ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುತ್ತಿರುವ ಫಲಾನುಭವಿ ಆಧಾರಿತ ಯೋಜನೆಗಳ ಬಗ್ಗೆ ಏಕರೂಪದ ಸರ್ಕಾರಿ ಬ್ರ್ಯಾಂಡಿಂಗ್ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಯೋಜನೆ ಕುರಿತು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ಸಭೆ ನಡೆಯಿತು.
ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್, ಪ್ರಜಾ ಸೇವಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
