Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಸಿಎಂ–ಡಿಸಿಎಂ ಜಂಟಿ ಸುದ್ದಿಗೋಷ್ಠಿ: ‘ನಾಳೆಯಿಂದ ಗೊಂದಲ ಇಲ್ಲ’ — ಸಿದ್ದರಾಮಯ್ಯ–ಡಿಕೆ ಶಿವಕುಮಾರ್ ಒಗ್ಗಟ್ಟಿನ ಸಂದೇಶ
  • ರಾಜಕೀಯ
  • ಬೆಂಗಳೂರು ನಗರ

ಸಿಎಂ–ಡಿಸಿಎಂ ಜಂಟಿ ಸುದ್ದಿಗೋಷ್ಠಿ: ‘ನಾಳೆಯಿಂದ ಗೊಂದಲ ಇಲ್ಲ’ — ಸಿದ್ದರಾಮಯ್ಯ–ಡಿಕೆ ಶಿವಕುಮಾರ್ ಒಗ್ಗಟ್ಟಿನ ಸಂದೇಶ

CM-DCM joint press conference: 'No confusion from tomorrow' — Siddaramaiah-DK Shivakumar's message of unity
The Bengaluru Live November 29, 2025 2:08 PM 1 minute read
ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆಯೇ? ಹೈಕಮಾಂಡ್ ಬುಲಾವಿನ ಬೆನ್ನಲ್ಲೇ ದೆಹಲಿಗೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆಯೇ? ಹೈಕಮಾಂಡ್ ಬುಲಾವಿನ ಬೆನ್ನಲ್ಲೇ ದೆಹಲಿಗೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: ಬೆಳಗಿನ ಬ್ರೇಕ್ಫಾಸ್ಟ್‌ ಸಭೆಯ ಕೆಲವೇ ಗಂಟೆಗಳ ಬಳಿಕ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಬ್ಬರೂ ಪಕ್ಷದೊಳಗಿನ ಗೊಂದಲ, ಭಿನ್ನಾಭಿಪ್ರಾಯ ಮತ್ತು ಅಧಿಕಾರ ಹಂಚಿಕೆ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ನೇರ ತೆರೆ ಎಳೆದರು.

“ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ. ಈಗಲೂ ನಮ್ಮೊಳಗೆ ಗೊಂದಲ ಇರಲಿಲ್ಲ—ಆದರೆ ಕೆಲವು ಕ್ರಿಯೇಷನ್‌ಗಳು ಹೊರಗಿನಿಂದ ಬಂದವು,” ಎಂದು ಸಿದ್ದರಾಮಯ್ಯ ಹೇಳಿದರು. ಇತ್ತೀಚಿನ ದಿನಗಳಲ್ಲಿ ಕೆಲವೊಂದು ಮಾಧ್ಯಮಗಳು ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡಿದ್ದವು ಎಂಬುದನ್ನು ಅವರು ಸೂಚಿಸಿದರು.

ಡಿಕೆ ಶಿವಕುಮಾರ್ ಕೂಡ ಇದೇ ಸಂದೇಶವನ್ನು ಪುನರುಚ್ಚರಿಸಿ, ಸಿಎಂ–ಡಿಸಿಎಂ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ, ಮುಂದಿನ ದಿನಗಳಲ್ಲೂ ಜಂಟಿಯಾಗಿ ಕೆಲಸ ಮಾಡುತ್ತಾರೆ ಎಂಬುದನ್ನು ಸ್ಪಷ್ಟಪಡಿಸಿದರು. “ನಾವು 2023ರ ವಿಧಾನಸಭಾ ಚುನಾವಣೆಯಲ್ಲೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ಮುಂದಿನ ಲೋಕಲ್ ಬಾಡಿ ಚುನಾವಣೆ, ಕಾರ್ಪೊರೇಷನ್ ಚುನಾವಣೆ, 2028ರ ವಿಧಾನಸಭಾ ಚುನಾವಣೆ—ಎಲ್ಲವನ್ನೂ ನಾವು ಇಬ್ಬರೂ ಸೇರಿ ಎದುರಿಸುತ್ತೇವೆ,” ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಅವರು ತಮ್ಮ ಮತ್ತು ಡಿಕೆ ಶಿವಕುಮಾರ್ ಅವರ ನಡುವೆ ಯಾವುದೇ ಡಿಫರೆನ್ಸಸ್ ಇಲ್ಲ ಎಂದು ಪುನಃ ಒತ್ತಿ ಹೇಳಿದರು. “ಇವತ್ತಿನವರೆಗೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ. ಮುಂದೆಯೂ ಇರಲ್ಲ. ನಮ್ಮಿಬ್ಬರೂ ಒಟ್ಟಿಗೆ ಮುಂದುವರಿಯುತ್ತೇವೆ,” ಎಂದು ಅವರು ಸ್ಪಷ್ಟಪಡಿಸಿದರು.

ಗೊಂದಲದ ಮೂಲ ಕುರಿತಾಗಿ ಪ್ರಶ್ನೆಗಳು ಬಂದಾಗ, ಸಿಎಂ ಕೆಲವೊಂದು ತಪ್ಪು ವ್ಯಾಖ್ಯಾನಗಳು ಮತ್ತು ರಾಜಕೀಯವಾಗಿ ರಚಿಸಲಾದ ಕಥಾನಕಗಳು ಈ ಅನಗತ್ಯ ತೊಂದರೆಗೆ ಕಾರಣವಾದವು ಎಂದು ಹೇಳಿದರು. “ಕೆಲವರು ಸುಳ್ಳು ಅಪವಾದಗಳನ್ನು ಹೊರಹಾಕಿದರು. ಬಿಜೆಪಿ–ಜೆಡಿಎಸ್‌ ಚಾಳಿಗಳು ಕೂಡ ಗೊಂದಲ ಸೃಷ್ಟಿಸಿದವು,” ಎಂದು ಅವರು ಹೇಳಿದರು.

ಹೈಕಮಾಂಡ್ ವಿಷಯಕ್ಕೂ ಅವರು ಸ್ಪಷ್ಟನೆ ನೀಡುತ್ತಾ, “ನಾವಿಬ್ಬರೂ ಹೈಕಮಾಂಡ್ ಏನು ಹೇಳುತ್ತದೋ ಅದನ್ನೇ ಕೇಳಿ ನಡೆದುಕೊಳ್ಳುತ್ತೇವೆ,” ಎಂದು ಹೇಳಿದರು. ನಾಯಕತ್ವ ಬದಲಾವಣೆ ಅಥವಾ ಪವರ್ ಶೇರಿಂಗ್ ಕುರಿತ ಪ್ರಶ್ನೆಗಳಿಗೆ ನೇರ ಉತ್ತರ ನೀಡದಿದ್ದರೂ, ಇಬ್ಬರೂ ಸೇರಿ ತೆಗೆದುಕೊಂಡ ನಿರ್ಧಾರವೇ ಪಕ್ಷದ ಮಾರ್ಗವಾಗಿರುತ್ತದೆ ಎಂದು ಸೂಚಿಸಿದರು.

ವಿಧಾನಸಭೆಯ ಹೊಸ ಸೆಶನ್‌ ಪ್ರಾರಂಭವಾಗುತ್ತಿರುವ ಸಂದರ್ಭದಲ್ಲಿ, ಇಬ್ಬರೂ ನಾಯಕರು ವಿರೋಧ ಪಕ್ಷದ ಆರೋಪಗಳು, ಅಪವಾದ ಮತ್ತು ಸುಳ್ಳು ದಾಳಿಗಳಿಗೆ ಏಕಮುಖವಾಗಿ ಪ್ರತಿಕ್ರಿಯಿಸುತ್ತೇವೆ ಎಂದು ಹೇಳಿದರು. “ನಾವಿಬ್ಬರೂ ಒಟ್ಟಿಗೆ ಸ್ಪಷ್ಟ ಸ್ಟ್ರಾಟಜಿ ಮಾಡಿಕೊಂಡಿದ್ದೇವೆ,” ಎಂದು ಸಿಎಂ ಹೇಳಿದರು.

ಒಟ್ಟಾರೆಯಾಗಿ, ಬ್ರೇಕ್ಫಾಸ್ಟ್‌ ಸಭೆ + ಜಂಟಿ ಪ್ರೆಸ್‌ ಮೀಟ್ ಮೂಲಕ ಕಾಂಗ್ರೆಸ್‌ ಸರ್ಕಾರದ ಟಾಪ್‌ ಇಬ್ಬರು ನಾಯಕರು ಸ್ಪಷ್ಟ ಸಂದೇಶ ನೀಡಿದ್ದು—ಪಕ್ಷದೊಳಗಿನ ಗೊಂದಲಕ್ಕೆ ತೆರೆ, ಮುಂದಿನ ಎಲ್ಲಾ ಚುನಾವಣೆಗೂ ಜಂಟಿ ನಾಯಕತ್ವ.

Also Read: ‘No Confusion From Tomorrow’: Siddaramaiah–DK Shivakumar Reaffirm Unity After Breakfast Meeting

ಇದನ್ನೂ ಓದಿ: ಡಿಕೆ ಶಿವಕುಮಾರ್–ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಸಭೆ: ಕಾಂಗ್ರೆಸ್ ಒಗ್ಗಟ್ಟು ಮತ್ತು ಚುನಾವಣೆ ತಂತ್ರ ಚರ್ಚೆ

ಇದನ್ನೂ ಓದಿ: ಬ್ರೇಕ್‌ಫಾಸ್ಟ್‌ ಸಭೆಯ ಬಳಿಕ ಸಿಎಂ–ಡಿಸಿಎಂ ಜಂಟಿ ಪ್ರೆಸ್ ಮೀಟ್: ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ತೆರೆ, ಕಾಂಗ್ರೆಸ್ ಒಗ್ಗಟ್ಟಿನ ಸಂದೇಶ

ಇದನ್ನೂ ಓದಿ: “ನಮ್ಮದು ಒಂದೇ ಗುಂಪು — ಕಾಂಗ್ರೆಸ್”, ರಾಜ್ಯಾಡಳಿತ ಮತ್ತು ಚುನಾವಣೆ ತಂತ್ರದಲ್ಲಿ ಸಂಪೂರ್ಣ ಒಗ್ಗಟ್ಟು: ಡಿಕೆ ಶಿವಕುಮಾರ್ ಸ್ಪಷ್ಟ ಸಂದೇಶ


About the Author

The Bengaluru Live

Administrator

Visit Website View All Posts

Post navigation

Previous: “ನಮ್ಮದು ಒಂದೇ ಗುಂಪು — ಕಾಂಗ್ರೆಸ್”, ರಾಜ್ಯಾಡಳಿತ ಮತ್ತು ಚುನಾವಣೆ ತಂತ್ರದಲ್ಲಿ ಸಂಪೂರ್ಣ ಒಗ್ಗಟ್ಟು: ಡಿಕೆ ಶಿವಕುಮಾರ್ ಸ್ಪಷ್ಟ ಸಂದೇಶ
Next: KSCA ಅಧ್ಯಕ್ಷೀಯ ಚುನಾವಣೆಗೆ ಶಾಂತಕುಮಾರ್ ಸ್ಪರ್ಭೆಗೆ ಹಸಿರು ನಿಶಾನೆ: “ನನಗೆ ತುಂಬಾ ಸಂತೋಷ… ಈಗ ಸ್ಪರ್ಧೆಗೆ ದಾರಿ ತೆರೆದಿದೆ”

Related Stories

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

The Bengaluru Live November 24, 2026 9:08 PM

Latest Post

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM
ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್ ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

November 24, 2026 9:08 PM
11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಳಿತಿರುವ ಶಾಸಕರು
  • ಕರ್ನಾಟಕ
  • ರಾಜಕೀಯ

11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

November 24, 2026 8:23 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

The Bengaluru Live November 24, 2026 9:28 PM
ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

The Bengaluru Live November 24, 2026 9:09 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
  • ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್
  • ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ
©Copyright 2025 The Bengaluru Live All rights reserved. | MoreNews by AF themes.