Home ಬೆಂಗಳೂರು ನಗರ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಗೆ ಬಿಡಿಎ ಅಧ್ಯಕ್ಷ ಸ್ಥಾನ

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಗೆ ಬಿಡಿಎ ಅಧ್ಯಕ್ಷ ಸ್ಥಾನ

62
0
Advertisement
bengaluru

ಬೆಂಗಳೂರು:

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಯಾಗಿದ್ದ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.ಆದರೆ ಸಂಸ ದೀಯ ಕಾರ್ಯದರ್ಶಿ ಹುದ್ದೆ ತನ್ನಿಂತಾನೆ ರದ್ದಾಗಲಿದೆ ಎಂಬ ಮಾಹಿತಿ ಇದೆ.

ಆಗಸ್ಟ್ 30 ರಂದು ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತು. ಯಲಹಂಕ ಕ್ಷೇತ್ರದಿಂದ ಸತತ ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿರುವ ಎಸ್.ಆರ್. ವಿಶ್ವನಾಥ್ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು.ಈಗ ಅವರನ್ನು ಸಂಸದೀಯ ಕಾರ್ಯದರ್ಶಿ ಸ್ಥಾನದಿಂದ ಏಕಾಏಕಿ ಬಿಡಿಎಗೆ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ಅತ್ಯಂತ ಪ್ರಭಾವಿ ಹುದ್ದೆಯಾಗಿದ್ದು, ಸಂಪುಟ ದರ್ಜೆಯ ಸ್ಥಾನಮಾನ ಈ ಹುದ್ದೆಗಿದೆ.

ಶಾಸಕ ಎಸ್.ಆರ್ ವಿಶ್ವನಾಥ್ ಮೊದಲಿನಿಂದಲೂ ಮುಖ್ಯಮಂತ್ರಿ ಯಡಿಯೂರಪ್ಪನವರ ಆಪ್ತ ಬಳಗದಲ್ಲಿದ್ದು, ಅವರ ಕಟ್ಟಾ ಬೆಂಬಲಿಗರಾಗಿದ್ದಾರೆ. ಈ ಹಿಂದೆ ಸಮ್ಮಿಶ್ರ ಸರ್ಕಾರ ಪತನದ ಸಂದರ್ಭದಲ್ಲಿ ಬಿಜೆಪಿ ಶಾಸಕರಿಗೆ ತಮ್ಮ ಕ್ಷೇತ್ರದ ರೆಸಾರ್ಟ್‌ ನಲ್ಲೇ ವಾಸ್ತವ್ಯ ಕ್ಕೆ ವ್ಯವಸ್ಥೆ ಮಾಡಿ, ಶಾಸಕರು ಎಲ್ಲರು ಒಟ್ಟಾಗಿ ಇರುವಂತೆ ನೋಡಿಕೊಂಡು ರಾಜಕೀಯವಾಗಿ ಎಲ್ಲವನ್ನೂ ನಿಭಾಯಿಸಿದ್ದರು.

bengaluru bengaluru
SR Vishwanath

ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತಾದರೂ ಬೆಂಗಳೂರಿನಿಂದ ಈಗಾಗ ಲೇ ನಾಲ್ಕು ಮಂದಿ ಸಚಿವರಾಗಿರುವುದರಿಂದ ಮತ್ತೆ ಬೆಂಗಳೂರಿನ ಶಾಸಕರಿಗೆ ಸಚಿವ ಸ್ಥಾನ ನೀಡುವುದು ಸದ್ಯ ದ ಪರಿಸ್ಥಿತಿಯಲ್ಲಿ ಕಷ್ಟಕರವಾಗಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪನವರು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರ ಹುದ್ದೆಯನ್ನು ಒಪ್ಪಿಕೊಳ್ಳುವಂತೆ ಎಸ್.ಆರ್. ವಿಶ್ವನಾಥ್ ಅವರ ಮನವೊಲಿಸಿದರು ಎನ್ನಲಾಗಿದೆ.


bengaluru

LEAVE A REPLY

Please enter your comment!
Please enter your name here