ಬೆಂಗಳೂರು:
ಕರ್ನಾಟಕದ ಮಾದರಿ ಆಡಳಿತ ಇಡೀ ದೇಶಕ್ಕೆ ಬೇಕು ಎಂದು ಪ್ರತಿಪಾದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಮೊದಲು ನಿಮ್ಮ ಮತ್ತು ಬಿಜೆಪಿಯ ನಿಲುವನ್ನು ಸ್ಪಷ್ಟಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.
ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಸ್ವಾರ್ಥಕ್ಕಾಗಿ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರದ ಎನ್ ಡಿಎ ಸರ್ಕಾರ ಮತ್ತು ಬಿಜೆಪಿ ಆಡಳಿತವಿರುವ ಕೆಲವು ರಾಜ್ಯಗಳಲ್ಲಿ ಘೋಷಿಸಿದ ಕೆಲವು ‘ಉಚಿತ ಯೋಜನೆಗಳನ್ನು’ ಎತ್ತಿ ತೋರಿಸಿದ್ದು ಈ ವಿಚಾರದಲ್ಲಿ ಧ್ವಂಧ್ವ ನಿಲುವೇಕೆ ಎಂದು ಪ್ರಧಾನಿಯನ್ನು ಪ್ರಶ್ನಿಸಿದರು.
Thanks to Prime Minister @narendramodi for his concern about Karnataka's finances due to the implementation of the guarantee schemes in Karnataka.
— CM of Karnataka (@CMofKarnataka) August 2, 2023
Mr. Narendra Modi, please make it clear whether this is your personal opinion, the opinion as the Prime Minister of India, or the… pic.twitter.com/SO7dTV6NKT
ಕಾಂಗ್ರೆಸ್ ಗ್ಯಾರಂಟಿ ಘೋಷಣೆಗಳನ್ನು ನೀಡುವ ಮೂಲಕ ದಕ್ಷಿಣ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೆ ಈ ಪ್ರಕ್ರಿಯೆಯಲ್ಲಿ ಅದು ಜನರ ಭವಿಷ್ಯವನ್ನು ಅಪಾಯಕ್ಕೆ ಸಿಲುಕಿಸಿದೆ. ಇನ್ನು ಸಿದ್ದರಾಮಯ್ಯ ಸರ್ಕಾರ ರಾಜ್ಯದ ಬೊಕ್ಕಸ ಖಾಲಿಯಾಗಿದೆ ಮತ್ತು ಅಭಿವೃದ್ಧಿಗೆ ಹಣವಿಲ್ಲ ಎಂದು ಒಪ್ಪಿಕೊಂಡಿದೆ ಎಂದು ಪ್ರಧಾನಿ ಆರೋಪಿಸಿದ್ದರು.
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಕ್ರಿಯೆಯ ಮಧ್ಯೆ ಕರ್ನಾಟಕದ ಹಣಕಾಸಿನ ಬಗ್ಗೆ ಕಾಳಜಿ ವಹಿಸಿದ್ದಕ್ಕಾಗಿ ಪ್ರಧಾನಿ @narendramodi ಅವರಿಗೆ ಧನ್ಯವಾದಗಳು. ಇದು ನಿಮ್ಮ ವೈಯಕ್ತಿಕ ಅಭಿಪ್ರಾಯವೇ, ಭಾರತದ ಪ್ರಧಾನ ಮಂತ್ರಿಯಾಗಿ ಅಭಿಪ್ರಾಯವೇ ಅಥವಾ ನಿಮ್ಮ ಪಕ್ಷದ ಅಭಿಪ್ರಾಯ? ಎಂಬುದನ್ನು ದಯವಿಟ್ಟು ಸ್ಪಷ್ಟಪಡಿಸಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ನಮ್ಮ ಮುಖ್ಯ ಅಜೆಂಡಾವಾಗಿಟ್ಟುಕೊಂಡು ಮುಂದಿನ ಲೋಕಸಭಾ ಚುನಾವಣೆಯನ್ನು ಎದುರಿಸಲು ನಾವು ಸಿದ್ಧರಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರದ ಎಲ್ಲಾ ಖಾತರಿ ಯೋಜನೆಗಳನ್ನು ತಕ್ಷಣವೇ ಜಾರಿಗೆ ತರಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ. ಇಷ್ಟೇ ಅಲ್ಲದೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಈ ವಿಷಯದ ಬಗ್ಗೆ ದೊಡ್ಡ ಪ್ರತಿಭಟನೆಯನ್ನೂ ಮಾಡಿದ್ದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
“ಇದರ ಬಗ್ಗೆ ನಿಮ್ಮ ಅಭಿಪ್ರಾಯವೇನು ಮಿಸ್ಟರ್ ನರೇಂದ್ರ ಮೋದಿ?” ‘ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮೂರು ಉಚಿತ ಗ್ಯಾಸ್ ಸಿಲಿಂಡರ್ ಮತ್ತು ದಿನಕ್ಕೆ ಅರ್ಧ ಲೀಟರ್ ಹಾಲು ನೀಡುವುದಾಗಿ ಘೋಷಿಸಿತ್ತು, ಇದು ಉಚಿತವಲ್ಲವೇ ನರೇಂದ್ರ ಮೋದಿ?” ಎಂದು ಅವರು ಪ್ರಶ್ನಿಸಿದರು.