Home ಬೆಂಗಳೂರು ನಗರ ಕನ್ನಡಿಗರ ಹಿತ ರಕ್ಷಿಸುವಲ್ಲಿ ವಿಫಲ, ಸಿಎಂ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು- ಸಿದ್ದರಾಮಯ್ಯ

ಕನ್ನಡಿಗರ ಹಿತ ರಕ್ಷಿಸುವಲ್ಲಿ ವಿಫಲ, ಸಿಎಂ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು- ಸಿದ್ದರಾಮಯ್ಯ

20
0
Siddaramaiah
bengaluru

ಬೆಂಗಳೂರು:

ಗಡಿ ವಿಚಾರದಲ್ಲಿ ಕನ್ನಡಿಗರ ಹಿತರಕ್ಷಿಸುವಲ್ಲಿ ವಿಫಲವಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ಒತ್ತಾಯಿಸಿದ್ದಾರೆ.

ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಹಾರಾಷ್ಟ್ರ ಸರ್ಕಾರ ಕರ್ನಾಟಕದ ಗಡಿ ಗ್ರಾಮಗಳಲ್ಲಿ ಆರೋಗ್ಯ ಯೋಜನೆ ಜಾರಿಗೊಳಿಸುವುದಾಗಿ ಹೇಳಿಕೆ ನೀಡಿದರೂ ಸಿಎಂ ಬಸವರಾಜ ಬೊಮ್ಮಾಯಿ ಮೌನ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕರ್ನಾಟಕದ ಆಡಳಿತದಲ್ಲಿ ಮಹಾರಾಷ್ಟ್ರ ಸರ್ಕಾರ ಅನವಶ್ಯಕವಾಗಿ ಮಧ್ಯಪ್ರವೇಶಿಸುತ್ತಿದೆ. ಆದ್ದರಿಂದ ಗಡಿಯಲ್ಲಿನ 865 ಗ್ರಾಮಗಳಲ್ಲಿ ಆರೋಗ್ಯ ವಿಮಾ ಯೋಜನೆ ಅನುಷ್ಟಾನ ಸ್ಥಗಿತಕ್ಕೆ ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಮತ್ತು ಮಹಾರಾಷ್ಟ್ರ ಸರ್ಕಾರ ವನ್ನು ವಜಾಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

LEAVE A REPLY

Please enter your comment!
Please enter your name here