ಬೆಂಗಳೂರು:
ಈ ಹಿಂದೆಯೇ ಘೋಷಿಸಿದಂತೆ ಮುಂದಿನ ವರ್ಷದ ಆರಂಭದಿಂದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.1ರಿಂದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸುವುದಾಗಿ ಸರ್ಕಾರ ಮಾಡಿರುವ ಘೋಷಣೆಯಲ್ಲಿ ಯಾವುದೇ ಬದಲಾವಣೆಯಿಲ್ಲ. ಈ ಕುರಿತು ಪೋಷಕರು ಗೊಂದಲಕ್ಕೀಡಾಗುವ ಅಗತ್ಯವಿಲ್ಲ. UNI