ಬೆಂಗಳೂರು:
ರಾಜ್ಯದ ಮರಾಠ ಅಭಿವೃದ್ಧಿ ಅಭಿವೃದ್ಧಿ ನಿಗಮ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ನೀಡಿದ್ದಾರೆ.
ಈ ಸಂಬಂಧ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದು, ರಾಜ್ಯದಲ್ಲಿ ಮರಾಠ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರ ಸಾಮಾಜಿಕ,ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿ ಹಿನ್ನೆಲೆಯಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ ಮಂಜೂರು ಮಾಡಿದ್ದಾರೆ.