Home ಬೆಂಗಳೂರು ನಗರ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್

ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್

11
0

ಬೆಂಗಳೂರು, ಮಾರ್ಚ್ 19 (ಕರ್ನಾಟಕ ವಾರ್ತೆ): ರಾಷ್ಟ್ರೀಯ ಜೀವನೋಪಾಯ ಮಿಷನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ಬೆಂಗಳೂರಿನ ಇನ್‍ಫೆಂಟ್ರಿ ರಸ್ತೆಯಲ್ಲಿರುವ ಐ.ಎ.ಎಸ್. ಆಫೀಸರ್ಸ್ ಕ್ಲಬ್‍ನಲ್ಲಿ ಆಯೋಜಿಸಲಾಗಿರುವ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಇಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉದ್ಘಾಟಿಸಿದರು.

ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವು ಮಾರ್ಚ್ 19 ರಿಂದ 21 ರವರೆಗೆ ನಡೆಯಲಿದ್ದು, ರಾಜ್ಯದ ಸುಮಾರು 60 ಸ್ವಸಹಾಯ ಮಹಿಳಾ ಸಂಘಗಳು ಇದರಲ್ಲಿ ಭಾಗವಹಿಸಿವೆ.

ಈ ಮೇಳದಲ್ಲಿ ಮಹಿಳಾ ಸ್ವಸಹಾಯ ಸಂಘಗಳು ಉತ್ಪಾದಿಸಿದ ಉತ್ಕøಷ್ಟ ಮಟ್ಟದ ಕರಕುಶಲ ವಸ್ತುಗಳು ಹಾಗೂ ಆಹಾರ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಾಗುತ್ತಿದೆ.

ಬಿದರಿ ಕಲೆ, ಕಿನ್ನಾಳ ಕಲೆ, ಮೈಸೂರು ಇನ್‍ಲೆ, ಚನ್ನಪಟ್ಟಣದ ಬೊಂಬೆಗಳು, ಕೈಯಿಂದ ತಯಾರಿಸಿದ ಆಭರಣಗಳು, ಜಿ.ಐ.ಟ್ಯಾಗ್ ಹೊಂದಿರುವ ಸೀರೆಗಳು, ಮೊಳಕಾಲ್ಮೂರು, ಇಳಕಲ್ ಸೀರೆಗಳು ಮಾರಾಟ ಮಾಡಲಾಗುತ್ತಿದೆ.

ವಸ್ತು ಪ್ರದರ್ಶನದಲ್ಲಿ ಜೇನುತುಪ್ಪ, ಶುದ್ಧ ಗಾಣದ ಶೇಂಗಾ ಎಣ್ಣೆ, ಉಪ್ಪಿನಕಾಯಿ, ಕರದಂಟು, ಚಿಕ್ಕಿಗಳು ಸಹ ಲಭ್ಯವಿದ್ದು, ತಿಂಡಿ ತಿನಿಸುಗಳನ್ನು ಸವಿಯಬಹುದಾಗಿದೆ.

ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು, ಸಾರ್ವಜನಿಕರು ಮೇಳದ ಸದುಪಯೋಗವನ್ನು ಪಡೆದುಕೊಳ್ಳಬಹುದು.

LEAVE A REPLY

Please enter your comment!
Please enter your name here