ಬೆಂಗಳೂರು: ಗಣೇಶ ಮೆರವಣಿಗೆ ವೇಳೆ ಪಟಾಕಿ ಹೊಡೆಯುವುದನ್ನು ನಿಷೇಧಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು ‘ಮದುವೆ, ರಾಜಕೀಯ ಕಾರ್ಯಕ್ರಮದಲ್ಲೂ ಪಟಾಕಿ ಹೊಡೆಯುವುದು ನಿಷೇಧವಾಗಿದೆ ಎಂದು ಹೇಳಿದರು.
ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದ್ದು, ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದೆ. ಪಟಾಕಿ ಸಿಡಿಸುವಾಗ ನಿಯಮ ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಗ್ರೀನ್ ಕ್ರ್ಯಾಕರ್ಸ್ ಮಾತ್ರ ಮಾರಾಟಕ್ಕೆ ಸುಪ್ರೀಂ ಹೇಳಿಕೆ ನೀಡಿದ್ದು, ‘ಹಸಿರು ಪಟಾಕಿ ಮಾರಾಟ ಮಾಡುತ್ತಿರುವವ ವಿರುದ್ಧ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ‘ಕಂಡೀಷನ್ ನ ಅನುರಿಸದವರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದೇನೆ, ಇನ್ಮುಂದೆ ಕಠಿಣವಾಗಿ ಸುಪ್ರೀಂ ಆದೇಶವನ್ನ ಪಾಲಿಸಬೇಕು. ಈ ಎಲ್ಲ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು
The post CM Siddaramaiah: ಪಟಾಕಿ ಸಿಡಿಸುವಾಗ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ appeared first on Ain Live News.