Home ಬೆಂಗಳೂರು ನಗರ ಸಿಎಂ ಮಾಜಿ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್ ಕೊರೊನಾಗೆ ಬಲಿ

ಸಿಎಂ ಮಾಜಿ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್ ಕೊರೊನಾಗೆ ಬಲಿ

52
0
Advertisement
bengaluru

ಬೆಂಗಳೂರು:

ರಾಜ್ಯದಲ್ಲಿ ಕೊರೊನಾ ಸೋಂಕು ತಾಂಡವಾಡುತ್ತಿದ್ದು, ಕಿಲ್ಲರ್ ಸೋಂಕಿಗೆ  ಇದೀಗ ಹಿರಿಯ ಪತ್ರಕರ್ತ ಸಿಎಂ ಮಾಜಿ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್ (65) ಬಲಿಯಾಗಿದ್ದಾರೆ.

ಕೋರೋಣ ದೃಢವಾದ ಹಿನ್ನೆಲೆ ಕಳೆದ ಹತ್ತು ದಿನಗಳ ಹಿಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಅವರಿಗೆ ಕೋರನಾ ದೃಢವಾದ ಹಿನ್ನೆಲೆ  ಖಾಸಗಿ  ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹಿರಿಯ ಪತ್ರಕರ್ತರಾಗಿದ್ದ ಮಹಾದೇವ ಪ್ರಕಾಶ್ ಅವರು ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿ ಸೇವೆ ಸಲ್ಲಿಸಿದರು. ಅವರು ಈ ಭಾನುವಾರ ಪತ್ರಿಕೆ ಸಂಪಾದಕರಾಗಿದ್ದರು. ಜೊತೆಗೆ ರಾಜಕೀಯ ವಿಶ್ಲೇಷಕ ರಾಗಿಯೂ ಹೆಸರು ಮಾಡಿದರು.

bengaluru bengaluru

ಮುಖ್ಯಮಂತ್ರಿ ಸಂತಾಪ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿ: “ಖ್ಯಾತ ಲೇಖಕ, ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ನನ್ನ ಮಾಧ್ಯಮ ಸಲಹೆಗಾರರಾಗಿಯೂ ಅವರು ಕೆಲಸ ಮಾಡಿದ್ದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ,” ಸಂತಾಪ ಸೂಚಿಸಿದ್ದಾರೆ.

ಡಿಸಿಎಂ ಅಶ್ವತ್ಥನಾರಾಯಣ ಕಂಬನಿ


ಹಿರಿಯ ಪತ್ರಕರ್ತ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿದ್ದ ಮಹದೇವ ಪ್ರಕಾಶ್ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ನಾಡಿನ ಹಿರಿಯ ಪತ್ರಕರ್ತರಾಗಿದ್ದ ಅವರು ಅತ್ಯುತ್ತಮ ವಾಗ್ಮಿ & ರಾಜಕೀಯ ವಿಶ್ಲೇಷಕರಾಗಿದ್ದರು. ʼಈ ಭಾನುವಾರʼ ಪತ್ರಿಕೆಯ ಸಂಪಾದಕರಾಗಿ ಕೆಲಸ ಮಾಡುತ್ತಿದ್ದರು. ಅನೇಕ ಪತ್ರಿಕೆಗಳಿಗೆ ಅವರು ಬರೆಯುತ್ತಿದ್ದ ರಾಜಕೀಯ ಅಂಕಣಗಳಿಗೆ ಅಗಾಧ ಪ್ರಮಾಣದ ಓದುಗರಿದ್ದರು. ಮೊನಚಾಗಿ ಅವರು ರಾಜಕೀಯ ಬೆಳವಣಿಗೆಗಳನ್ನು ವಿಶ್ಲೇಷಣೆ ಮಾಡುತ್ತಿದ್ದರು.

ಮಹದೇವ ಪ್ರಕಾಶ್‌ ಅವರ ನಿಧನ ನೋವುಂಟು ಮಾಡಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ನೀಡಲಿ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಡಿಸಿಎಂ ಅವರು ಪ್ರಾರ್ಥನೆ ಮಾಡಿದ್ದಾರೆ.

ಡಿಸಿಎಂ ಸವದಿ ಶೋಕ

ಕೋವಿಡ್ ಅಟ್ಟಹಾಸಕ್ಕೆ ದಿನದಿಂದ ದಿನ ಸಾವಿನ ಸರಣಿ ಮುಂದುವರಿದಿರುವುದು ದುರ್ದೈವ. ಇತ್ತೀಚೆಗೆ ಅನೇಕ ಮಂದಿ ನಮ್ಮ ಆತ್ಮೀಯರು ಮತ್ತು ಕ್ರಿಯಾಶೀಲ ವ್ಯಕ್ತಿಗಳನ್ನು ಕಳೆದುಕೊಂಡು ಬೇಸರದಲ್ಲಿರುವಾಗಲೇ ಇಂದು ಮತ್ತೊಬ್ಬ ಆತ್ಮೀಯ ಸ್ನೇಹಿತ ಮತ್ತು ಹಿರಿಯ ಪತ್ರಕರ್ತರಾಗಿದ್ದ ಶ್ರೀ ಮಹದೇವ ಪ್ರಕಾಶ್ ಅವರು ನಿಧನರಾಗಿರುವುದು ದುರ್ದೈವ.

ಪತ್ರಿಕೋದ್ಯಮ, ರಾಜಕೀಯ ವಿಶ್ಲೇಷಣೆಗಳಲ್ಲಿ ಮಹದೇವ ಪ್ರಕಾಶ್ ತಮ್ಮ ಛಾಪು ಮೂಡಿಸಿದ್ದರು. ರಾಜಕೀಯ ಪಡಸಾಲೆಯಲ್ಲಿಯೂ ಅವರದು ಚಿರಪರಿಚಿತ ಹೆಸರಾಗಿತ್ತು.

ಕೆಲವು ಕಾಲ ಅವರು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿಯೂ ಕೆಲಸ ಮಾಡುತ್ತಾ ರಾಜಕಾರಣ ಮತ್ತು ಪತ್ರಿಕೋದ್ಯಮದ ನಡುವಿನ ಸ್ನೇಹ ಸಂಬಂಧದ ಕೊಂಡಿಯಾಗಿದ್ದರು.

ಇವರ ನಿಧನದಿಂದ ಒಬ್ಬ ವಾಗ್ಮಿ, ಚಿಂತಕ ಮತ್ತು ಕ್ರಿಯಾಶೀಲ ಪತ್ರಕರ್ತನನ್ನು ಕಳೆದುಕೊಂಡ ದುಃಖವಾಗಿದೆ.

ದಿವಂಗತರ ಆತ್ಮಕ್ಕೆ ಭಗವಂತನು ಶಾಂತಿ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ.

ಡಿಸಿಎಂ ಗೋವಿಂದ ಕಾರಜೋಳ ತೀವ್ರ ಸಂತಾಪ

ಹಿರಿಯ ಪತ್ರಕರ್ತರಾಗಿದ್ದ , ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಸಲಹೆಗಾರರಾದ ಶ್ರೀ ಮಹದೇವ ಪ್ರಕಾಶ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ತೀವ್ರಸಂತಾಪ ಸೂಚಿಸಿದ್ದಾರ.

ಅವರು ನೇರ ನಡೆನುಡಿಯಿಂದ ಖ್ಯಾತರಾಗಿದ್ದರು. . ರಾಜಕೀಯ ವಿಶ್ಲೇಷಣೆಯಲ್ಲಿ ನೈಪುಣ್ಯತೆ ಹೊಂದಿದ್ದರು. ತಮಗೆ ಆತ್ಮೀಯರಾಗಿದ್ದರು. ಅವರ ಅಕಾಲಿಕ ನಿಧನ ರಾಜ್ಯಕ್ಕೆ ಭರಿಸಲಾರದ ನಷ್ಟ‌ಉಂಟಾಗಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಅವರ ಕುಟುಂಬವರ್ಗದವರಿಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುವುದಾಗಿ ಡಿಸಿಎಂ ತಿಳಿಸಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಂತಾಪ

ಹಿರಿಯ ಪತ್ರಕರ್ತ ಹಾಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಜಿ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್ ಅವರು ನಿಧನರಾಗಿದ್ದು ಅತೀವ ದುಃಖ ತಂದಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖ ವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಆ ಭಗವಂತನಲ್ಲಿ ಕೋರುತ್ತೇನೆ.

ಈ ಭಾನುವಾರ ವಾರಪತ್ರಿಕೆಯ ಸಂಪಾದಕರು, ವಿಜಯ ಕರ್ನಾಟಕ ದಿನಪತ್ರಿಕೆಯ ಅಂಕಣಕಾರರು ಆಗಿದ್ದ ಮಹದೇವ ಪ್ರಕಾಶ ನೇರ ನಡೆ ಮತ್ತು ನುಡಿಯ ವ್ಯಕ್ತಿತ್ವದವರಾಗಿದ್ದರು.

ಕರ್ನಾಟಕ ಚುನಾವಣೆ ಅಂಕಿ ಸಂಖ್ಯೆ, ರಾಜಕೀಯ ಪಕ್ಷಗಳ ಇತಿಹಾಸ ಅವರ ನಾಲಿಗೆಯ ತುದಿಯಲ್ಲಿದ್ದವು ಎಂದರೆ ತಪ್ಪಾಗಲಾರದು. ರಾಜ್ಯ ರಾಜಕಾರಣದ ಬಗ್ಗೆ ಅವರಿಗೆ ಅಪಾರ ಜ್ಞಾನ ಇತ್ತು. ಅಂಥ ಮೇಧಾವಿ ಪತ್ರಕರ್ತರನ್ನು ನಾವು ಕಳೆದುಕೊಂಡಿದ್ದೇವೆ. ಮಹದೇವ ಪ್ರಕಾಶ ಅವರ ನಿಧನದಿಂದ ಕನ್ನಡ ಪತ್ರಿಕೋದ್ಯಮಕ್ಕೆ ನಷ್ಟವುಂಟಾಗಿದೆ ಎಂದು ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.


bengaluru

LEAVE A REPLY

Please enter your comment!
Please enter your name here