ನವದಹಳ್ಳಿ : ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ರಾಹುಲ್ ಗಾಂಧಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿಲ್ಲಿಯ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಜಿ.ಪರಮೇಶ್ವರ್, ಎಚ್.ಸಿ.ಮಹದೇವಪ್ಪ, ರಾಜ್ಯ ಸರಕಾರದ ದಿಲ್ಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರುಗಳಾದ ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ಕಮಾದು, ಹರೀಶ್ ಗೌಡ, ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು.