ಮೈಸೂರು: ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಸ್ವಾಗತಿಸಿದರು. ನಾಳೆ ವೈನಾಡು ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕ ಗಾಂಧಿ ಸ್ಪರ್ಧೆ ಹಿನ್ನಲೆಯಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಆಗಮಿಸಿದ್ದರು.
ಈ ಸಂದರ್ಭ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆಗಾಗಿ ಮೈಸೂರಿನಲ್ಲೇ ಇದ್ದ ಸಿಎಂ, ಡಿಸಿಎಂ ಇಬ್ಬರು ನಾಯಕಿಯರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಮೈಸೂರು ವಿಮಾನ ನಿಲ್ದಾಣದಿಂದ ರಸ್ತೆಯ ಮೂಲಕ ವೈನಾಡಿಗೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಪ್ರಯಾಣ ಬೆಳೆಸಿದರು.