Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಿಮ್ಮ ಸಮಸ್ಯೆ ಬಗ್ಗೆ ಅರಿವಿದೆ, ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ: ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿ.ಕೆ. ಶಿವಕುಮಾರ್ ಮತ್ತೆ ಮನವಿ
  • ಕರ್ನಾಟಕ

ನಿಮ್ಮ ಸಮಸ್ಯೆ ಬಗ್ಗೆ ಅರಿವಿದೆ, ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ: ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿ.ಕೆ. ಶಿವಕುಮಾರ್ ಮತ್ತೆ ಮನವಿ

The Bengaluru Live November 26, 2026 1:58 PM 1 minute read
ಸಂವಿಧಾನ ದಿನದಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಸಂವಿಧಾನ ದಿನದ ಅಂಗವಾಗಿ ನವೆಂಬರ್ 26ರಂದು ಬೆಂಗಳೂರಿನ ವಿಧಾನಸೌಧದ ಬಳಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್. ಚಿತ್ರ: ಡಿಐಪಿಆರ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: “ನಿಮ್ಮ ಸಮಸ್ಯೆಗಳ ಬಗ್ಗೆ ನಮಗೆ ಅರಿವಿದೆ. ನಾವು ಅದಕ್ಕೆ ಸೂಕ್ತ ಪರಿಹಾರ ನೀಡುತ್ತೇವೆ. ಇಂದು ಸಂಜೆ ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ. ನಮ್ಮ ಮೇಲೆ ನಂಬಿಕೆಯನ್ನಿಡಿ. ನಾಡಿನ ಮುಖ್ಯಮಂತ್ರಿಯಾಗಿ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ, ತಾಯಂದಿರಿಗೆ ನಮ್ರತೆಯಿಂದ ವಿನಂತಿಸುತ್ತೇನೆ, ನಿಮ್ಮ ಪ್ರತಿಭಟನೆ ಹಿಂತೆಗೆದುಕೊಳ್ಳಿ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನವೆಂಬರ್ 26ರಂದು ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರಿಗೆ ಮತ್ತೊಮ್ಮೆ ಮನವಿ ಮಾಡಿದರು. ಬೆಂಗಳೂರಿನ ವಿಧಾನಸೌಧ, ಚನ್ನಪಟ್ಟಣ ಹಾಗೂ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು.

“ನಾವು ನಿಮ್ಮ ಪರವಾಗಿದ್ದೇವೆ. ಸರ್ಕಾರವನ್ನು ಹೆದರಿಸಬೇಡಿ. ಆಶಾ ಕಾರ್ಯಕರ್ತೆಯರು ಮೊದಲು ಪ್ರತಿಷ್ಠೆಯನ್ನು ಬಿಡಬೇಕು. ಬೇರೆಯವರು ನಿಮ್ಮನ್ನು ತಮ್ಮ ರಾಜಕಾರಣಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಅವರು ನಿಮಗೆ ಯಾವುದೇ ಸಹಾಯ ಮಾಡುವುದಿಲ್ಲ. ಇದರಲ್ಲಿ ಬಹಳ ಗಂಭೀರ ವಿಚಾರಗಳೂ ಇವೆ. ಆಶಾ ಕಾರ್ಯಕರ್ತರು ಒಬ್ಬರೇ ಅಲ್ಲ, ಈ ರೀತಿ ಪ್ರತಿಭಟನೆ ಮಾಡಲು ಹಲವು ಮಂದಿ ಸಿದ್ಧರಾಗುತ್ತಿದ್ದಾರೆ” ಎಂದರು.

ಪ್ರತಿಭಟನೆ ಸ್ಥಳಕ್ಕೆ ಹೋಗಿ ಬಂದ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮೇಲೆ ಏಕೆ ಒತ್ತಡ ಹೇರುತ್ತಿಲ್ಲ ಎಂದು ಪ್ರಶ್ನಿಸಿದ ಅವರು, “ಪ್ರತಿಭಟನೆ ಮಾಡುತ್ತಿರುವವರು ಕೇಂದ್ರ ಸರ್ಕಾರವನ್ನು ಏಕೆ ಪ್ರಶ್ನೆ ಮಾಡುತ್ತಿಲ್ಲ? ಇವರ ಬೇಡಿಕೆ ಈಡೇರಿಸುವುದರಲ್ಲಿ ಕೇಂದ್ರದ ಜವಾಬ್ದಾರಿ ಇಲ್ಲವೇ? ನಾವು ಪ್ರಣಾಳಿಕೆಯಲ್ಲಿ ಹೇಳಿದಂತೆ ಈಗಾಗಲೇ ಕೊಟ್ಟಿದ್ದೇವೆ. ಈಗಲೂ ಸಮಸ್ಯೆಗೆ ಪರಿಹಾರವನ್ನು ಕೊಡುತ್ತೇವೆ” ಎಂದರು.

ಗ್ಯಾರಂಟಿಗಳನ್ನು ಜಾರಿ ಮಾಡುವಾಗ ಜನರ ಒಳಿತಿಗಾಗಿ ಚರ್ಚಿಸಿ ಜಾರಿ ಮಾಡಿದ್ದೇವೆ; ಮನೆ ಯಜಮಾನಿಗೆ ಉಚಿತ ವಿದ್ಯುತ್, 2 ಸಾವಿರ ರೂ. ನೀಡುತ್ತಿದ್ದೇವೆ ಎಂದ ಅವರು, “ನಿಮ್ಮನ್ನು ಹಲವು ಸಲ ಭೇಟಿಯಾಗಿದ್ದೇನೆ. ನೆಲಮಂಗಲಕ್ಕೆ ಹೋಗಿ ಭೇಟಿ ಮಾಡಿ ಬಂದಿದ್ದೇನೆ. ಹೆಣ್ಣು ಎಂದರೆ ಕುಟುಂಬದ ಕಣ್ಣು. ನಿಮ್ಮ ಸಮಸ್ಯೆಗಳ ಬಗ್ಗೆ ನಮಗೆ ಅರಿವಿದೆ” ಎಂದರು.

ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರಿಗೆ ಲಿಖಿತವಾಗಿ ಬರೆದುಕೊಡುತ್ತೀರಾ ಎಂಬ ಪ್ರಶ್ನೆಗೆ, “ನಾನು ಲಿಖಿತವಾಗಿ ಬರೆದುಕೊಡಲು ಆಗುವುದಿಲ್ಲ. ಇದು ಒಪ್ಪಂದವಲ್ಲ. ಇಲ್ಲಿ ಯಾರ ಬಳಿ ಒಪ್ಪಂದ ಮಾಡಿಕೊಳ್ಳಬೇಕು? ಕೇಂದ್ರ ಸರ್ಕಾರದ ಮುಂದೆ ಲಿಖಿತ ಉತ್ತರ ಯಾಕೆ ಕೇಳುತ್ತಿಲ್ಲ? ಈ ರಾಜ್ಯದ ಮುಖ್ಯಮಂತ್ರಿಗಳ ಮಾತಿನ ಮೇಲೆ ನಂಬಿಕೆ ಇಲ್ಲ ಅಂದರೆ ನಾನೇನು ಮಾಡುವುದಕ್ಕೆ ಆಗುವುದಿಲ್ಲ. ಸರ್ಕಾರಕ್ಕೂ ಒಂದು ಮಿತಿ ಇದೆ” ಎಂದು ಸ್ಪಷ್ಟಪಡಿಸಿದರು.

“ಇಡೀ ದೇಶ ನಡೆಯುತ್ತಿರುವುದು ನಂಬಿಕೆಯ ಮೇಲೆ. 17 ಇಲಾಖೆಯಲ್ಲಿ ಇದೇ ರೀತಿ ಬೇಡಿಕೆ ಇದೆ. ಅವರು ಸರ್ಕಾರವನ್ನು ಬ್ಲಾಕ್‌ಮೇಲ್ ಮಾಡಿ ಯಶಸ್ವಿಯಾಗುತ್ತೇವೆ ಅಂದುಕೊಂಡಿದ್ದಾರೆ. ಯಾವುದೇ ಸರ್ಕಾರವನ್ನು ಬ್ಲಾಕ್‌ಮೇಲ್ ಮಾಡಲು ಆಗುವುದಿಲ್ಲ. ಆಶಾ ಕಾರ್ಯಕರ್ತರ ಬೇಡಿಕೆ ತಪ್ಪಲ್ಲ. ಗೌರವಧನ ಹೆಚ್ಚಿಸಿ ಎಂದು ಕೇಳುತ್ತಿದ್ದಾರೆ. ಈಗಾಗಲೇ ಹೆಚ್ಚಿಸಿದ್ದೇವೆ. ಮತ್ತೊಮ್ಮೆ ಹೆಚ್ಚಿಸುವ ನಿರ್ಧಾರ ಮಾಡುತ್ತೇವೆ. ಈ ವಿಚಾರವನ್ನು ಅಧಿವೇಶನದಲ್ಲೂ ಚರ್ಚೆ ನಡೆಸುತ್ತೇವೆ. ನಮ್ಮ ತಾಯಂದಿರಿಗೆ ನಮ್ರತೆಯಿಂದ ಮನವಿ ಮಾಡುವೆ, ನೀವು ಪ್ರತಿಭಟನೆ ನಿಲ್ಲಿಸಿ ಕೆಲಸಕ್ಕೆ ಹೋಗಿ, ನಾವು ನಿಮ್ಮನ್ನು ಕರೆಸಿ ತೀರ್ಮಾನ ಮಾಡುತ್ತೇವೆ” ಎಂದರು.

ಆಶಾ ಕಾರ್ಯಕರ್ತರು ಇಲ್ಲದಿದ್ದರೂ ನಡೆಯುತ್ತದೆ ಎಂಬ ಆರೋಗ್ಯ ಸಚಿವರ ಹೇಳಿಕೆಯ ಬಗ್ಗೆ ಕೇಳಿದಾಗ, “ಇಲ್ಲ, ಅದೆಲ್ಲಾ ಸುಳ್ಳು. ನಮಗೆ ಎಲ್ಲರೂ ಬೇಕು. ನರೇಂದ್ರಸ್ವಾಮಿ ಅವರ ಹೇಳಿಕೆಯನ್ನು ತಿರುಚಿದ್ದಾರೆ” ಎಂದರು. ಸಂಸದ ಮಂಜುನಾಥ್ ಅವರು 1500 ರೂ. ಪ್ರೋತ್ಸಾಹ ಧನ ಹೆಚ್ಚಿಸುವ ಭರವಸೆ ನೀಡಿದ್ದು, ಈ ಬಗ್ಗೆ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೀರಾ ಎಂದು ಕೇಳಿದಾಗ, “ಅವರು ಬಹಳ ದೊಡ್ಡವರು, ಅವರ ಬಗ್ಗೆ ನನಗೆ ಹೆಚ್ಚು ಗೊತ್ತಿಲ್ಲ” ಎಂದರು.

ಆನೆ ಸಂಘರ್ಷದ ಬಗ್ಗೆ ಕೇಳಿದಾಗ, “ಆನೆಗಳನ್ನು ನಿಯಂತ್ರಣ ಮಾಡುವುದಕ್ಕೆ ಆಗುವುದಿಲ್ಲ. ಅದು ಸುಲಭದ ಕೆಲಸವೂ ಅಲ್ಲ. ನಮ್ಮ ಮನೆ ಪಕ್ಕದಲ್ಲೇ 550 ಆನೆಗಳು ಹಾದು ಹೋಗಿವೆ. ಚಿಕ್ಕಮಗಳೂರು ಶಾಸಕರು ಕೇಳುತ್ತಿರುವುದರಲ್ಲಿ ತಪ್ಪೇನಿಲ್ಲ. ಆದರೆ ಗಡಿಗಳಲ್ಲಿ ಅಷ್ಟು ದೊಡ್ಡ ಆನೆ ಹಿಂಡನ್ನು ಕಳಿಸುವುದು ಸರಿಯಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಚಿಕ್ಕಮಗಳೂರನ್ನು, ಹಾಸನವನ್ನೂ ನಾವು ರಕ್ಷಣೆ ಮಾಡಬೇಕು. ಎಲ್ಲಾ ಕಡೆ ಪ್ಲಾಂಟೇಷನ್‌ಗಳು ಇವೆ” ಎಂದರು. ಅರಣ್ಯ ಸಚಿವ ರಾಮಲಿಂಗರೆಡ್ಡಿ ಅವರು ಕಾಳಜಿ ವಹಿಸಿದ್ದು, ಶಾಸಕಿ ನಯನಾ ಮೋಟಮ್ಮ ಮುಂತಾದವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತಿದ್ದಾರೆ ಎಂದರು.

ಕ್ಲೀನ್ ಚಿಟ್ ಸಿಕ್ಕಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಮತ್ತೊಮ್ಮೆ ಸಂಪುಟಕ್ಕೆ ಸೇರಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ, “ಈ ಬಗ್ಗೆ ಪತ್ರಿಕೆಗಳಲ್ಲಿ ಮಾತ್ರ ಓದಿದ್ದೇನೆ. ನಾನು ಯಾವುದೇ ತನಿಖೆಗೆ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಸ್ಪಷ್ಟನೆ ನೀಡಿದರು.

ಸಂವಿಧಾನ ದಿನದ ಕುರಿತು ಮಾತನಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಈ ದಿನ ಸ್ಮರಿಸಬೇಕು ಎಂದರು. ತಾವು ಕೆಪಿಸಿಸಿ ಅಧ್ಯಕ್ಷರಾದಾಗ ಮಾಡಿದ ಮೊದಲ ಕೆಲಸ ರೆಹಮಾನ್ ಖಾನ್ ಅವರ ಕೈಯಲ್ಲಿ ಸಂವಿಧಾನದ ಪೀಠಿಕೆ ಓದಿಸಿದ್ದು; ಹಿಂದೆ ಮಹದೇವಪ್ಪ ಅವರು ಸಂವಿಧಾನದ ಆಶಯಗಳನ್ನು ಪ್ರತಿ ಮಕ್ಕಳಿಗೂ, ಜನರಿಗೂ ತಲುಪಿಸುವ ಕೆಲಸ ಮಾಡಿದ್ದರು, ಈಗ ಮುನಿಯಪ್ಪ ಅವರು ಮಾಡುತ್ತಿದ್ದಾರೆ ಎಂದರು. ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಾಲಾ-ಕಾಲೇಜುಗಳಲ್ಲಿ ಮತ್ತು ಸರ್ಕಾರದ ಎಲ್ಲಾ ಕಾರ್ಯಕ್ರಮಗಳಲ್ಲಿ ಸಂವಿಧಾನದ ಪೀಠಿಕೆ ಓದಲು ಆದೇಶ ನೀಡಲಾಗಿದೆ ಎಂದ ಅವರು, “ಸಂವಿಧಾನ ನಮ್ಮೆಲ್ಲರ ಬದುಕಿನ ದೊಡ್ಡ ಪ್ರಾಣ ಗ್ರಂಥ. ಅದರ ಮೇಲೆ ನಂಬಿಕೆ ಇಟ್ಟು ಬದುಕುತ್ತಿದ್ದೇವೆ. ಅದನ್ನು ಉಳಿಸಿಕೊಂಡು ಹೋಗುವ ಕೆಲಸವನ್ನು ನಾವೆಲ್ಲರೂ ಸೇರಿ ಒಟ್ಟಾಗಿ ಮಾಡೋಣ” ಎಂದು ಕರೆ ನೀಡಿದರು.

ಚನ್ನಪಟ್ಟಣದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರ ವಿವಾಹದ ಬಗ್ಗೆ ಕೇಳಿದಾಗ, “ನಮ್ಮ ಶಾಸಕ ಮಂತ್ರ ಮಾಂಗಲ್ಯ ಮೂಲಕ ಸರಳ ವಿವಾಹ ಮಾಡಿಕೊಳ್ಳುತ್ತಿದ್ದು, ಅದನ್ನು ಸ್ವಾಗತಿಸಬೇಕು” ಎಂದರು. ಚನ್ನಪಟ್ಟಣದ ರೇಷ್ಮೆ ಮಾರುಕಟ್ಟೆ ಹಾಗೂ ವಿಶ್ವವಿದ್ಯಾಲಯಗಳ ಕಾಮಗಾರಿಗಳನ್ನು ಖುದ್ದಾಗಿ ಬಂದು ಪರಿಶೀಲಿಸುವುದಾಗಿ ಹೇಳಿದರು. ಜಪಾನ್ ಪ್ರವಾಸದ ಬಗ್ಗೆ ಪ್ರಶ್ನಿಸಿದಾಗ, “ಹಾರೋಹಳ್ಳಿಗೆ ಬಂಪರ್ ಲಾಟರಿ ಹೊಡೆದಿದೆ. ಸುಮಾರು 600-700 ಜನಕ್ಕೆ ಉದ್ಯೋಗ ಸಿಗುವ ಸಾಧ್ಯತೆ ಇದೆ. ಈ ಪ್ರವಾಸದ ಬಗ್ಗೆ ಸದ್ಯದಲ್ಲೇ ವಿಸ್ತೃತವಾಗಿ ಮಾಹಿತಿ ನೀಡುತ್ತೇನೆ” ಎಂದರು.

ಇದನ್ನೂ ಓದಿ:

  • ಜಪಾನ್‌ನಿಂದಲೇ ವಿಡಿಯೋ ಕರೆ: ಪ್ರತಿಭಟನೆ ಕೈಬಿಡಿ, ಅಧಿವೇಶನದವರೆಗೆ ಸಮಯ ಕೊಡಿ ಎಂದು ಆಶಾ ಕಾರ್ಯಕರ್ತೆಯರಿಗೆ ಸಿಎಂ ಶಿವಕುಮಾರ್ ಮನವಿ
  • ಹೋರಾಟ ಕೈಬಿಡುವಂತೆ ಆಶಾ ಕಾರ್ಯಕರ್ತೆಯರಿಗೆ ಸಿಎಂ ಶಿವಕುಮಾರ್ ಮನವಿ: ಸಮಗ್ರ ಮತ್ತು ಶಾಶ್ವತ ಪರಿಹಾರಕ್ಕೆ ಸರ್ಕಾರ ಚಿಂತನೆ

About the Author

The Bengaluru Live

Administrator

Visit Website View All Posts

Post navigation

Previous: ಅಂಬೇಡ್ಕರ್ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್, ಸಂವಿಧಾನದ ಆಶಯಗಳಿಗೆ ದ್ರೋಹ ಬಗೆದಿದೆ: ಬಿ.ವೈ. ವಿಜಯೇಂದ್ರ
Next: ಶಿಕ್ಷಕರ ನೇಮಕಾತಿ ಪರೀಕ್ಷೆ ಜನವರಿಯೊಳಗೆ, ನೇಮಕಾತಿ ಆದೇಶ ಮಾರ್ಚ್–ಏಪ್ರಿಲ್‌ನಲ್ಲಿ: ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

Related Stories

ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯ ಸಭೆಯಲ್ಲಿ ಮಾತನಾಡುತ್ತಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ
  • ಕರ್ನಾಟಕ

ಶಿಕ್ಷಕರ ನೇಮಕಾತಿ ಪರೀಕ್ಷೆ ಜನವರಿಯೊಳಗೆ, ನೇಮಕಾತಿ ಆದೇಶ ಮಾರ್ಚ್–ಏಪ್ರಿಲ್‌ನಲ್ಲಿ: ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

The Bengaluru Live November 26, 2026 2:03 PM
ಬೆಂಗಳೂರಿನ ಸಂವಿಧಾನ ಗೌರವ ದಿನ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುತ್ತಿರುವ ಬಿಜೆಪಿ ನಾಯಕರು
  • ಕರ್ನಾಟಕ

ಅಂಬೇಡ್ಕರ್ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್, ಸಂವಿಧಾನದ ಆಶಯಗಳಿಗೆ ದ್ರೋಹ ಬಗೆದಿದೆ: ಬಿ.ವೈ. ವಿಜಯೇಂದ್ರ

The Bengaluru Live November 26, 2026 1:44 PM
ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ದೃಢೀಕರಣದೊಂದಿಗೆ ಪಡಿತರ ವಿತರಣೆಯ ಪ್ರಾತಿನಿಧಿಕ ಎಐ ಚಿತ್ರ
  • ಕರ್ನಾಟಕ

ಅಹಾರ ತಂತ್ರಾಂಶ, ಸರ್ವರ್ ಹಾಗೂ ಬಯೋಮೆಟ್ರಿಕ್ ತೊಂದರೆ: ನ.24-25ರಂದು ಪಡಿತರ ವಿತರಣೆಗೆ ಅಡ್ಡಿ; ವಿತರಣೆ ಸಮಯ ರಾತ್ರಿ 11.59ರವರೆಗೆ ವಿಸ್ತರಣೆ

The Bengaluru Live November 26, 2026 1:05 PM

Latest Post

ಶಿಕ್ಷಕರ ನೇಮಕಾತಿ ಪರೀಕ್ಷೆ ಜನವರಿಯೊಳಗೆ, ನೇಮಕಾತಿ ಆದೇಶ ಮಾರ್ಚ್–ಏಪ್ರಿಲ್‌ನಲ್ಲಿ: ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯ ಸಭೆಯಲ್ಲಿ ಮಾತನಾಡುತ್ತಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ
  • ಕರ್ನಾಟಕ

ಶಿಕ್ಷಕರ ನೇಮಕಾತಿ ಪರೀಕ್ಷೆ ಜನವರಿಯೊಳಗೆ, ನೇಮಕಾತಿ ಆದೇಶ ಮಾರ್ಚ್–ಏಪ್ರಿಲ್‌ನಲ್ಲಿ: ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

November 26, 2026 2:03 PM
ನಿಮ್ಮ ಸಮಸ್ಯೆ ಬಗ್ಗೆ ಅರಿವಿದೆ, ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ: ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿ.ಕೆ. ಶಿವಕುಮಾರ್ ಮತ್ತೆ ಮನವಿ ಸಂವಿಧಾನ ದಿನದಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ನಿಮ್ಮ ಸಮಸ್ಯೆ ಬಗ್ಗೆ ಅರಿವಿದೆ, ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ: ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿ.ಕೆ. ಶಿವಕುಮಾರ್ ಮತ್ತೆ ಮನವಿ

November 26, 2026 1:58 PM
ಅಂಬೇಡ್ಕರ್ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್, ಸಂವಿಧಾನದ ಆಶಯಗಳಿಗೆ ದ್ರೋಹ ಬಗೆದಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರಿನ ಸಂವಿಧಾನ ಗೌರವ ದಿನ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುತ್ತಿರುವ ಬಿಜೆಪಿ ನಾಯಕರು
  • ಕರ್ನಾಟಕ

ಅಂಬೇಡ್ಕರ್ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್, ಸಂವಿಧಾನದ ಆಶಯಗಳಿಗೆ ದ್ರೋಹ ಬಗೆದಿದೆ: ಬಿ.ವೈ. ವಿಜಯೇಂದ್ರ

November 26, 2026 1:44 PM
ಅಹಾರ ತಂತ್ರಾಂಶ, ಸರ್ವರ್ ಹಾಗೂ ಬಯೋಮೆಟ್ರಿಕ್ ತೊಂದರೆ: ನ.24-25ರಂದು ಪಡಿತರ ವಿತರಣೆಗೆ ಅಡ್ಡಿ; ವಿತರಣೆ ಸಮಯ ರಾತ್ರಿ 11.59ರವರೆಗೆ ವಿಸ್ತರಣೆ ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ದೃಢೀಕರಣದೊಂದಿಗೆ ಪಡಿತರ ವಿತರಣೆಯ ಪ್ರಾತಿನಿಧಿಕ ಎಐ ಚಿತ್ರ
  • ಕರ್ನಾಟಕ

ಅಹಾರ ತಂತ್ರಾಂಶ, ಸರ್ವರ್ ಹಾಗೂ ಬಯೋಮೆಟ್ರಿಕ್ ತೊಂದರೆ: ನ.24-25ರಂದು ಪಡಿತರ ವಿತರಣೆಗೆ ಅಡ್ಡಿ; ವಿತರಣೆ ಸಮಯ ರಾತ್ರಿ 11.59ರವರೆಗೆ ವಿಸ್ತರಣೆ

November 26, 2026 1:05 PM
ಸಂವಿಧಾನ ದಿನ: ಮೈಸೂರಿನಲ್ಲಿ ‘ಸಂವಿಧಾನ ರಕ್ಷಣಾ ಮಾರ್ಚ್’ಗೆ ಚಾಲನೆ ನೀಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮೈಸೂರಿನಲ್ಲಿ ಸಂವಿಧಾನ ರಕ್ಷಣಾ ಮಾರ್ಚ್ ಬ್ಯಾನರ್ ಹಿಡಿದು ಸಾಗುತ್ತಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತು ಕಾಂಗ್ರೆಸ್ ನಾಯಕರು
  • ಕರ್ನಾಟಕ

ಸಂವಿಧಾನ ದಿನ: ಮೈಸೂರಿನಲ್ಲಿ ‘ಸಂವಿಧಾನ ರಕ್ಷಣಾ ಮಾರ್ಚ್’ಗೆ ಚಾಲನೆ ನೀಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

November 26, 2026 11:55 AM
ಜಿಬಿಎ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಲ್ಲಿ ಸಂವಿಧಾನ ದಿನಾಚರಣೆ; ಅಧಿಕಾರಿಗಳಿಂದ ಸಂವಿಧಾನದ ಪ್ರಸ್ತಾವನೆ ವಾಚನ ಸಂವಿಧಾನ ದಿನದಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆವರಣದ ಅಂಬೇಡ್ಕರ್ ಪ್ರತಿಮೆ ಬಳಿ ನೆರೆದ ಜಿಬಿಎ ಅಧಿಕಾರಿಗಳು ಮತ್ತು ಸಿಬ್ಬಂದಿ
  • ಬೆಂಗಳೂರು ನಗರ

ಜಿಬಿಎ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯಲ್ಲಿ ಸಂವಿಧಾನ ದಿನಾಚರಣೆ; ಅಧಿಕಾರಿಗಳಿಂದ ಸಂವಿಧಾನದ ಪ್ರಸ್ತಾವನೆ ವಾಚನ

November 26, 2026 11:33 AM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯ ಸಭೆಯಲ್ಲಿ ಮಾತನಾಡುತ್ತಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ
  • ಕರ್ನಾಟಕ

ಶಿಕ್ಷಕರ ನೇಮಕಾತಿ ಪರೀಕ್ಷೆ ಜನವರಿಯೊಳಗೆ, ನೇಮಕಾತಿ ಆದೇಶ ಮಾರ್ಚ್–ಏಪ್ರಿಲ್‌ನಲ್ಲಿ: ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

The Bengaluru Live November 26, 2026 2:03 PM
ಸಂವಿಧಾನ ದಿನದಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ನಿಮ್ಮ ಸಮಸ್ಯೆ ಬಗ್ಗೆ ಅರಿವಿದೆ, ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ: ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿ.ಕೆ. ಶಿವಕುಮಾರ್ ಮತ್ತೆ ಮನವಿ

The Bengaluru Live November 26, 2026 1:58 PM
ಬೆಂಗಳೂರಿನ ಸಂವಿಧಾನ ಗೌರವ ದಿನ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುತ್ತಿರುವ ಬಿಜೆಪಿ ನಾಯಕರು
  • ಕರ್ನಾಟಕ

ಅಂಬೇಡ್ಕರ್ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್, ಸಂವಿಧಾನದ ಆಶಯಗಳಿಗೆ ದ್ರೋಹ ಬಗೆದಿದೆ: ಬಿ.ವೈ. ವಿಜಯೇಂದ್ರ

The Bengaluru Live November 26, 2026 1:44 PM
ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ದೃಢೀಕರಣದೊಂದಿಗೆ ಪಡಿತರ ವಿತರಣೆಯ ಪ್ರಾತಿನಿಧಿಕ ಎಐ ಚಿತ್ರ
  • ಕರ್ನಾಟಕ

ಅಹಾರ ತಂತ್ರಾಂಶ, ಸರ್ವರ್ ಹಾಗೂ ಬಯೋಮೆಟ್ರಿಕ್ ತೊಂದರೆ: ನ.24-25ರಂದು ಪಡಿತರ ವಿತರಣೆಗೆ ಅಡ್ಡಿ; ವಿತರಣೆ ಸಮಯ ರಾತ್ರಿ 11.59ರವರೆಗೆ ವಿಸ್ತರಣೆ

The Bengaluru Live November 26, 2026 1:05 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಶಿಕ್ಷಕರ ನೇಮಕಾತಿ ಪರೀಕ್ಷೆ ಜನವರಿಯೊಳಗೆ, ನೇಮಕಾತಿ ಆದೇಶ ಮಾರ್ಚ್–ಏಪ್ರಿಲ್‌ನಲ್ಲಿ: ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ
  • ನಿಮ್ಮ ಸಮಸ್ಯೆ ಬಗ್ಗೆ ಅರಿವಿದೆ, ಪರಿಹಾರ ನೀಡುತ್ತೇವೆ, ಪ್ರತಿಭಟನೆ ಕೈಬಿಡಿ: ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿ.ಕೆ. ಶಿವಕುಮಾರ್ ಮತ್ತೆ ಮನವಿ
  • ಅಂಬೇಡ್ಕರ್ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್, ಸಂವಿಧಾನದ ಆಶಯಗಳಿಗೆ ದ್ರೋಹ ಬಗೆದಿದೆ: ಬಿ.ವೈ. ವಿಜಯೇಂದ್ರ
  • ಅಹಾರ ತಂತ್ರಾಂಶ, ಸರ್ವರ್ ಹಾಗೂ ಬಯೋಮೆಟ್ರಿಕ್ ತೊಂದರೆ: ನ.24-25ರಂದು ಪಡಿತರ ವಿತರಣೆಗೆ ಅಡ್ಡಿ; ವಿತರಣೆ ಸಮಯ ರಾತ್ರಿ 11.59ರವರೆಗೆ ವಿಸ್ತರಣೆ
©Copyright 2025 The Bengaluru Live All rights reserved. | MoreNews by AF themes.