ಬೆಂಗಳೂರು ಗ್ರಾಮಾಂತರ ಜಿಲ್ಲೆ:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ನೆಲಮಂಗಲ ತಾಲ್ಲೂಕಿನ, ಕುಣಿಗಲ್ ಬೈಪಾಸ್ ರಸ್ತೆಯ, ಮಹದೇವಪುರದಲ್ಲಿರುವ ಎಸ್‌ಡಿಎಂ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸಸ್-ಕ್ಷೇಮವನದಲ್ಲಿ 16 ನೇ ವಿಧಾನಸಭೆಯ ನೂತನ ಸದಸ್ಯರುಗಳಿಗೆ ಇಂದಿನಿಂದ ಮೂರು ದಿನಗಳವರೆಗೆ (2023ರ ಜೂನ್ 26 ರಿಂದ 28 ರವರೆಗೆ) ಏರ್ಪಡಿಸಲಾದ ತರಬೇತಿ ಶಿಬಿರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಸದನದ ನಿಯಮಾವಳಿಗಳನ್ನು ನಾವೇ ಮಾಡಿದ್ದೇವೆ. ಅದನ್ನು ಸರಿಯಾಗಿ ಓದಿ ಅರ್ಥ ಮಾಡಿಕೊಂಡರೆ ಜನರ ಸಮಸ್ಯೆಗಳನ್ನು ನಿಯಮಬದ್ಧವಾಗಿ ಸದನದ ಮುಂದೆ ಮಂಡಿಸಬಹುದು.
— CM of Karnataka (@CMofKarnataka) June 26, 2023
ಸಂವಿಧಾನಕ್ಕೆ ವಿರುದ್ಧವಾದ ಕಾನೂನು-ಕಾಯ್ದೆಗಳನ್ನು ಮಾಡಲು ಸಾಧ್ಯವಿಲ್ಲ. ಆದ್ದರಿಂದ ಸಂವಿಧಾನದ ಓದು ಅತ್ಯಗತ್ಯ.
2/6
– ಮುಖ್ಯಮಂತ್ರಿ @siddaramaiah #ಕರ್ನಾಟಕ_ವಿಧಾನಸಭೆ pic.twitter.com/PFCeUtIyHS
ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ.ಎಸ್.ಹೊರಟ್ಟಿ, ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಷರೀದ್, ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ, ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಸುರೇಂದ್ರಕುಮಾರ್ ಸೇರಿದಂತೆ ನೂತನ ಶಾಸಕರುಗಳು ಉಪಸ್ಥಿತರಿದ್ದರು.
16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರುಗಳ ತರಬೇತಿ ಶಿಬಿರವನ್ನು ಮುಖ್ಯಮಂತ್ರಿ @siddaramaiah ಅವರು ಉದ್ಘಾಟಿಸಿ ಮಾತನಾಡಿದರು.
— CM of Karnataka (@CMofKarnataka) June 26, 2023
ಸಂಸದೀಯ ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆ. ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿಯನ್ನು ಪ್ರತಿಯೊಬ್ಬ ಶಾಸಕ ಬೆಳೆಸಿಕೊಳ್ಳಬೇಕು.
ಯಾರು… pic.twitter.com/qAXmIbwJfe
ಸುದ್ದಿ ಮೂಲ: ಕರ್ನಾಟಕ ವಾರ್ತೆ