ಅಂಕೇಗೌಡರ 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳ ಸಂಗ್ರಹಕ್ಕೆ ಸೂಕ್ತ ಕಟ್ಟಡ ಕಲ್ಪಿಸಲು ಸಿಎಂ ಸೂಚನೆ
ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಹಾಗೂ ಪುಸ್ತಕ ಪ್ರೇಮಿ ಎಂ. ಅಂಕೇಗೌಡ ಅವರ ಸಂಗ್ರಹದಲ್ಲಿರುವ 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳಿಗೆ ಸೂಕ್ತ ಜಾಗ ಗುರುತಿಸಿ, ಸುಸಜ್ಜಿತ ಕಟ್ಟಡ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರಿಗೆ ಸೂಚಿಸಿದ್ದಾರೆ.
ಅಂಕೇಗೌಡ ಅವರು ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ತಮ್ಮ ಪುಸ್ತಕ ಸಂಗ್ರಹಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರನ್ನು ಸನ್ಮಾನಿಸಿದರು.
ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಅಂಕೇಗೌಡ ಜ್ಞಾನ ಪ್ರತಿಷ್ಠಾನದ ಮೂಲಕ ಅವರು 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಿಸಿದ್ದಾರೆ. ಇದು ದೇಶದ ಅತಿದೊಡ್ಡ ವೈಯಕ್ತಿಕ ಗ್ರಂಥಾಲಯಗಳಲ್ಲಿ ಒಂದಾಗಿದ್ದು, ಸೂಕ್ತ ಕಟ್ಟಡ ಒದಗಿಸಿದರೆ ಮಕ್ಕಳಿಗೆ ಜ್ಞಾನಕೇಂದ್ರವಾಗಲಿದೆ ಎಂದು ಅಂಕೇಗೌಡ ತಿಳಿಸಿದರು.
ತಮ್ಮ ಸಂಗ್ರಹದಲ್ಲಿರುವ ಅಪರೂಪದ ನಾಣ್ಯಗಳು ಮತ್ತು ಅಂಚೆ ಚೀಟಿಗಳನ್ನು ಅವರು ಮುಖ್ಯಮಂತ್ರಿಗೆ ತೋರಿಸಿ ಅವುಗಳ ಮಹತ್ವವನ್ನು ವಿವರಿಸಿದರು. ಶಿವಕುಮಾರ್ ಅಪರೂಪದ ವಸ್ತುಗಳನ್ನು ಕುತೂಹಲದಿಂದ ವೀಕ್ಷಿಸಿದರು.
ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಉಪಸ್ಥಿತರಿದ್ದರು.