Home ಕರ್ನಾಟಕ ಸಚಿವ ಸಂಪುಟ ಪುನಾರಚನೆಗೂ ಮುನ್ನವೇ ನಿಗಮ ಮಂಡಳಿ ಅಧ್ಯಕ್ಷರ ನೇಮಕ

ಸಚಿವ ಸಂಪುಟ ಪುನಾರಚನೆಗೂ ಮುನ್ನವೇ ನಿಗಮ ಮಂಡಳಿ ಅಧ್ಯಕ್ಷರ ನೇಮಕ

80
0
Vidhana Soudha

ಬೆಂಗಳೂರು:

ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಗೂ ಮುನ್ನವೆ ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರು,ನಿರ್ದೇಶಕರು ಹಾಗೂ ಸದಸ್ಯರನ್ನು ನೇಮಕಗೊಳಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ರಾಜ್ಯಾಧ್ಯಕ್ಷ ನಳಿಕ್ ಕುಮಾರ್ ಕಟೀಲ್ ಭೇಟಿಯಾಗಿ ಚೆರ್ಚೆ ನಡೆಸಿದ ಬೆನ್ನ ಲ್ಲೆ ಮುಖ್ಯಮಂತ್ರಿ ಯಡಿಯೂ ರಪ್ಪ 33 ನಿಗಮ ಮಂಡಳಿಗಳಿಗೆ ಅಧ್ಯಕ್ಷರು, 2 ಆಯೋಗಕ್ಕೆ ಹಾಗೂ 2 ಪ್ರಾಧಿಕಾರಗಳಿಗೆ ನೇಮಕ ಅಧ್ಯಕ್ಷರನ್ನು ನೇಮಕ ಗೊಳಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೀಗರಾದ ಸಿದ್ದನಗೌಡ ಚಿಕ್ಕನಗೌಡ್ರುರನ್ನು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷರಾಗಿ,ವಿಜುಗೌಡ ಎಸ್.ಪಾಟೀಲ್ ಗೆ ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷರನ್ನಾಗಿ,ತಾರಾ ಅನುರಾಧಗೆ ಅರಣ್ಯ ಅಭಿವೃದ್ಧಿ ‌ನಿಗಮದ ಅಧ್ಯಕ್ಷ ಸ್ಥಾನ ನೀಡಿ,ಕರ್ನಾಟಕ ರಾಜ್ಯ ದ್ವಿದಳ ಧಾನ್ಯಅಭಿವೃದ್ದಿ ಮಂಡಳಿಯ ಅಧ್ಯಕ್ಷರಾಗಿ ಲಿಂಗರೆಡ್ಡಿ ಗೌಡರನ್ನು,ದುರ್ಯೋಧನ ಮಹಾಲಿಂಗಪ್ಪ ಐಹೊಳೆ-ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ,ಎಚ್.ಹನುಮಂತಪ್ಪರನ್ನು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃ ದ್ದಿ ನಿಗಮದ ಅಧ್ಯಕ್ಷರಾಗಿ,ಎಂ.ರಾಮಚಂದ್ರರನ್ನು ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರಾಗಿ, ಸಿ.ಮುನಿಕೃಷ್ಣರನ್ನು ಕರ್ನಾಟಕ ಆದಿ ಜಾಂಭವ ಅಭಿವೃದ್ದಿ ನಿಗಮದ ಅಧ್ಯಕ್ಷರನ್ನಾಗಿ,ಚಂದು ಪಾಟೀಲ್​​ಗೆ ನವೀಕರಿಸಬಹುದಾದ ಇಂಧನ ನಿಗಮದ ಅಧ್ಯಕ್ಷ ಪಟ್ಟ ನೀಡಿದ್ದಾರೆ.

ನಿತಿನ್ ಕುಮಾರ್ ಗೆ ಕರ್ನಾಟಕ ಮೀನುಗಾರಿಕೆ ಅಭಿವೃದ್ದಿ ನಿಗಮದ ಅಧ್ಯಕ್ಷರನ್ನಾಗಿ,ಆರ್.ರಘು ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ, ಬಾಬು ಪತ್ತಾರ್ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ, ಜಿ.ಕೆ.ಗಿರೀಶ್ ಉಪ್ಪಾರ್ ಅವರನ್ನು ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ ಅಧ್ಯಕ್ಷರಾಗಿ, ಎಸ್.ನರೇಶ್ ಕುಮಾರ್ ಅವರನ್ನು ಸವಿತಾ ಸಮದಾಯ ಅಭಿವೃದ್ದಿ ನಿಗಮದ ಅಧ್ಯಕ್ಷರನ್ನಾಗಿ, ಚಿಕ್ಕನಾಯಕನಹಳ್ಳಿಯ ಕಿರಣ್ ಕುಮಾರ್​ಗೆ ಜೈವಿಕ ತಂತ್ರಜ್ಞಾನ ‌ನಿಗಮದ ಅಧ್ಯಕ್ಷರನ್ನಾಗಿ,ಕಲ್ಯಾಣ ಕುಮಾರ್.ಎಚ್.ಎಸ್.ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರನ್ನಾಗಿ ನೇಮಿಸಲಾಗಿದೆ.ಎಸ್.ಮಹದೇವಯ್ಯ ಕರ್ನಾಟಕ ರಾಜ್ಯ ಕಾಂಪೋಸ್ಟ್ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷರ ನ್ನಾಗಿ,ಬೇಳೂರು ರಾಘವೇಂದ್ರ ಶೆಟ್ಟಿ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ದಿ ನಿಗಮದ ಅಧ್ಯಕ್ಷರನ್ನಾಗಿ,ಶರಣಪ್ಪ ತಳವಾರ ಕೃಷ್ಣಾ ಮೇಲ್ದಂಡೆ ಅಚ್ಚುಕ ಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಅ ಧ್ಯಕ್ಷರನ್ನಾಗಿ,ಎನ್.ಶಿವಲಿಂಗಯ್ಯ ಕಾವೇರಿ ಜಲಾನಯ ಯೋಜನೆ ಅಧ್ಯಕ್ಷರಾಗಿ ನೇಮಿಸಲಾಗಿದೆ.ಎನ್.ಶಂಕ್ರಪ್ಪ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗದಮ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.ಚಂದು ಪಾಟೀಲ್ ಅವರನ್ನು ಕರ್ನಾಟಕ ನವೀಕರಿಬಹುದಾದ ಇಂಧನ ಅಭಿವೃದ್ದಿ ನಿಯಮಿತ ಅಧ್ಯಕ್ಷರನ್ನಾಗಿ,ತಮ್ಮೇಶ್ ಗೌಡ ಅವರನ್ನು ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತ ಅಧ್ಯಕ್ಷರನ್ನಾಗಿ,ಎಲ್.ಆರ್.ಮಹದೇವ ಸ್ವಾಮಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರನ್ನಾಗಿ,ಎಂ.ರುದ್ರೇಶ್ ಗೆ ಕರ್ನಾಟಕ ಗ್ರಾಮೀಣಾಭಿವೃದ್ದಿ ಮೂಲಸೌಕರ್ಯ ಅಭಿವೃದ್ದಿ ನಿಗದಮ ಅಧ್ಯಕ್ಷರನ್ನಾಗಿ,ಪಿ.ರುದ್ರೇಶ್ ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರ ಮಂಡಳಿಗೆ ಅಧಿಕಾರೇತ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ತಿಪಟೂರಿನ ಶಾಸಕ ಬಿ.ಸಿ.ನಾಗೇಶ್​ಗೆ ಕಾರ್ಮಿಕ ಕಲ್ಯಾಣ ಮಂಡಳಿ ಅಧ್ಯಕ್ಷ ಸ್ಥಾನ (ಹಿಂದೆ ತೆಂಗಿನ ನಾರು ಅಭಿ ವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟಾಗ ತಿರಸ್ಕರಿಸಿದ್ದರು) ಬಿ.ಸಿ.ನಾಗೇಶ್ ತಿರಸ್ಕರಿಸಿದ್ದ ನಾರು ಅಭಿವೃದ್ಧಿ ಮಂ ಡಳಿ ಅಧ್ಯಕ್ಷ ಸ್ಥಾನವನ್ನು ಶಿರಾ ಕ್ಷೇತ್ರದ ಬಿ.ಕೆ.ಮಂಜುನಾಥ್​​​ಗೆ ನೀಡಿದ್ದಾರೆ.ಶಿರಾ ಕ್ಷೇತ್ರದ ಎಸ್.ಆರ್.ಗೌಡಗೆ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ ಅಧ್ಯಕ್ಷ ಸ್ಥಾನ,ಕೆ.ವಿ.ನಾಗರಾಜ್​​ಗೆ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತದ ಅಧ್ಯಕ್ಷ ಸ್ಥಾನ,ಸವಿತಾ ವಿಶ್ವನಾಥ್ ಅಮರ್ ಶೆಟ್ಟಿಗೆ ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತದ ಅಧ್ಯಕ್ಷ ಸ್ಥಾನ,ತಿಪ್ಪೇಸ್ವಾಮಿಗೆ ಕಾಡಾ ನಿಗಮದ ಅಧ್ಯಕ್ಷ ಸ್ಥಾನವನ್ನು ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here