Home ರಾಜಕೀಯ ಕೆ. ರೋಸಯ್ಯ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಕೆ. ರೋಸಯ್ಯ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

68
0
CM Bommai others condole death of Rosaiah

ಬೆಂಗಳೂರು:

ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಕರ್ನಾಟಕ ಹಾಗೂ ತಮಿಳನಾಡಿನ ಮಾಜಿ ರಾಜ್ಯಪಾಲ ಕೆ. ರೋಸಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸುಮಾರು ಐದು ದಶಕಗಳ ರಾಜಕೀಯ ಜೀವನದಲ್ಲಿ ಶಾಸಕ, ಸಂಸದ, ಸಚಿವರಾಗಿಯೂ ಸೇವೆ ಸಲ್ಲಿಸಿದ ರೋಸಯ್ಯ ಅವರು ಹಣಕಾಸು ಸಚಿವರಾಗಿ 16 ಬಾರಿ ಆಯವ್ಯಯ ಮಂಡಿಸಿ ದಾಖಲೆ ನಿರ್ಮಿಸಿದವರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Also Read: CM Bommai others condole death of Rosaiah

LEAVE A REPLY

Please enter your comment!
Please enter your name here