Home ರಾಜಕೀಯ socio-educational and economic report | ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ವರದಿ: ಸರಿಯಿಲ್ಲವೆನ್ನಲು ಬಿಜೆಪಿಗೆ...

socio-educational and economic report | ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ವರದಿ: ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ ಹಕ್ಕಿಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

67
0
Chief Minister Siddaramaiah says BJP has no moral right to say socio-educational and economic report is wrong

ಮಂಡ್ಯ, ಏಪ್ರಿಲ್ 22 : ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು ನೀಡಿದ ವರದಿ ಸರಿಯಿಲ್ಲವೆಂದು ಹೇಳಲು ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಂಡ್ಯ ಜಿಲ್ಲೆಯ ನಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಮೀಕ್ಷೆ ವರದಿ ಬಗ್ಗೆ ಪಕ್ಷದ ನಾಯಕರಿಂದ ಅಪಸ್ವರ ಎದ್ದಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ವರದಿಯಲ್ಲಿ ಯಾವುದೇ ನ್ಯೂನ್ಯತೆಗಳಿದ್ದರೆ ಸರಿಪಡಿಸಲಾಗುವುದು. ವರದಿ ಬಗ್ಗೆ ಅಭಿಪ್ರಾಯಗಳನ್ನು ವ್ಯಕ್ತಪಡಿಸುವಂತೆ ಸಚಿವರಿಗೆ ತಿಳಿಸಲಾಗಿದ್ದು, ಅವುಗಳನ್ನು ಪರಿಶೀಲಿಸಿ ನಂತರ ಸೂಕ್ತ ತೀರ್ಮಾನವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗುವುದು ಎಂದರು.

1984 ರಲ್ಲಿ ನಡೆದ ಸಮೀಕ್ಷೆಯಲ್ಲಿದ್ದ ಮುಸ್ಲಿಮರ ಸಂಖ್ಯೆ ಈಗ ವರದಿಯಲ್ಲಿ ಶೇ.90 ರಷ್ಟು ಹೆಚ್ಚಾಗಿದ್ದು, ಲಿಂಗಾಯತರ ಸಂಖ್ಯೆ ಕೇವಲ ಶೇ.8 ರಷ್ಟು ಜಾಸ್ತಿಯಾಗಿರುವುದಾಗಿ ಬಿಜೆಪಿಯವರು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಕಾಂತರಾಜು ಆಯೋಗದ ಅಂಕಿಅಂಶಗಳ ಆಧಾರದ ಮೇಲೆ ಜಯಪ್ರಕಾಶ್ ಹೆಗಡೆಯವರು ಶಿಫಾರಸ್ಸು ಮಾಡಿದ್ದಾರೆ ಎಂದರು.

ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶವಿಲ್ಲ

ವಿಂಗ್ ಕಮಾಂಡರ್ ನೊಬ್ಬ ಕನ್ನಡಿಗರ ಮೇಲೆ ಹಲ್ಲೆ ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪೆಸೆಗಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ. ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನಕ್ಕೆ ಸರ್ಕಾರದ ವಿರೋಧವಿದೆ. ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಹಾಗೂ ಇಂಗ್ಲಿಷ್ ಬಳಕೆಗೆ ಪೂರವಾದ ದ್ವಿಭಾಷಾ ನೀತಿ ಜಾರಿಯಲ್ಲಿದೆ. ರಾಜ್ಯದಲ್ಲಿ ತ್ರಿಭಾಷಾ ಸೂತ್ರವಲ್ಲ ಎಂದರು.

LEAVE A REPLY

Please enter your comment!
Please enter your name here