Home ಅಪರಾಧ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬಾಂಬ್ ಸ್ಫೋಟ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬಾಂಬ್ ಸ್ಫೋಟ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ

91
0
Chinnaswamy stadium blast 2 convicts awarded life sentence

ಬೆಂಗಳೂರು:

ನಗರದ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ 2010ರಲ್ಲಿ ನಡೆದಿದ್ದ ಬಾಂಬ್‌ ಸ್ಫೋಟ ಪ್ರಕರಣದ ಇಬ್ಬರು ಅಪರಾಧಿಗಳಿಗೆ ವಿಧಿಸಿದ್ದ 7 ವರ್ಷಗಳ ಶಿಕ್ಷೆಯನ್ನು ಪರಿಶೀಲಿಸಿರುವ ಇಲ್ಲಿನ ವಿಶೇಷ ನ್ಯಾಯಾಲಯ, ಇದೀಗ ಇಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಇಂಡಿಯನ್‌ ಮುಜಾಹಿದ್ದೀನ್‌ ಸಂಘಟನೆ ಸದಸ್ಯರಾಗಿದ್ದ ಅಫ್ತಾಬ್‌ ಆಲಂ ಅಲಿಯಾಸ್‌ ಫಾರೂಕ್‌ ಹಾಗೂ ಅಹಮ್ಮದ್‌ ಜಮಾಲ್‌ ಎಂಬುವರನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Also Read: Chinnaswamy stadium blast: 2 convicts awarded life sentence

ಕೃತ್ಯ ಎಸಗಿದ್ದ ಬಗ್ಗೆ ಅಪರಾಧಿಗಳು ನ್ಯಾಯಾಲಯ ಎದುರು ತಪ್ಪೊಪ್ಪಿಕೊಂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಇಬ್ಬರಿಗೂ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಆದೇಶವನ್ನು ಪ್ರಶ್ನಿಸಿದ್ದ ಸಿಸಿಬಿ ಪರ ವಕೀಲರು, ಕೃತ್ಯದ ಬಗ್ಗೆ ದಾಖಲಾಗಿರುವ ಪ್ರಕರಣಗಳನ್ನು ಆಧರಿಸಿ ಹೆಚ್ಚಿನ ಶಿಕ್ಷೆ ವಿಧಿಸಲು ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರಕರಣದ ಶಿಕ್ಷೆ ಪ್ರಮಾಣವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ನಿರ್ದೇಶನ ನೀಡಿತ್ತು. ಅದರನ್ವಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ಇಬ್ಬರೂ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಗುರುವಾರ ಆದೇಶ ಹೊರಡಿಸಿದೆ.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಿ.ಎ. ರವೀಂದ್ರ ವಾದಿಸಿದ್ದರು.

LEAVE A REPLY

Please enter your comment!
Please enter your name here