Home ಬೆಂಗಳೂರು ನಗರ ನಾಳೆ ಮುಖ್ಯಮಂತ್ರಿಗಳಿಂದ ಬೆಂಗಳೂರು ನಗರ ಜಿಲ್ಲಾ ಪ್ರಗತಿ ಪರಿಶೀಲನೆ

ನಾಳೆ ಮುಖ್ಯಮಂತ್ರಿಗಳಿಂದ ಬೆಂಗಳೂರು ನಗರ ಜಿಲ್ಲಾ ಪ್ರಗತಿ ಪರಿಶೀಲನೆ

107
0

ಬೆಂಗಳೂರು:

ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ವಹಿಸಿರುವ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಜ: 12 ರಂದು ಮಧ್ಯಾಹ್ನ 3:30 ಗಂಟೆಗೆ ಬೆಂಗಳೂರ ನಗರ ಜಿಲ್ಲಾ ಪಂಚಾಯತಿ ಸಭಾಂಗಣ, ಎಸ್. ಕರಿಯಪ್ಪ ರಸ್ತೆ ಬನಶಂಕರಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಅನುಷ್ಠಾನದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.

ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಜಿಲ್ಲಾ ಪಂಚಾಯಿತಿಯ ಮುಖ್ಯದ್ವಾರ ಮತ್ತು ಸಂಪನ್ಮೂಲ ಕೇಂದ್ರ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸುವರು. ವೇದಿಕೆ ಕಾರ್ಯಕ್ರಮಕ್ಕೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಶ್ರೀ ಕೆ.ಎಸ್. ಈಶ್ವರಪ್ಪ ರವರು ಚಾಲನೆ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ರಸಾಯನಿಕ ಮತ್ತು ರಸಗೊಬ್ಬರ ಇಲಾಖೆ ಸಚಿವರಾದ. ಶ್ರೀ.ಡಿ.ವಿ.ಸದಾನಂದಗೌಡ, ಸಹಕಾರ ಇಲಾಖೆ ಸಚಿವರಾದ ಶ್ರೀ. ಎಸ್.ಟಿ.ಸೋಮಶೇಖರ್, ಯಲಹಂಕ ವಿಧಾನಸಭೆಯ ಶಾಸಕರು ಹಾಗೂ ಬಿಡಿಎ ಅಧ್ಯಕ್ಷರು. ಶ್ರೀ.ಎಸ್.ಆರ್.ವಿಶ್ವನಾಥ. ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಎನ್. ಶಿವಮೂರ್ತಿ ಸೇರಿದಂತೆ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಲೋಕಸಭಾ ಸದಸ್ಯರು, ವಿಧಾನಸಭೆ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯತ ಸದಸ್ಯರು, ತಾಲ್ಲೂಕು ಪಂಚಾಯತ್ ಅಧ್ಯಕ್ಷರು, ಮತ್ತು ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಗಳಾದ ಕೆ. ಶಿವರಾಮೇಗೌಡ ಅವರು ಪ್ರಕಟೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here