Home Uncategorized CM Siddaramaiah: ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ: ಸಿಎಂ ಸಿದ್ದರಾಮಯ್ಯ

CM Siddaramaiah: ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ: ಸಿಎಂ ಸಿದ್ದರಾಮಯ್ಯ

19
0

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅರಿವು ಸಾಲ ಯೋಜನೆಯಡಿ ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನೀಡುವ ಸಾಲದ ಮೊತ್ತವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಫ್‌ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸಂಖ್ಯೆ ಹೆಚ್ಚಳ ಹಾಗೂ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಮಾಣ ಹೆಚ್ಚಳ ಮಾಡಿರುವುದಕ್ಕೆ ಅನುಗುಣವಾಗಿ ಹೆಚ್ಚುವರಿ ಹುದ್ದೆಗಳ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

Iphone 15 Bigg Update: ಐಫೋನ್ 15 ಸೀರೀಸ್ ಬಳಕೆದಾರರಿಗೆ ಬಿಗ್‌ ಅಪೆ ಡೇಟ್:‌ ಏನಂತೀರಾ?!

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ನಿಗದಿತ ಗುರಿಗೆ ಎದುರಾಗಿ ನಿರೀಕ್ಷೆಗೂ ಮೀರಿ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅರ್ಹ ಫಲಾನುಭವಿಗಳ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿ, ಅನುದಾನ ಲಭ್ಯತೆಗೆ ಅನುಸಾರವಾಗಿ ಸೌಲಭ್ಯ ವಿತರಿಸುವಂತೆ ಸೂಚಿಸಿದರು.

The post CM Siddaramaiah: ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ: ಸಿಎಂ ಸಿದ್ದರಾಮಯ್ಯ appeared first on Ain Live News.

LEAVE A REPLY

Please enter your comment!
Please enter your name here