ಬೆಂಗಳೂರು:
ಪದವಿ, ಡಿಪ್ಲೋಮೊ ಕಾಲೇಜುಗಳ ಮಾದರಿಯಲ್ಲಿಯೇ ಶಾಲೆಗಳನ್ನು ಆರಂಭಿಸುವ ಕುರಿತು ಸೋಮವಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಮಹತ್ವದ ಸಭೆ ಸಭೆಯಲ್ಲಿ ಶಾಲೆಗಳ ಆರಂಭಿಸುವ ಕುರಿತ ಸಾಧಕ – ಬಾಧಕಗಳ ಬಗ್ಗೆ ಚರ್ಚೆ ನಡೆಯಲಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳ ಪ್ರಾರಂಭ, ಶೈಕ್ಷಣಿಕ ಚಟುವಟಿಕೆಗಳನ್ನು ನಿರ್ಧರಿಸುವ ಕುರಿತು ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.
ಶಿಕ್ಷಣ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದ್ದು, ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸಾರಿಗೆ, ಗ್ರಾಮೀಣಾಭಿವೃದ್ಧಿ ಮತ್ತಿತರ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಾಲೆಗಳ ಆರಂಭ ಕುರಿತು ಸಂಬಂಧಪಟ್ಟ ಶಾಲಾ ಅಭಿವೃದ್ಧಿ ಸಮಿತಿಗಳ ಮುಖ್ಯಸ್ಥರೊಂದಿಗೆ ಈಗಾಗಲೇ ಸಮಾಲೋಚನೆ ನಡೆಸಿದ್ದಾರೆ.