Home ಚಿತ್ರದುರ್ಗ Chitradurga: ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ನಾಲ್ವರ ದುರ್ಮರಣ

Chitradurga: ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ನಾಲ್ವರ ದುರ್ಮರಣ

27
0
Chitradurga: speeding car collided lorry from behind, four died on the spot
Chitradurga: speeding car collided lorry from behind, four died on the spot

ಚಿತ್ರದುರ್ಗ:

ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿರಲ್ಲಿ ನಡೆದಿದೆ. ಇನ್ನುಳಿದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿದ್ದ ಶಂಶುದ್ದೀನ್(40), ಮಲ್ಲಿಕಾ(37), ಖಲೀಲ್(42), ತಬ್ರೇಜ್(13) ಮೃತ ದುರ್ದೈವಿಗಳು. ನರ್ಗೀಸ್, ರೆಹಾನ್, ರೆಹಮಾನ್ ಗಾಯಾಳುಗಳು. ಹೊಸಪೇಟೆ ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ಕಾರು ನಿಂತಿದ್ದ ಲಾರಿಗೆ ಗುದ್ದಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜು ಆಗಿದೆ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೋಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಚಿತ್ರದುರ್ಗ ಎಸ್ಪಿ ಧರ್ಮೇಂದ್ರ ಕುಮಾರ್ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here