ಬೆಂಗಳೂರು:
ಮುಖ್ಯಮಂತ್ರಿ ಯಡಿಯೂರಪ್ಪನವರು ಕೊರೊನಾ ವರದಿ ನೆಗೆಟಿವ್ ಬಂದಿರುವುದರಿಂದ ಇಂದು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಯಡಿಯೂರಪ್ಪನವರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.
ಲೋಕಸಭಾ ಮತ್ತು ವಿಧಾನಸಭಾ ಉಪಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದಾಗಲೆ ತೀವ್ರ ಜ್ವರದಿಂದ ಬಳಲಿದ್ದ ಅವರು, ಕಳೆದ ಶುಕ್ರವಾರ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡಿದ್ದರು. ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದ ಕಾರಣ ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು.
ಇಲ್ಲಿ ಓದಿ: ಸಿಎಂ ಯಡಿಯೂರಪ್ಪಗೆ ಎರಡನೇ ಬಾರಿ ಕೊರೋನಾ ಪಾಸಿಟಿವ್ https://kannada.thebengalurulive.com/karnataka-cm-yediyurappa-second-time-tested-covid-19-positive/
ಎರಡನೇ ಬಾರಿ ಅವರಿಗೆ ಸೋಂಕು ತಗುಲಿತ್ತು.