಿ ಉನ್ನತ ಶಿಕ್ಷಣ ವ್ಯಾಪ್ತಿಯ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ, 87 ಸರ್ಕಾರಿ ಪಾಲಿಟೆಕ್ನಿಕ್‍ಗಳ ಪ್ರಥಮ-ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಹಾಗೂ 14 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಪ್ರಥಮ-ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳಿಗೆ, ಈ ಸೌಲಭ್ಯವನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಉನ್ನತ ಶಿಕ್ಷಣ ಸಚಿವರು ಹಾಗೂ ಉಪಮುಖ್ಯಮಂತ್ರಿಗಳಾದ ಡಾ|| ಅಶ್ವತ್ಥ್ ನಾರಾಯಣ, ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಕುಮಾರ್ ನಾಯಕ್, ಸಮಾಜ ಕಲ್ಯಾಣ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಶ್ರೀಮತಿ ನಾಗಾಂಬಿಕಾ ದೇವಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. (2/2)

— CM of Karnataka (@CMofKarnataka) June 23, 2021

4.07 ಕೋಟಿ ರೂ.ಗಳ ವೆಚ್ಚದಲ್ಲಿ ಆನ್‍ಲೈನ್-ಆಫ್‍ಲೈನ್ ಎರಡೂ ಪದ್ಧತಿಯ ಕಲಿಕೆಗೆ ಅನುರೂಪವಾದ ‘ಕರ್ನಾಟಕ ಎಲ್.ಎಂ.ಎಸ್ʼ ಎಂಬ ಸಮಗ್ರ ಕಲಿಕಾ ನಿರ್ವಹಣಾ ವೇದಿಕೆಯ ಮೂಲಕ ಪರಿಷ್ಕøತ ಮತ್ತು ಆಧುನಿಕ ರೀತಿಯ ಬೋಧನೆ-ಕಲಿಕೆಗಳನ್ನು ರೂಢಿಗೆ ತರಲಾಗುವುದರಿಂದ ಶಿಕ್ಷಣ ಕ್ಷೇತ್ರದಲ್ಲಿ ಒಂದು ಕ್ರಾಂತಿಕಾರಿ ಬದಲಾವಣೆ ತರಲು ಸಾಧ್ಯ ಎಂದು ಹೇಳಿದರು.

ಕರ್ನಾಟಕ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಿಲಾಗಿದ್ದು, ವಿದ್ಯಾರ್ಥಿಗಳು ಈ ಸೌಲಭ್ಯದ ಸದುಪಯೋಗ ಪಡೆಯಬೇಕೆಂದರು.

ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್ ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಸುರಕ್ಷಿತ ವಾತಾವರಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ: ಎಸ್ ಒಪಿ ಬಿಡುಗಡೆ- ಸುರೇಶ್ ಕುಮಾರ್
Next: ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ- ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Related Stories

ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM
ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

The Bengaluru Live November 13, 2026 4:40 PM

Latest Post

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

November 13, 2026 7:55 PM
ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

November 13, 2026 7:40 PM
ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

November 13, 2026 4:40 PM
ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ ಸಿಎಂ ಡಿ.ಕೆ. ಶಿವಕುಮಾರ್ ಅವರ ಎಕ್ಸ್ ಪೋಸ್ಟ್ ಸ್ಕ್ರಿನ್ಶಾಟ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

November 13, 2026 4:22 PM
ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ ಪ್ರಧಾನಿ ನರೇಂದ್ರ ಮೋದಿಗೆ ಮೈಸೂರಿನಲ್ಲಿ ಸ್ವಾಗತ
  • ಕರ್ನಾಟಕ
  • ಸಿನಿಮಾ

ಪ್ರಧಾನಿ ಮೋದಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ‘COSMOS-Mysuru’ ಲೋಕಾರ್ಪಣೆ

November 13, 2026 4:13 PM
ರೆಡ್ ಲೈನ್ ಅನುಮೋದನೆ, ಡಬಲ್ ಡೆಕ್ಕರ್‌ಗೆ ಅನುಮತಿ, ಪಶ್ಚಿಮ ಘಟ್ಟ ಅಧಿಸೂಚನೆ ಮರುಪರಿಶೀಲನೆ: ಪ್ರಧಾನಿ ಮೋದಿಗೆ ರಾಜ್ಯದ ಮನವಿ ಪತ್ರ ನಮ್ಮ ಮೆಟ್ರೋ ನಿಲ್ದಾಣದ ಮಾದರಿಯನ್ನು ವೀಕ್ಷಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ರೆಡ್ ಲೈನ್ ಅನುಮೋದನೆ, ಡಬಲ್ ಡೆಕ್ಕರ್‌ಗೆ ಅನುಮತಿ, ಪಶ್ಚಿಮ ಘಟ್ಟ ಅಧಿಸೂಚನೆ ಮರುಪರಿಶೀಲನೆ: ಪ್ರಧಾನಿ ಮೋದಿಗೆ ರಾಜ್ಯದ ಮನವಿ ಪತ್ರ

November 13, 2026 3:14 PM

ನೀವು ತಪ್ಪಿಸಿಕೊಂಡಿರಬಹುದು

ಜಕ್ಕೂರಿನ ಶ್ರೀರಾಮಪುರ ಕ್ರಾಸ್ ರಸ್ತೆಯಲ್ಲಿ ದುರಸ್ತಿ ನಡೆಸುತ್ತಿರುವ ಕಾರ್ಮಿಕರು
  • Uncategorized
  • ಬೆಂಗಳೂರು ನಗರ

ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ

The Bengaluru Live November 13, 2026 7:55 PM
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದ ಮುಂಭಾಗ
  • ಕ್ರೀಡೆ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ

The Bengaluru Live November 13, 2026 7:40 PM
ಚಿಕ್ಕಪೇಟೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಉಲ್ಲಂಘನೆಗಾಗಿ ಝೆಪ್ಟೊ ಅಂಗಡಿಯಲ್ಲಿ ಜಿಬಿಎ ಅಧಿಕಾರಿಗಳ ತಪಾಸಣೆ
  • ಬೆಂಗಳೂರು ನಗರ

ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ

The Bengaluru Live November 13, 2026 4:40 PM
ಸಿಎಂ ಡಿ.ಕೆ. ಶಿವಕುಮಾರ್ ಅವರ ಎಕ್ಸ್ ಪೋಸ್ಟ್ ಸ್ಕ್ರಿನ್ಶಾಟ್
  • ಬೆಂಗಳೂರು ನಗರ
  • ರಾಜಕೀಯ

ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ

The Bengaluru Live November 13, 2026 4:22 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು ಉತ್ತರ ವಾರ್ಡ್ ಒನ್ ಅಭಿಯಾನದಲ್ಲಿ 30 ಕಸದ ಬ್ಲ್ಯಾಕ್‌ಸ್ಪಾಟ್‌ ತೆರವು, 10 ರಸ್ತೆ ಗುಂಡಿ ದುರಸ್ತಿ
  • ಬೆಂಗಳೂರಿನಲ್ಲಿ ನವೆಂಬರ್‌ 14ರಿಂದ ಐದನೇ ಮಿನಿ ಕರ್ನಾಟಕ ಕ್ರೀಡಾಕೂಟ
  • ಚಿಕ್ಕಪೇಟೆ ವಿಭಾಗದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಯಮ ಉಲ್ಲಂಘನೆ: ಝೆಪ್ಟೊಗೆ ₹25,000 ದಂಡ
  • ಸರ್ಜಾಪುರ–ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ಶೀಘ್ರ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿಗೆ ಶಿವಕುಮಾರ್ ಮನವಿ
©Copyright 2025 The Bengaluru Live All rights reserved. | MoreNews by AF themes.