Home ಕರ್ನಾಟಕ ಸೋಮವಾರದಿಂದ ತರಗತಿಗಳು ಆರಂಭ

ಸೋಮವಾರದಿಂದ ತರಗತಿಗಳು ಆರಂಭ

23
0
Advertisement
bengaluru

ತಮ್ಮ ಜಿಲ್ಲೆಗಳ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕ- ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ

ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸೂಚನೆ

ಬೆಂಗಳೂರು:

ಸೋಮವಾರದಿಂದ 9, 10 ಮತ್ತು ಪಿ.ಯು.ಸಿ ತರಗತಿಗಳು ಪ್ರಾರಂಭವಾಗುತ್ತಿವೆ. ಈ ಹಿನ್ನೆಲೆಯಲ್ಲಿ ತಮ್ಮ ತಮ್ಮ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ. ಶಿಕ್ಷಕರನ್ನು ಪ್ರೋತ್ಸಾಹಿಸಿ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿ. ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿ.

ಇವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಶಾಲೆ ಆರಂಭದ ಹಿನ್ನೆಲೆಯಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ನೀಡಿರುವ ನಿರ್ದೇಶನ.

ಈ ಸಂಬಂಧ ಅವರು ಟ್ವೀಟ್ ಮಾಡಿದ್ದು, ಶಾಲೆಗಳ ಆರಂಭಕ್ಕೆ ರಾಜ್ಯ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ‌ ಎಂದು ತಿಳಿಸಿದ್ದಾರೆ.‌

bengaluru bengaluru
Bommai tweet on school reopenoing

ಸಚಿವರು ತಮ್ಮ‌ ಜಿಲ್ಲೆಯ ಶಾಲೆಗಳಿಗೆ ಭೇಟಿ ನೀಡಬೇಕು. ಶಿಕ್ಷಕರನ್ನು ಪ್ರೋತ್ಸಾಹಿಸಿ, ಶಾಲೆಗಳಲ್ಲಿ ಕೈಗೊಂಡ ಮುಂಜಾಗೃತಾ ಕ್ರಮಗಳನ್ನು ಪರಿಶೀಲಿಸಬೇಕು. ಪಾಲಕ-ಪೋಷಕರಲ್ಲಿ ವಿಶ್ವಾಸ ಮೂಡಿಸುವಂತೆ ಸಚಿವರಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ.

ಮಕ್ಕಳು ಮತ್ತು ಪಾಲಕರು ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕು ಹಾಗೂ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು.
ಯಾವುದೇ ಆತಂಕ ಇಲ್ಲದೇ ಸರ್ಕಾರದ ಜತೆ ಸಹಕರಿಸುವಂತೆ ಪಾಲಕರು ಮತ್ತು ಪೋಷಕರಿಗೆ ಮುಖ್ಯಮಂತ್ರಿ ‌ಬೊಮ್ಮಾಯಿ ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.


bengaluru

LEAVE A REPLY

Please enter your comment!
Please enter your name here