Home ಬೆಂಗಳೂರು ನಗರ ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು

ಸ್ಮಾರ್ಟ್ ಸಿಟಿ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು

70
0

4 ಕಾಮಗಾರಿಗಳು ಪೂರ್ಣ; 29 ಕಾಮಗಾರಿಗಳು ಪ್ರಗತಿಯಲ್ಲಿವೆ

ಬೆಂಗಳೂರು:

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಅವರು ಈ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

WhatsApp Image 2021 01 30 at 12.52.19

ಮುಖ್ಯಮಂತ್ರಿಗಳು ರೇಸ್ ಕೋರ್ಸ್ ರಸ್ತೆ, ರಾಜಾರಾಮ್ ಮೋಹನ್ ರಾಯ್ ರಸ್ತೆ, ಹೇಯ್ನ್ ಸ್ ರಸ್ತೆ, ಹುಡ್ ಸ್ಟ್ರೀಟ್, ಟಾಟಾ ಲೇನ್ , ಕ್ಯಾಪಿಟಲ್ ಹೋಟೆಲ್-ರಾಜಭವನ ಜಂಕ್ಷನ್ ಮತ್ತು ಪ್ಲಾನೆಟೇರಿಯಂ ರಸ್ತೆಗಳ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರಿನಲ್ಲಿ 37 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಅದರಲ್ಲಿ ರಸ್ತೆ ಅಭಿವೃದ್ಧಿ, ಕೋವಿಡ್ ಆಸ್ಪತ್ರೆಗಳಿಗೆ ನೆರವು, ಐಟಿ-ಯೋಜನೆಗಳು, ಕಟ್ಟಡ ನಿರ್ಮಾಣ ಮತ್ತು ಇತರ ಕಾಮಗಾರಿಗಳು ಸೇರಿವೆ. ಇದರ ಅಂದಾಜು ವೆಚ್ಚ 930 ಕೋಟಿ ರೂ.ಗಳು.

WhatsApp Image 2021 01 30 at 12.52.15

ಈ ವರೆಗೆ 4 ಕಾಮಗಾರಿಗಳು ಪೂರ್ಣಗೊಂಡಿವೆ. 29 ಕಾಮಗಾರಿಗಳು ಪ್ರಗತಿಯಲ್ಲಿವೆ. 4 ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ವರೆಗೆ 103 ಕೋಟಿ ರೂ. ವೆಚ್ಚವಾಗಿದೆ.

ಈ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಗುಣಮಟ್ಟದ ಕಾಮಗಾರಿಯನ್ನು ಖಾತರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here