ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಬುಧವಾರ ನಡೆದ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕಾ (Institutional CSR) ಪ್ರತಿನಿಧಿಗಳ ಸಭೆಯಲ್ಲಿ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಉಪಸಭಾಪತಿ ಮಂಕಾಳ್ ವೈದ್ಯ, ಸಚಿವ ಮಧು ಬಂಗಾರಪ್ಪ, ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿ ಖಾನ್, ಮುಖ್ಯಮಂತ್ರಿಗಳ ಪ್ರಧಾನ ಸಲಹೆಗಾರ ಜಿ.ಸಿ. ಚಂದ್ರಶೇಖರ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಶಾಲಾ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಶ್ಮೀ ಮಹೇಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಶಾಲಾ ಶಿಕ್ಷಣ ಆಯುಕ್ತೆ ಕೆ. ವಿದ್ಯಾಕುಮಾರಿ ಮತ್ತಿತರರು ಉಪಸ್ಥಿತರಿದ್ದರು.
